ಮಳೆಯಿಂದ ಹಿಂಗಾರು ಹಂಗಾಮಿಗೂ ಕುತ್ತು !

ಆಗಾಗ ಸುರಿಯುವ ಮಳೆಯಿಂದ ಹಿಂಗಾರು ಬಿತ್ತನೆಗೂ ಹಿನ್ನಡೆ-ಅನ್ನದಾತರಿಗೆ ಆತಂಕ

Team Udayavani, Oct 20, 2022, 4:03 PM IST

22

ಹಾವೇರಿ: ಪ್ರಸಕ್ತ ವರ್ಷ ಮುಂಗಾರು ಅವಧಿಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಬೆಳೆಗಳು ನೆಲಕಚ್ಚಿ ರೈತರು ನಷ್ಟ ಅನುಭವಿಸಿದ್ದು ಒಂದಡೆಯಾದರೆ, ಸದ್ಯ ಹಿಂಗಾರು ಹಂಗಾಮು ಆರಂಭಗೊಂಡಿದ್ದರೂ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದಾಗಿ ಹಿಂಗಾರು ಬಿತ್ತನೆಗೂ ಹಿನ್ನಡೆಯಾಗುತ್ತಿದೆ. ಹೀಗಾಗಿ, ರೈತರು ಎರಡೂ ಹಂಗಾಮಿನ ಬೆಳೆ ಕಳೆದುಕೊಳ್ಳುವ ಆತಂಕದ ಸ್ಥಿತಿ ಎದುರಿಸುವಂತಾಗಿದೆ.

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅದರಲ್ಲೂ ಕಳೆದ ಎರಡು ತಿಂಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು, ಸುಮಾರು ಒಂದು ಲಕÒ‌ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲಾದ್ಯಂತ ಮಳೆಯಾಗುತ್ತಲೇ ಇದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕೆಜೋಳ, ಸೋಯಾ, ಶೇಂಗಾ ಇತ್ಯಾದಿ ಬೆಳೆ ಕಟಾವು ಇನ್ನೂ ಮುಗಿದಿಲ್ಲ. ವಾಡಿಕೆಯಂತೆ ಈಗ ಹಿಂಗಾರು ಬಿತ್ತನೆ ಶುರುವಾಗಬೇಕಿತ್ತು. ಆದರೆ, ಮಳೆ ಬಿಡದೇ ಸುರಿಯುತ್ತಿರುವುದರಿಂದ ಹಿಂಗಾರು ಬಿತ್ತನೆ ವಿಳಂಬವಾಗಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ.

70 ಸಾವಿರ ಹೆಕ್ಟೇರ್‌ ಗುರಿ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ 70 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿಯಿದೆ. ಈಗಾಗಲೇ ಸಬ್ಸಿಡಿ ದರದಲ್ಲಿ ರೈತರಿಗೆ ಬಿತ್ತನೆ ಬೀಜವನ್ನು ಕೃಷಿ ಇಲಾಖೆ ಮೂಲಕ ವಿತರಿಸಲಾಗುತ್ತಿದೆ. ಹಿಂಗಾರಿ ಜೋಳ, ಶೇಂಗಾ, ಕಡಲೆ, ಹೆಸರು, ಗೋವಿನಜೋಳ ಬಿತ್ತನೆ ಶುರುವಾಗಬೇಕಿತ್ತು. ಆದರೆ, ಜಿಲ್ಲೆಯಲ್ಲಿ ಹೆಚ್ಚಿನ ಪ್ರದೇಶದಲ್ಲಿ ಬೆಳೆಯುವ ಜೋವಿನಜೋಳ ಕಟಾವಿಗೆ ಸಾಧ್ಯವಾಗುತ್ತಿಲ್ಲ. ನಿರಂತರ ಮಳೆಯಿಂದ ರೈತರು ಜೋಳ ಕಟಾವು ಮಾಡಿಲ್ಲ. ಅಲ್ಲದೇ ಹೊಲಗಳಲ್ಲಿ ನೀರು ನಿಂತು, ತೇವಾಂಶ ಅಧಿಕವಾಗಿ ಕಾಲಿಡಲೂ ಸಾಧ್ಯವಾಗದ ಪರಿಸ್ಥಿತಿಯಿದೆ. ಇದರಿಂದ ಹೊಸದಾಗಿ ಬಿತ್ತನೆ ಆರಂಭಿಸುವುದು ಸಾಧ್ಯವಿಲ್ಲ. ಒಂದು ವಾರ ಬಿಸಿಲು ಬಿದ್ದರಷ್ಟೇ ಹೊಲಗಳ ತೇವಾಂಶ ಕಡಿಮೆಯಾಗಿ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಆರಂಭಿಸಬಹುದಾಗಿದೆ. ಇನ್ನೂ ಮಳೆ ಮುಂದುವರಿದರೆ ಹಿಂಗಾರು ಹಂಗಾಮು ಆರಂಭವೇ ವಿಳಂಬವಾಗಲಿದೆ.

