![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 24, 2019, 1:20 PM IST
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಇತ್ತೀಚೆಗೆ ಸವಣೂರು ತಾಲೂಕಿನ ಆಯ್ದ ಭಾಗಗಳಲ್ಲಿ 18 ಅಂಗಡಿಗಳ ಮೇಲೆ ದಾಳಿ ನಡೆಸಿ 1230 ರೂ. ದಂಡ ವಸೂಲಿ ಮಾಡಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿಯಲ್ಲಿ 18 ಅಂಗಡಿಗಳ ಮಾಲೀಕರಿಂದ 1230 ರೂ. ದಂಡ ವಸೂಲಿ ಮಾಡಲಾಗಿದೆ. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ| ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ಜಿ.ವಿ.ಕುಂದಗೋಳ, ತಾಲೂಕು ಆರೋಗ್ಯ ಕಚೇರಿ ಹಾಗೂ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಇತರರು ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.