ವಾಲ್ಮೀಕಿ ಜಾತ್ರಾ ಮಹೋತ್ಸವ ಕರಪತ್ರ ಬಿಡುಗಡೆ
Team Udayavani, Nov 10, 2019, 5:01 PM IST
ರಾಣಿಬೆನ್ನೂರ: ನಗರದ ಗಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ತಾಲೂಕು ಮಟ್ಟದ ಪೂರ್ವಭಾವಿ ಸಭೆಯಲ್ಲಿ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು 2020ನೇ ಫೆ. 8 ರಂದು ಶ್ರೀಮಠದ ಆವರಣದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವದ ಕರಪತ್ರ ಬಿಡುಗಡೆಗೊಳಿಸಿದರು.
ಶ್ರೀ ಮಠದ 22ನೇ ವಾರ್ಷಿಕೋತ್ಸವ, ಲಿಂ| ಜಗದ್ಗುರು ಶ್ರೀ ಪುಣ್ಯಾನಂದಪುರಿ ಸ್ವಾಮೀಜಿಯವರ 13ನೇ ವರ್ಷದಪುಣ್ಯಾರಾಧನೆ ಹಾಗೂ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಯವರ 12ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಹಿನ್ನೆಲೆಯಲ್ಲಿ ವಾಲ್ಮೀಕಿ ಜಾತ್ರೆಯ ಅಂಗವಾಗಿ ಕರಪತ್ರ ಬಿಡುಗಡೆಗೊಳಿಸಿದರು.
ಈ ವೇಳೆ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಮಹಾಕಾವ್ಯ ರಾಮಾಯಣವನ್ನು ರಚಿಸಿ ವಿಶ್ವಕ್ಕೆ ಮಾರ್ಗದರ್ಶನ ನೀಡಿದ ಶ್ರೀ ವಾಲ್ಮೀಕಿ ಮಹರ್ಷಿಯ ವಿಚಾರಧಾರೆಗಳನ್ನು ವಾಲ್ಮೀಕಿ ಸಮಾಜಕ್ಕೆ ಪರಿಚಯಿಸುವ ಸದುದ್ದೇಶದಿಂದ ಜಾತ್ರಾಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.
ಇತರೆ ಸಮಾಜ ಬಂಧುಗಳಂತೆ ವಾಲ್ಮೀಕಿ ನಾಯಕ ಸಮುದಾಯವನ್ನು ಜಾಗೃತಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಅಗತ್ಯವಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ನೆಲೆಸಿರುವ ಸಮಾಜದ ಬಂಧುಗಳನ್ನು ಒಂದೆಡೆ ಸೇರಿಸಿ ಸಂಘಟಿಸುವ ಉದ್ದೇಶವೂ ಇದಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಶೈಕ್ಷಣಿಕವಾಗಿ ಶಕ್ತಿ ತುಂಬುವ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಮಾಣವನ್ನು ಶೇ. 7.5ಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಎರಡು ತಿಂಗಳ ಗಡವು ನೀಡಿದ್ದು, ಈಗಾಗಲೇ ನ್ಯಾ. ನಾಗಮೋಹನ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ವಾಲ್ಮೀಕಿ ಜಾತ್ರೆಗಿಂತ ಮುಂಚಿತವಾಗಿ ನಿರೀಕ್ಷಿತ ಪ್ರಮಾಣದ ಮೀಸಲಾತಿ ದೊರೆಯುವ ವಿಶ್ವಾಸವಿದೆ ಎಂದು ಶ್ರೀಗಳು ವಿಶ್ವಾಸವ್ಯಕ್ತಪಡಿಸಿದರು.
ತಾಲೂಕು ಅಖೀಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಚಂದ್ರಪ್ಪ ಬೇಡರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹನುಮಂತಪ್ಪ ಬ್ಯಾಲದಹಳ್ಳಿ, ತಾಪಂ ಸದಸ್ಯ ಭೀಮಪ್ಪ ಗೋಣೆಪ್ಪನವರ, ನಗರಸಭೆ ಸದಸ್ಯ ಶಶಿಧರ ಬಸೇನಾಯ್ಕರ, ಎಪಿಎಂಸಿ ಸದಸ್ಯ ರಾಜೇಂದ್ರ ಬಸೇನಾಯ್ಕರ, ಸಣ್ಣತಮ್ಮಪ್ಪ ಬಾರ್ಕಿ, ಭೀಮಣ್ಣ ಯಡಚಿ, ರಾಮಪ್ಪ ಗೋಣೆಪ್ಪನವರ, ರಾಮಪ್ಪ ಮೆಡ್ಲೆರಿ, ಕರಿಯಪ್ಪ ಮಾಳಿಗೇರ, ಆಂಜನೇಯ ನಾಗೇನಹಳ್ಳಿ, ಮಹೇಶ ನಾಯಕ ಸೇರಿದಂತೆ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.