ಕಾಲಮಿತಿಯಲ್ಲಿ ಕೆರೆ ಅಭಿವೃದ್ಧಿ ಅನುಮಾನ
Team Udayavani, Apr 27, 2019, 2:43 PM IST
ರಾಣಿಬೆನ್ನೂರ: ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಜನ-ಜಾನುವಾರು ಪರಿತಪಿಸುವುದು ಸಾಮಾನ್ಯ ಎನ್ನವುಂತಾಗಿದ್ದು, ನೀರಿನ ಬವಣೆ ನೀಗಿಸಲು ಗಂಗಾಜಲ ದೊಡ್ಡ ಕೆರೆ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಕಾಮಗಾರಿ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ.
ಕೇಂದ್ರ ಪುರಸ್ಕೃತ ಅಮೃತ್ ಯೋಜನೆಯಡಿ 29.82 ಕೋಟಿ ರೂ. ಅನುದಾನದಲ್ಲಿ 2018ರ ಅ. 5ರಂದು ಶಾಸಕ ಆರ್. ಶಂಕರ್ ಹಾಗೂ ಸಂಸದ ಶಿವಕುಮಾರ ಉದಾಸಿ ಅವರು ಗಂಗಾಜಲ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕಾಮಗಾಗಾರಿ ಪ್ರಾರಂಭವಾಗಿ 6 ತಿಂಗಳು ಗತಿಸಿದರೂ ಶೇ.20ರಷ್ಟು ಸಹ ಕಾಮಗಾರಿ ನಡೆದಿಲ್ಲ. ಕೆಲ ದಿನಗಳಿಂದ ಕಾಮಗಾರಿಯೂ ಸ್ಥಗಿತಗೊಂಡಿದ್ದು, 24 ತಿಂಗಳಲ್ಲಿ ಪೂರ್ಣಗೊಳಿಸಬೇಕಿದ್ದ ಕಾಮಗಾರಿ ನಿರೀಕ್ಷಿತ ಕಾಲಮಿತಿಯೊಳಗೆ ಪೂರ್ಣಗೊಳ್ಳುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎದುರಾಗಿದೆ ಎಂದು ಸಾರ್ವಜನಿಕರು ದೂರುವಂತಾಗಿದೆ.
260 ಎಕರೆ ವಿಶಾಲ ಪ್ರದೇಶದಲ್ಲಿ ಕೆರೆ ನಿರ್ಮಾಣ ನಡೆಯುತ್ತಿದ್ದು, ತಾಲೂಕಿನ ಹಲವು ಗ್ರಾಮಗಳಿಗೆ ಅನುಕೂಲವಾಗಲಿದೆ. ಜಿಲ್ಲಾಡಳಿತ, ನಗರಸಭೆ, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಕೇಂದ್ರ ಸರ್ಕಾರದ ಹಣಕಾಸು ನಿಗಮ ಶೇ.50, ರಾಜ್ಯ ಸರ್ಕಾರ ಶೇ.30, ನಗರಸಭೆ ಶೇ.20 ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 29.82 ಕೋಟಿ ರೂ. ಅನುದಾನದಲ್ಲಿ ಕೆರೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.
ಕೆರೆಯ ಹೂಳು ತೆಗೆದು. ಏರಿ ಅಭಿವೃದ್ಧಿ ಪಡಿಸುವುದು. ವಿಹಾರಕ್ಕಾಗಿ ವಾಕಿಂಗ್ ಪಾಥ್, ಕೆರೆ ಸಂಪರ್ಕಕಕ್ಕೆ ರಸ್ತೆ ಅಭಿವೃದ್ಧಿ ಪಡಿಸುವುದು. ಕೆರೆಯ ಸೀಮಾ ರೇಖೆ ಗುರುತು ಮಾಡುವುದು, ಜಲಾನಯನ ಪ್ರದೇಶ ಅಭಿವೃದ್ಧಿ ಪಡಿಸುವುದು. ಕೆರೆಯ ಸುತ್ತ ಗಿಡ-ಮರ ಬೆಳೆಸುವುದು. ಕೆರೆಯಿಂದ ಶುದ್ಧಿಕರಣ ಘಟಕಕ್ಕೆ ನೀರು ಸರಬರಾಜು ಮಾಡಿ ಬೇಸಿಗೆ ಕಾಲದಲ್ಲಿ ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಕುರಿತು ನೀಲಿ ನಕ್ಷೆ ತಯಾರಿಸಿ ಲಕ್ಷ್ಮೀ ಸಿವಿಲ್ ಎಂಜಿನಿಯರಿಂಗ್ ಕಂಪನಿಗೆ ಗುತ್ತಿಗೆ ನೀಡಲಾಗಿದ್ದು, 24 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಕರಾರು ಮಾಡಲಾಗಿದೆ. ಆದರೆ, ಕಾಮಗಾರಿ ಆರಂಭಗೊಂಡು 6 ತಿಂಗಳು ಗತಿಸಿದರೂ ಶೇ.20ರಷ್ಟು ಸಹ ಕಾಮಗಾರಿ ಮುಗಿಯದಿರುವುದರಿಂದ ಜನತೆಗೆ ನಿರಾಸೆ ಮೂಡಿಸುತ್ತಿದೆ.
ಪ್ರವಾಸಿತಾಣಕ್ಕೆ ಒತ್ತು: ಕೆರೆಯ ಸುತ್ತಮುತ್ತ ಗಿಡ-ಮರಗಳನ್ನು ಬೆಳೆಸಿ ವಾಯುವಿಹಾರಕ್ಕೆ ಹಚ್ಚ ಹಸಿರಿನ ವಾತಾವರಣ ನಿರ್ಮಾಣ ಮಾಡಲಾಗುವುದು. ಪ್ರವಾಸಿಗರಿಗಾಗಿ ಬೊಟಿಂಗ್ ವ್ಯವಸ್ಥೆ, ಪಕ್ಷಿಗಳ ವಾಸತಾಣ, ಪ್ರವಾಸಿಗರನ್ನು ಸೆಳೆಯಲು ಕೆರೆಯ ಮಧ್ಯದಲ್ಲಿ ದ್ವೀಪದಂತೆ ನಡುಗಡ್ಡೆ ನಿರ್ಮಿಸಿ ಗಿಡಗಳನ್ನು ನೆಡುವುದು. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿ ಪ್ರವಾಸಿ ತಾಣಕ್ಕೆ ವಿಶೇಷ ಒತ್ತು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.