ಕಲಿವಾಳಕ್ಕಿದೆ ‘ಯೋಧರ ಗ್ರಾಮ’ ಕೀರ್ತಿ

•ದೇಶ ರಕ್ಷಣೆಗೆ ಮಕ್ಕಳನ್ನು ಕಳುಹಿಸಿದ ತಂದೆ-ತಾಯಂದಿರೇ ಧನ್ಯ: ಓಲೇಕಾರ

Team Udayavani, May 8, 2019, 1:31 PM IST

haveri-tdy-3..

ಸವಣೂರು: ಕಲಿವಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಜರುಗಿದ ಮಾಜಿ ಹಾಗೂ ಹಾಲಿ ಸೈನಿಕರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಯೋಧರನ್ನು ಸನ್ಮಾನಿಸಲಾಯಿತು.

ಸವಣೂರು: ದೇಶ ರಕ್ಷಣೆಗೆ ಕಲಿವಾಳ ಗ್ರಾಮದ ತಂದೆ ತಾಯಂದಿರು ತಮ್ಮ ಮಕ್ಕಳನ್ನು ಸೇನೆ ಸೇರಿಸುವ ಮೂಲಕ ಯೋಧರ ಗ್ರಾಮ ಎಂದು ರಾಷ್ಟ್ರದ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿ ಜಿಲ್ಲೆಗಿದೆ. ಈ ಶ್ರೇಯಸ್ಸು ಗ್ರಾಮದ ಯೋಧರ ತಂದೆ, ತಾಯಂದಿರಿಗೆ ಸಲ್ಲುತ್ತದೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಹೇಳಿದರು.

ತಾಲೂಕಿನ ಕಲಿವಾಳ ಗ್ರಾಮದ ಶ್ರೀ ಗೋಣಿಬಸವೇಶ್ವರ ರಥೋತ್ಸವ ನಿಮಿತ್ತ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ಜರುಗಿದ ಮಾಜಿ ಹಾಗೂ ಹಾಲಿ ಸೈನಿಕರ ಸಂಘದ ಉದ್ಘಾಟನೆ ಹಾಗೂ ಗ್ರಾಮದ ಮಾಜಿ ಹಾಗೂ ಹಾಲಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಷ್ಟ್ರ ರಕ್ಷಣೆಗಾಗಿ ಕಲಿವಾಳ ಗ್ರಾಮದಿಂದ ನೂರಾರು ಯೋಧರು ಸೇನೆ ಸೇರಿರುವುದು ಶ್ಲಾಘನೀಯ. ಇಂತಹ ಗ್ರಾಮ ಹಾವೇರಿ ಜಿಲ್ಲೆಯಲ್ಲಿರುವುದು ನಮ್ಮೆಲ್ಲರ ಹೆಮ್ಮೆ. ಇಂದಿಗೂ ಗ್ರಾಮದ 35ಕ್ಕೂ ಹೆಚ್ಚು ಯೋಧರು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸುಮಾರು 60ಕ್ಕೂ ಹೆಚ್ಚು ಯೋಧರು ನಿವೃತ್ತಿಯಾಗಿದ್ದಾರೆ. ಈ ಗ್ರಾಮದ ಮಣ್ಣಿನಲ್ಲಿರುವ ರಾಷ್ಟ್ರ ಭಕ್ತಿಯ ಕಂಪು ದೇಶಕ್ಕೆ ಮಾದರಿಯಾಗಿದೆ ಎಂದರು.

ಶಿಗ್ಗಾವಿ ವಿರಕ್ತಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭಾರತೀಯ ಸೇನೆಯ ಲೆಪ್ಟಿನೆಂಟ್ ಕರ್ನಲ್ ಕರಬಸಪ್ಪ ಗುರಣ್ಣನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಪಂ ಸದಸ್ಯ ಶಿವರಾಜ ಅಮರಾಪೂರ, ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ, ಸದಸ್ಯ ಬಸವರಾಜ ಕಳಸದ, ಹಾವೇರಿ ಜಿಲ್ಲೆಯ ಮಾಜಿ ಹಾಗೂ ಹಾಲಿ ಯೋಧರು ಇದ್ದರು.

ನಿವೃತ್ತ ಶಿಕ್ಷಕರಿಗೆ ಹಾಗೂ 2018-19ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಕಲಿವಾಳ ಗ್ರಾಮದ ಪಿಯುಸಿ ಹಾಗೂ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ನಿಮಿತ್ತ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೂವಿನಶಿಗ್ಲಿಯ ಡಾ| ಎನ್‌.ಬಿ.ನಾಗರಹಳ್ಳಿ ಸೇನಾಭಿಮಾನಿಗಳು ಹಾಗೂ ನುರಿತ ವೈದ್ಯರ ತಂಡ ತಪಾಸಣೆ ನಡೆಸಿದರು.

112ಕ್ಕೂ ಅಧಿಕ ಜನ ಶಿಬಿರದ ಸದುಪಯೋಗಪಡೆದುಕೊಂಡರು. ನಂತರ, ಕೊತಬಾಳದ ಜಾನಪದ ನೃತ್ಯ ಕಲಾ ತಂಡದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.