ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯ ಮರೆ
ಅಂಕ ಗಳಿಕೆ-ಉದ್ಯೋಗಾವಕಾಶಕಷ್ಟೇ ಸೀಮಿತಗೊಂಡ ಪ್ರಸ್ತುತ ಶಿಕ್ಷಣ ವ್ಯವಸ್ಥೆ
Team Udayavani, Jun 3, 2019, 2:50 PM IST
ಹಾವೇರಿ: ಸರ್ ಎಂ.ವಿಶ್ವೇಶ್ವರಯ್ಯ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.
ಹಾವೇರಿ: ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯಗಳು ಕಾಣೆಯಾಗಿದ್ದು, ಮಕ್ಕಳಲ್ಲಿ ಕೇವಲ ಅಂಕ ಗಳಿಕೆ ಹಾಗೂ ಉದ್ಯೋಗ ಹಿಡಿಯಲು ಮಾತ್ರ ಸೀಮಿತವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ವಿಷಾಧಿಸಿದರು.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಭಾಭವನ ಹಾಗೂ ಬೋಧನಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಪ್ರಸ್ತುತ ಆಧುನಿಕ ಶಿಕ್ಷಣ ವ್ಯವಸ್ಥೆ ಸಂಸ್ಕೃತಿಯ ಜತೆಗೆ ನೈತಿಕತೆ ಮೌಲ್ಯ ಕಳೆದುಕೊಂಡಿದೆ. ಇಂದಿನ ಕಾಲದ ಶಿಕ್ಷಣಕ್ಕೂ ಹಿಂದಿನ ಕಾಲದಲ್ಲಿ ಕಲಿತ ಶಿಕ್ಷಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಿಂದಿನ ಕಾಲದಲ್ಲಿ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿರಲಿಲ್ಲ. ಆದರೆ, ಇಂದು ಕಾಲ ಬದಲಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಕೋಟ್ಯಾಂತರ ವೆಚ್ಚ ಮಾಡುತ್ತಿದ್ದಾರೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಡಾ| ಶ್ರೀಶೈಲ ಹುದ್ದಾರ ಮಾತನಾಡಿ, ಜನಪದಕ್ಕೆ ನಮ್ಮ ಬದುಕನ್ನು ಶ್ರೀಮಂತಗೊಳಿಸುವ ಶಕ್ತಿ ಇದೆ. ಭಾಷೆ ಮತ್ತು ಬದುಕು ಸಮೀಕರಣಗೊಂಡಿರುವ ಜನಪದ ನಮ್ಮ ಪೂರ್ವಜರ ಬದುಕಿನ ಅವಿಭಾಜ್ಯ ಅಂಗವಾಗಿತ್ತು. ಮಾತು ಮತ್ತು ಅದರಲ್ಲಿರುವ ಭಾವಾರ್ಥದ ಮೇಲೆ ನಮ್ಮ ಬದುಕು ಅವಲಂಬಿಸಿರುತ್ತದೆ ಎಂದರು.
ಹಿರೇಕೆರೂರಿನ ಸರ್ವಜ್ಞ ಸ್ಮಾರಕ ಸಮಿತಿ ಅಧ್ಯಕ್ಷ ಎಸ್.ಎಸ್. ಪಾಟೀಲ, ಸಂಸ್ಥೆಯ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿದರು.
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿಹಾಗೂ ಅಗಡಿ ಆನಂದವನದ ಗುರುದತ್ತಮೂರ್ತಿ ಚಕ್ರವರ್ತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಧಾರವಾಡದ ನಿವೃತ್ತ ಪ್ರಾಧ್ಯಾಪಕ ಕೆ.ಎಸ್. ಕೌಜಲಗಿ, ಕಾಳಿದಾಸ ಪ್ರೌಢಶಾಲೆ ಅಧ್ಯಕ್ಷ ಎಸ್‌ಎಫ್‌ಎನ್ ಗಾಜೀಗೌಡ್ರ, ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ಶಾಂತಪ್ಪ ಇಟಗಿ, ಆರ್. ಪ್ರತಾಪ, ಬಸವರಾಜ ಬೆಳವಡಿ, ರಾಜಶೇಖರ ಕಲ್ಲಮ್ಮನವರ ಮತ್ತು ಉಳಿವೆಪ್ಪ ಹಲಗಣ್ಣನವರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.