ಬೆಂಕಿ ಆರಿಸಲು ಹೋದ ಯುವಕ ಗಂಭೀರ
Team Udayavani, May 19, 2019, 12:54 PM IST
ಹಾನಗಲ್ಲ: ಶಾಲೆಯ ಪಕ್ಕದಲ್ಲಿನ ಭತ್ತದ ಬಣವೆಗೆ ಬೆಂಕಿ ಹತ್ತಿ ಶಾಲೆಗೂ ಬೆಂಕಿ ಬೀಳುತ್ತಿರುವುದನ್ನು ತಪ್ಪಿಸಲು ಹೋದ ಯುವಕನೋರ್ವ ಬೆಂಕಿ ಹತ್ತಿದ್ದ ಬಣವೆಗೆ ಬಿದ್ದು ತೀವ್ರ ಸುಟ್ಟು ಗಾಯಗೊಂಡ ಘಟನೆ ತಾಲೂಕಿನ ಯಲಿವಾಳ ಗ್ರಾಮದಲ್ಲಿ ಸಂಭವಿಸಿದೆ.
ಯಲಿವಾಳ ಗ್ರಾಮದ ಯಲ್ಲಪ್ಪ ಕುರುಬರ ಅವರಿಗೆ ಸೇರಿದ ಸುಮಾರು ಏಳು ಎಕರೆ ಭತ್ತದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿದ್ದು, ಆ ಬೆಂಕಿ ಪಕ್ಕದ ಶಾಲೆಗೂ ಆವರಿಸುತ್ತಿರುವುದನ್ನು ಗಮನಿಸಿದ ಯುವಕರು, ಶಾಲೆಗೆ ಬೆಂಕಿ ಬಿಳುವುದನ್ನು ತಪ್ಪಿಸಲು ಶಾಲೆಯ ಮೇಲ್ಛಾವಣಿ ಮೇಲೆ ಹತ್ತಿ ಬೆಂಕಿ ಆರಿಸಲು ಮುಂದಾಗಿದ್ದರು. ಈ ವೇಳೆ ಮಾರುತಿ ದೇವೇಂದ್ರಪ್ಪ ರಂಗಣ್ಣನವರ(23) ಎಂಬ ಯುವಕ ಆಯತಪ್ಪಿ ಬೆಂಕಿ ಬಿದ್ದ ಬಣವೆಯೊಳಗೆ ಬಿದ್ದು ತೀವ್ರವಾಗಿ ಸುಟ್ಟು ಗಾಯಗೊಂಡಿದ್ದಾನೆ. ತಕ್ಷಣ ಗ್ರಾಮಸ್ಥರು ಆತನನ್ನು ಶಿಗ್ಗಾವಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮಾರುತಿಯನ್ನು ಹುಬ್ಬಳ್ಳಿ ಕಿಮ್ಸಗೆ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇ.60 ದೇಹ ಸುಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ವೈದ್ಯರು ಸುದ್ದಿಗಾರರಿಗೆ ತಿಳಿಸಿದರು. ಈ ಕುರಿತು ಗಾಯಾಳುವಿನ ಸೋದರ ಸಂಬಂಧಿ ಅಣ್ಣಪ್ಪ ರಂಗಣ್ಣನವರ ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.