ಹೊಲದಲ್ಲಿ ಹೆಚ್ಚುತ್ತಿರುವ ಕಳೆ: ನಿರಂತರ ಸುರಿದ ಮಳೆಯಿಂದ ಹೊಲಗಳಲ್ಲಿ ಕಳೆ ವ್ಯಾಪಕವಾಗಿ ಬೆಳೆದಿದೆ. ಬೆಳೆಗಳ ಮಧ್ಯೆ ಬೆಳೆದಿದ್ದ ಕಳೆ ಕೀಳಲು ಸಹ ರೈತರಿಂದ ಆಗಿರಲಿಲ್ಲ. ಈಗ ಅದು ದೊಡ್ಡದಾಗಿ ಬೆಳೆದಿದ್ದು, ಕಳೆ ನಾಶಪಡಿಸುವುದೇ ರೈತರಿಗೆ ಸವಾಲಾಗಿ ಪರಿಣಮಿಸಿದೆ. ಮುಂಗಾರು ಹಂಗಾಮಿನ ಬೆಳೆ ಕೈಗೆ ಸಿಗದೇ ರೈತರು ಸಂಕಷ್ಟದಲ್ಲಿದ್ದಾರೆ. ಅಳಿದುಳಿದ ಬೆಳೆಯನ್ನೂ ಕಟಾವು ಮಾಡಲಾಗದೇ ರೈತರು ಪರಿತಪಿಸುತ್ತಿದ್ದಾರೆ. ಸಾಲಸೂಲ ಮಾಡಿ ಹಾಕಿದ್ದ ಗೊಬ್ಬರ, ಬಿತ್ತನೆ ಬೀಜದ ಖರ್ಚು ಕೂಡ ರೈತರಿಗೆ ಸಿಗುವ ಸಾಧ್ಯತೆ ಕಡಿಮೆಯಿದೆ. ಈಗ ಕಳೆ ಕೀಳಲು ಕೂಲಿ ಕೊಡುವ ಶಕ್ತಿ ಕೂಡ ರೈತರಿಗಿಲ್ಲ. ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಕೈಕೊಟ್ಟಿದ್ದು, ಹಿಂಗಾರು ಬೆಳೆಯನ್ನಾದರೂ ಬೆಳೆಯಬೇಕೆಂದರೆ ಮಳೆ ಬಿಡುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಸದ್ಯಕ್ಕೆ ಹೊಲಗದ್ದೆಗಳಲ್ಲಿ ಅಧಿಕ ತೇವಾಂಶವಿದ್ದು, ಈಗಲೇ ಬಿತ್ತನೆ ಆರಂಭಿಸುವುದು ಸೂಕ್ತವಲ್ಲ. ಇದರಿಂದ ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆಯುವುದು ಕಷ್ಟ. ಅಲ್ಲದೇ, ಕೀಟ ಹಾಗೂ ರೋಗ ಬಾಧೆಯೂ ಅ ಧಿಕವಾಗುವ ಸಾಧ್ಯತೆಯಿದೆ. ಮುಂಗಾರು ಬೆಳೆ ಕಳೆದುಕೊಂಡಿರುವ ರೈತರು ಈಗ ಅವಸರ ಮಾಡಿದೇ ಒಂದೆರಡು ವಾರ ಕಾದು ನೋಡಿ ಬಿತ್ತನೆಗೆ ಮುಂದಾಗಬೇಕು.  –ಅಶೋಕ ಪಿ., ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ

ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ ಬೆಳೆಗಳು ಹಾನಿಗೊಂಡು ಅಪಾರ ನಷ್ಟ ಅನುಭವಿಸುವಂತಾಗಿದೆ. ಅಳೆದುಳಿದ ಬೆಳೆಗಳನ್ನು ಕಟಾವು ಮಾಡಿಕೊಳ್ಳಲು ಸಹ ಮಳೆ ಬಿಡುವು ನೀಡುತ್ತಿಲ್ಲ. ಅಲ್ಲದೇ, ಸದ್ಯ ಹಿಂಗಾರು ಹಂಗಾಮು ಶುರುವಾಗಿದ್ದರೂ ಹೊಲಗಳನ್ನು ಸ್ವತ್ಛಗೊಳಿಸಲು ಸಾಧ್ಯವಾಗಿಲ್ಲ. ನಿರಂತರ ಮಳೆಯಿಂದಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದ್ದು, ಹಿಂಗಾರು ಬಿತ್ತನೆ ಸಹ ಸಾಧ್ಯವಾಗಿಲ್ಲ.  –ಶಿವಪ್ಪ ಅರಳಿ, ರೈತರು

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.