ಬೆಳೆವಿಮೆ ಹಣ ಬಾರದೇ ರೈತರಿಗೆ ಅನ್ಯಾಯ


Team Udayavani, Aug 26, 2019, 11:36 AM IST

hv-tdy-2

ರಾಣಿಬೆನ್ನೂರ: ಬೆಳೆವಿಮೆ ಬಾರದೆ ಅನ್ಯಾಯವಾಗಿದೆ ಎಂದು ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರ: ತಾಲೂಕಿನಲ್ಲಿ 2017-18 ಮತ್ತು ಪ್ರಸಕ್ತ ಸಾಲಿಗೆ 1599 ಕ್ಕೂ ಹೆಚ್ಚು ರೈತರು ವಿಮಾ ಕಂತು ತುಂಬಿದ್ದರೂ ಬೆಳೆ ವಿಮಾ ಹಣ ಬಾರದೇ ಅನ್ಯಾಯವಾಗಿದೆ. ಬೆಳೆವಿಮೆ ತುಂಬಿದ ಎಲ್ಲ ರೈತರಿಗೂ ತಕ್ಷಣವೇ ಬೆಳೆ ವಿಮಾ ಪರಿಹಾರ ಮೊತ್ತ ಬಿಡುಗಡೆ ಮಾಡಿಸಿಕೊಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಬೆಳೆ ವಿಮೆ ಬಿಡುಗಡೆ ಕುರಿತು ನಡೆದ ಸಭೆಯಲ್ಲಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕಿನಲ್ಲಿ ಬೆಳೆವಿಮೆ ಸಮಸ್ಯೆ ಸೇರಿದಂತೆ ಸರ್ಕಾರದಿಂದ ಬಂದಿರುವ ಪರಿಹಾರದ ಹಣ ಸಹಿತ ಸಾಲದ ಅಕೌಂಟ್‌ಗಳಿಗೆ ಜಮೆ ಮಾಡಿಕೊಂಡಿದ್ದಾರೆ. ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಹಣವನ್ನು ಬಿಟ್ಟಿಲ್ಲ. ಬ್ಯಾಂಕ್‌ ವ್ಯವಸ್ಥಾಪಕರು ತಮಗೆ ತಿಳಿಯದಂತೆ ಖಾತೆಯಲ್ಲಿನ ಹಣ ಸಾಲದ ಖಾತೆಗೆ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ರೈತ ಕಷ್ಟ ಅನುಭವಿಸುತ್ತಿದ್ದಾನೆ. ರೈತನಿಗೆ ಆದ ಅನ್ಯಾಯ ಸರಿಪಡಿಸಿ, ನ್ಯಾಯ ಒದಗಿಸಬೇಕೆಂದು ಕಂದಾಯ ಅಧಿಕಾರಿ, ಬ್ಯಾಂಕ್‌ ವ್ಯವಸ್ಥಾಪಕರು ಹಾಗೂ ಇನ್ಸೂರೆನ್ಸ್‌ ಕಂಪನಿ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹಿಸಿದರು.

ರೈತರಿಗೆ ಬೆಳೆವಿಮೆ ಹಣ ಬಾರದಿರಲು ಅನೇಕ ಕಾರಣಗಳಿವೆ. ಯುನಿಯನ್‌ ಬ್ಯಾಂಕಿನಿಂದ 1528 ರೈತರು ಜೋಹಿಸರಹರಳಹಳ್ಳಿ ಯುನಿಯನ್‌ ಬ್ಯಾಂಕಿನಿಂದ 71 ರೈತರು ಬೆಳೆ ವಿಮೆ ತುಂಬಿದ್ದಾರೆ. ಯಾರಿಗೂ ವಿಮೆ ಹಣವೇ ಬಿಡುಗಡೆಯಾಗಿಲ್ಲ. ಬೆಳೆವಿಮೆ ಹಣ ಬಿಡುಗಡೆಯಾಗದಿದ್ದರೆ. 1599 ರೈತರನ್ನು ಕರೆದುಕೊಂಡು ಬಂದು ಬ್ಯಾಂಕ್‌ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಯೂನಿಯನ್‌ ಬ್ಯಾಂಕ್‌ ವ್ಯವಸ್ಥಾಪಕ ವಸಂತರಾವ್‌ ಪಾಟೀಲ ಹಾಗೂ ಸತ್ಯನಾರಾಯಣ ಅವರೊಂದಿಗೆ ಚರ್ಚಿಸಿದ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ, ರೈತರೊಂದಿಗೆ ನಿಮ್ಮ ಬ್ಯಾಂಕಿನ ವ್ಯಾಪ್ತಿಗೆ ಬರುವ ಶಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಆದೇಶಿಸಿದರು.

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡದೆ ಒಟಿಎಸ್‌ ಸೌಲಭ್ಯ ಕಲ್ಪಿಸಿ ಸಾಲಮರುಪಾವತಿಸಿಕೊಳ್ಳುತ್ತಿದ್ದಾರೆ. ಇದೇ ರೀತಿ ಎಲ್ಲ ಬ್ಯಾಂಕಿನಲ್ಲಿಯೂ ಮರುಪಾವತಿ ಯೋಜನೆಗಳು ಜಾರಿಗೆ ತರಬೇಕು. ರೈತರಿಗೆ ಅನುಕೂಲ ಮಾಡಿಕೊಟ್ಟರೆ ಯಾವೊಬ್ಬ ರೈತರು ಆತ್ಮಹತ್ಯೆಯಂತಹ ಹಾದಿ ಹಿಡಿಯುವುದಿಲ್ಲ. ಎಲ್ಲ ಬ್ಯಾಂಕನಲ್ಲಿಯೂ ಇಂತಹ ರೈತಪರ ಯೋಜನೆಗಳು ಜಾರಿಗೆಯಾಗಬೇಕಾಗಿದೆ ಎಂದರು.

ರೈತ ಮುಖಂಡ ರವೀಂದ್ರಗೌಡ ಪಾಟೀಲ, ಎಸ್‌.ಡಿ.ಹಿರೇಮಠ, ಸುರೇಶಪ್ಪ ಗರಡಿಮನಿ, ಹರಿಹರಗೌಡ ಪಾಟೀಲ, ರಾಜು ದೊಡ್ಡಮನಿ, ಸುರೇಶ ಹುಚ್ಚುನಗೌಡ್ರ, ಜಗದೀಶ ಕೆರೂಡಿ, ಕರಬಸಪ್ಪ ಮೇಗಳಮನಿ, ದೇವರೆಡ್ಡ ಎರೆಕುಪ್ಪಿ, ಜಮಾಲಸಾಬ ಶೇತಸನದಿ, ಮಂಜು ಕಂಚಿಕೇರಿ, ಶಿವಪುತ್ರಪ್ಪ ಮಲ್ಲಾಡದ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.