ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Team Udayavani, Dec 22, 2022, 9:51 PM IST
ಹಾವೇರಿ: ತಾಯಿ, ಮಗ ಮತ್ತು ಗರ್ಭಿಣಿ ಸೊಸೆ ಸಹಿತ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಭಾರತಿ ಕಮದೊಳ್ಳಿ (40), ಕಿರಣ್ (21) ಹಾಗೂ ಸೌಜನ್ಯಾ (20) ಆತ್ಮಹತ್ಯೆ ಮಾಡಿಕೊಂಡವರು. ಕೆಲಸಕ್ಕೆ ಹೋಗಿದ್ದ ಮನೆಯ ಯಜಮಾನ ವಿರೂಪಾಕÒಪ್ಪ ಕಮದೊಳ್ಳಿ ಅವರು ಸಂಜೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ?:
ಅಗಡಿ ಗ್ರಾಮದ ವಿರೂಪಾಕÒಪ್ಪ ಅವರದ್ದು ತುಂಬು ಕುಟುಂಬವಾಗಿದ್ದು, ಎಲ್ಲರೂ ಅನ್ಯೋನ್ಯವಾಗಿದ್ದರು. ಕೆಲವು ತಿಂಗಳ ಹಿಂದಷ್ಟೇ ಹಿರಿಯ ಮಗ ಕಿರಣ್ಗೆ ವಿವಾಹವಾಗಿದ್ದು, ಸೊಸೆ ಸೌಜನ್ಯಾ ಗರ್ಭಿಣಿಯಾಗಿದ್ದಳು. ಮತ್ತೂಬ್ಬ ಮಗ ಅರುಣ ಎಂಬಾತ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇದಕ್ಕೆ ಯುವತಿ ಕಡೆಯವರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರೀತಿಸಿದ ಯುವತಿಯೊಂದಿಗೆ ಅರುಣ್ ಮನೆಬಿಟ್ಟು ತೆರಳಿದ್ದ. ಇದರಿಂದ ಯುವತಿ ಕಡೆಯವರಿಂದ ಕಿರುಕುಳ ಆರಂಭವಾಗಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತು ಮೂವರು ಈ ಕೃತ್ಯ ಎಸಗಿರಬೇಕು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.