ಫೆ.8-9ರಂದು ವಾಲ್ಮೀಕಿ ಜಾತ್ರೋತ್ಸವ
Team Udayavani, Jan 4, 2021, 3:35 PM IST
ಹಾವೇರಿ: ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ 3ನೇ ವರ್ಷದಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ, ಮಠದ 23ನೇ ವಾರ್ಷಿಕೋತ್ಸವ, ಲಿಂ.ಪುಣ್ಯಾನಂದಪುರಿ ಶ್ರೀಗಳ 13ನೇ ಪುಣ್ಯಾರಾಧನೆ, ಪ್ರಸನ್ನಾನಂದ ಶ್ರೀಗಳ 13ನೇ ವರ್ಷದ ಪಟ್ಟಾ ಧಿಕಾರ ಮಹೋತ್ಸವ ಕಾರ್ಯಕ್ರಮ ಫೆ. 8, 9ರಂದು ನಡೆಯಲಿದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಆಯೋಜಿಸಲಾಗಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ವಾಲ್ಮೀಕಿ ಜಾತ್ರೆಯಪೂರ್ವದಲ್ಲಿಯೇ ಮುಖ್ಯಮಂತ್ರಿಗಳು 2ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿನೀಡಿದ ಭರವಸೆಯಂತೆ ವಾಲ್ಮೀಕಿ ಸಮಾಜಕ್ಕೆ ಶೇ.7.5 ಮೀಸಲಾತಿಯನ್ನು ಘೋಷಿಸಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಇಲ್ಲದೇ ಹೋದರೆ, ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯುವುದು ಶತಸಿದ್ಧ.ಹೋರಾಟಕ್ಕೆ ಸಮಾಜ ಬಾಂಧವರು ಸಿದ್ಧರಾಗಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ವಾಲ್ಮೀಕಿ ಸಮಾಜ ನಾಲ್ಕನೇ ದೊಡ್ಡ ಸಮುದಾಯವಾಗಿದ್ದು, ವಾಲ್ಮೀಕಿ ಸಮಾಜಕ್ಕೆ ಉದ್ಯೋಗಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಶೇ.7.5ಮೀಸಲಾತಿನೀಡುವಂತೆ ಕಳೆದ ಮೂರು ದಶಕಗಳಿಂದ ಹೋರಾಟಮಾಡಲಾಗುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿ ಸಿದಂತೆ ರಚಿಸಲಾದ ನಾಗಮೋಹನದಾಸ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ವಾಲ್ಮೀಕಿ ಜಾತ್ರೆಯಪೂರ್ವದಲ್ಲಿ ಜಾರಿಗೊಳಿಸಬೇಕು. ಇಲ್ಲದೇ ಹೋದರೆತಾವು ಸಮಾಜದೊಂದಿಗೆ ಉಗ್ರ ಹೋರಾಟ ನಡೆಸಲು ಸಿದ್ಧರಿರುವುದಾಗಿ ತಿಳಿಸಿದರು.
ವಾಲ್ಮೀಕಿ ಜಾತ್ರೆ ಕೇವಲ ಜಾತ್ರೆಯಲ್ಲ, ಜಾಗೃತಿ ಜಾತ್ರೆಯಾಗಿದೆ. ಈಗಾಗಲೇ ಅನೇಕ ಸಮಾಜದವರು ಅವರವರ ಸಾಂಸ್ಕೃತಿಕ ನಾಯಕರ ಹೆಸರಲ್ಲಿ ಸಂಘಟಿತರಾಗುತ್ತಿದ್ದಾರೆ. ದೇಶದಲ್ಲಿ ವಾಲ್ಮೀಕಿ ಸಮಾಜ ವಿವಿಧ ಹೆಸರುಗಳಲ್ಲಿ ಕರೆಯಲ್ಪಡುತ್ತಿದೆ. ಇವನ್ನೆಲ್ಲ ಸಮೀಕರಿಸಿ ಒಂದೇ ವೇದಿಕೆಗೆ ತರುವ ಸವಾಲು ನಮ್ಮ ಮುಂದಿದೆ. ಆ ದಿಸೆಯಲ್ಲಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ 108 ತಾಲೂಕುಗಳಲ್ಲಿ ಪ್ರವಾಸ ಮಾಡಿ ವಾಲ್ಮೀಕಿ ಜಾತ್ರೆಯ ಬಗ್ಗೆ ಹಾಗೂ ಶೇ.7.5 ಮೀಸಲಾತಿ ವಿಳಂಬದ ಬಗ್ಗೆ ಸಮಾಜ ಬಾಂಧವರಲ್ಲಿ ಅರಿವು ಮೂಡಿಸಲಾಗಿದ್ದು, ಜನೇವರಿಅಂತ್ಯಕ್ಕೆ ಇನ್ನುಳಿದ ತಾಲೂಕುಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರಾದ ಕೆ.ಮಂಜಣ್ಣ, ಅಶೋಕ ತಳವಾರ, ಮಂಜುಳಾ ಕರಬಸಮ್ಮನವರ, ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿ ವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ ಆವನಟ್ಟಿ ಮಾತನಾಡಿದರು.ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಶೇಖರಕಳ್ಳಿಮನಿ, ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಹರನಗಿರಿ, ಪ್ರಮುಖರಾದ ಶ್ರೀಧರ ದೊಡ್ಡಮನಿ, ಅನಿಲ ಕುಮಾರ ಮರೋಳ, ಪ್ರಮೋದ ನಲವಾಗಿಲ, ಡಾ.ರಮೇಶ ತೆವರಿ, ಶೇಖರ ಕರಬಸಮ್ಮನವರ, ಈಶಪ್ಪ ಭೀಮಕ್ಕನವರ, ಶಿವಪ್ಪ ಜವಳಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ ತಡಸದ, ಬಸವ ರಾಜ ಭೀಮಕ್ಕನವರ, ಸಿ.ವಿ.ಬ್ಯಾಡಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.