ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ
Team Udayavani, Sep 18, 2019, 11:43 AM IST
ಹಾವೇರಿ: ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಐಟಿಯು ಸಂಯೋಜಿತ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗ್ರಾಪಂ ನೌಕರರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಈಗಾಗಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರು ಎಲ್ಲ ನೌಕರರ ಸೇವಾ ನಿಯಮಾವಳಿಗಳನ್ನು ಸಿ ಮತ್ತು ಡಿ ದರ್ಜೆ ಮಾಡಲು ಒಪ್ಪಿಕೊಂಡಿದ್ದು ಕೂಡಲೇ ಮಂಜೂರಾತಿ ನೀಡಬೇಕು.ಎಲ್ಲ ನೌಕರರಿಗೆ ಸೆಪ್ಟೆಂಬರ್ ತಿಂಗಳಿನಿಂದ ಇಎಫ್‌ಎಂಎಸ್ ಮೂಲಕ ಪ್ರತಿ ತಿಂಗಳ ವೇತನ ನೀಡಬೇಕು. 6ರಿಂದ 20 ತಿಂಗಳಿನಿಂದ ಬಾಕಿಯಿರುವ ವೇತನವನ್ನು ಸ್ಥಳೀಯ ಸಂಪನ್ಮೂಲದ ಶೇ. 40, 14ನೇ ಹಣಕಾಸು ನಿಧಿಯಿಂದ ಶೇ. 10ರಷ್ಟನ್ನು ಪಾವತಿಸಲು ರಾಜ್ಯ ಸರ್ಕಾರದ ಆದೇಶವಿದ್ದರೂ ನೌಕರರಿಗೆ ಪಾವತಿಸಿಲ್ಲ. ಕೂಡಲೇ ವೇತನ ಪಾವತಿಸಬೇಕು. ಎಂ.ಎಸ್. ಸ್ವಾಮಿ ವರದಿ ಜಾರಿಗೊಳಿಸಬೇಕು ಎಂದು ಗ್ರಾಪಂ ನೌಕರರು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ವಿ.ಕೆ. ಬಾಳಿಕಾಯಿ, ಪ್ರಧಾನ ಕಾರ್ಯದರ್ಶಿ ಜಗದೀಶ ಕೋಟಿ, ರಾಜ್ಯ ಉಪಾಧ್ಯಕ್ಷ ಬಿ.ಐ. ಈಳಗೇರ, ಸಿಐಟಿಯು ಸಂಚಾಲಕ ವಿನಾಯಕ ಕುರುಬರ, ಪರಮೇಶ ಪುರದ, ಮಹಾಂತೇಶ ಎಲಿ, ಬಸವರಾಜ ಬೋವಿ, ಅಂದಾನೆಪ್ಪ ಹೆಬಸೂರ ಇತರರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.