ಪಶು ವೈದ್ಯ ಸೇವೆ ಪುಣ್ಯ ಕಾರ್ಯ: ಜಿಲ್ಲಾಧಿಕಾರಿ ಶೆಟ್ಟೆಣ್ಣವರ
ವಿಶ್ವ ಪಶು ವೈದ್ಯಕೀಯ ದಿನಾಚರಣೆ-ಪಶು ವೈದ್ಯರ ತಾಂತ್ರಿಕ ವಿಚಾರ ಸಂಕಿರಣಕ್ಕೆ ಚಾಲನೆ
Team Udayavani, May 12, 2022, 1:30 PM IST
ಹಾವೇರಿ: ಪಶು ವೈದ್ಯ ಸೇವೆ ಒಳ್ಳೆಯ ವೃತ್ತಿ ಹಾಗೂ ಪುಣ್ಯದ ಕೆಲಸವೂ ಆಗಿದೆ. ಮಾತು ಬಾರದ ಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು ಅತ್ಯಂತ ಜವಾಬ್ದಾರಿಯುತ ಕಾರ್ಯವಾಗಿದೆ. “ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಪಶು ವೈದ್ಯರಿಗೆ ಹೆಚ್ಚು ಸೂಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧುವಾರ ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಹಾವೇರಿ ಶಾಖೆ ಸಹಯೋಗದಲ್ಲಿ ನಡೆದ ವಿಶ್ವ ಪಶು ವೈದ್ಯಕೀಯ ದಿನಾಚರಣೆ ಹಾಗೂ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಿಲ್ಲೆಯ ಪಶು ವೈದ್ಯರ ತಾಂತ್ರಿಕ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾನುವಾರುಗಳ ಚಿಕಿತ್ಸೆಗೆ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಪಶು ವೈದ್ಯರು ಸಹ ಪಶು ವೈದ್ಯ ಸೇವೆ ಉನ್ನತಿಯ ಬಗ್ಗೆ ಆಲೋಚಿಸಬೇಕು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು. ಇಂತಹ ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವ ಮೂಲಕ ಪಶು ವೈದ್ಯಕೀಯ ಸೇವೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು. 1863ರಲ್ಲಿ ಸಣ್ಣದಾಗಿ ಆರಂಭವಾದ ಪಶು ವೈದ್ಯಕೀಯ ದಿನಾಚರಣೆ ಇಂದು ದೊಡ್ಡವಾಗಿ ಬೆಳೆದಿರುವುದು ಸಂತಸದ ಸಂಗತಿ. ಜಿಲ್ಲಾ ಪಶು ವೈದ್ಯರ ಸಂಘಕ್ಕೆ ಪಶು ಆಸ್ಪತ್ರೆ ಆವರಣದ ಜಾಗೆಯ ಬದಲಾಗಿ ಬೇರೆ ಕಡೆ ಜಾಗೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಮಾತನಾಡಿ, ಪಶು ವೈದ್ಯಕೀಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನ ಬಳಸಿಕೊಳ್ಳಬೇಕು. ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುದಾನ ಬಳಕೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು. ಕೋವಿಡ್ ಸಮಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ಪಶು ವೈದ್ಯಾಧಿಕಾರಿ ಡಾ|ಎನ್.ಬಿ.ಅಂಗಡಿ ಪಶು ವೈದ್ಯಕೀಯ ಸೇವೆ ಪ್ರತಿಜ್ಞಾವಿಧಿ ಬೋಧಿಸಿದರು. ಡಾ|ಎಸ್. ರವಿಕುಮಾರ ಅವರು ಕೋಳಿ ಉದ್ಯಮದಲ್ಲಿ ಪ್ರಸ್ತುತ ಪ್ರಗತಿಗಳು ಹಾಗೂ ಡಾ|ಕೃಷ್ಣರೆಡ್ಡಿ ಅವರು ಪಶು ವೈದ್ಯಕೀಯ ಅಭ್ಯಾಸದಲ್ಲಿ ಹೋಮಿಯೋಪತಿ ಉತ್ಪನ್ನಗಳ ಕ್ರಿಯೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಪಶು ವೈದ್ಯಕೀಯ ಪಾಲಿಟೆಕ್ನಿಕ್ ಉಪ ನಿರ್ದೇಶಕ ಚಿದಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಡಾ|ನರೇಂದ್ರನಾಥ ಚೌಡಾಳ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ|ರಾಜೀವ ಕೂಲೇರ ಇದ್ದರು.
ಪಶು ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ|ಪರಮೇಶ್ವರ ಹುಬ್ಬಳ್ಳಿ ಸ್ವಾಗತಿಸಿದರು. ಜಾನುವಾರುಗಳ ಚಿಕಿತ್ಸೆಗೆ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಪಶು ವೈದ್ಯರು ಸಹ ಪಶು ವೈದ್ಯ ಸೇವೆ ಉನ್ನತಿಯ ಬಗ್ಗೆ ಆಲೋಚಿಸಬೇಕು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು. ಇಂತಹ ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವ ಮೂಲಕ ಪಶು ವೈದ್ಯಕೀಯ ಸೇವೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು. -ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.