Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ


Team Udayavani, Oct 31, 2024, 12:45 PM IST

Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ

ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್​ ಬೋರ್ಡ್​​ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ. ಸದ್ಯ ಗ್ರಾಮ ಅಕ್ಷರಶಃ ಬುದಿಮುಚ್ಚಿದ ಕೆಂಡದಂತಿದೆ.

ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕನ್ನು ಜಖಂ ಮಾಡಲಾಗಿದೆ.

ಕಲ್ಲು ತೂರಾಟ ಹಾಗೂ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಎಸ್​​ಪಿ ಅಂಶುಕುಮಾರ‌ ಕಡಕೋಳ ಗ್ರಾಮಕ್ಕೆ ಭೇಟಿ ನೀಡಿ ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಹಾಗೂ ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ.

32 ಜನ ಪೊಲೀಸ್ ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದವರಿಂದಲೂ ಮಾಹಿತಿ ಪಡೆದು ದೂರು ಸ್ವೀಕರಿಲಾಗುತ್ತಿದೆ. ಗಲಾಟೆಗೆ ಸಂಬಂಧಿಸಿದಂತೆ ಈವರೆಗೆ 32 ಜನರನ್ನು ವಶಕ್ಕೆ ಪಡೆದಿದ್ದು ಇದರಲ್ಲಿ ಮೂವರು ಅಪ್ರಾಪ್ತರು ಸೇರಿದ್ದಾರೆ. ಗ್ರಾಮದಲ್ಲಿ ಬಿಗಿ ಭದ್ರತೆಗೆ 4 ಕೆಎಸ್​ಆರ್​ಪಿ ತುಕಡಿ, 200 ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್​ಮಾರ್ಚ್ ಕೂಡಾ‌ ಮಾಡಲಾಗುತ್ತದೆ. ಗಲಾಟೆಯಲ್ಲಿ ದುಷ್ಕರ್ಮಿಗಳು ಕೆಲವರ ಮನೆಗಳ ಗಾಜು ಒಡೆದಿದ್ದಾರೆ. ಘಟನೆಯಲ್ಲಿ 6 ಜನ ಗಾಯಗೊಂಡಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹಲ್ಲೆಗೊಳಗಾದವರಿಗೆ ಎಕ್ಸ್​ರೇ ಮಾಡಿಸುತ್ತೇವೆ ಎಂದು ಎಸ್​ಪಿ ಅಂಶು ಕುಮಾರ್ ತಿಳಿಸಿದ್ದಾರೆ.

ವೈಯಕ್ತಿಕವಾಗಿ ಯಾರಿಗೂ ನಾವು ನೋಟಿಸ್ ಕೊಟ್ಟಿರಲಿಲ್ಲ. ಹಿಂದೆ ಇದ್ದ ಪಟ್ಟಿ ಮೇಲೆ ಮುಂದಿನ ಕ್ರಮಕ್ಕೆ ಪತ್ರ ಬರೆದಿದ್ದೆವು. ವಕ್ಫ್​ ಆಸ್ತಿ ಎಂದು ಮನೆ ದಾಖಲೆಗಳಲ್ಲೂ ನಮೂದಿಸುತ್ತಾರೆಂದು ಜನ ಭಯಗೊಂಡಿದ್ದಾರೆ. ಆ ಭಯದಿಂದ ಗಲಾಟೆ ಮಾಡಿದ್ದಾರೆ. ಯಾರಿಗೂ ನೋಟಿಸ್ ಕೊಟ್ಟಿರಲಿಲ್ಲ, ಈಗ ಪರಿಸ್ಥಿತಿ ತಿಳಿಯಾಗಿದೆ. ಮುಂಜಾಗ್ರತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಕಡಕೋಳ ಗ್ರಾಮದ ಕೆಲವರ ಮನೆ ಮೇಲೆ ಕಲ್ಲು ತೂರಾಟ ನಡೆದಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದೇವೆ. ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಗಲಾಟೆಗೆ ಸಂಬಂಧಿಸಿದಂತೆ ದೂರು ಕೊಡಲು ಯಾರೂ ಸಿದ್ಧರಿಲ್ಲ. ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇವೆ ಎಂದು ಎಸ್‌ ಪಿ ಅಂಶುಕುಮಾರ ಹೇಳಿದರು.

ಟಾಪ್ ನ್ಯೂಸ್

ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ

Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ

Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?

Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?

ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

Waqf Shock for BJP’s illustrious family too; Jolla Putra’s land is called Waqf

Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್‌ ಹೆಸರು

Rocket Launcher: ತಮಿಳುನಾಡಿನ ದೇವಸ್ಥಾನದ ಬಳಿ ರಾಕೆಟ್ ಲಾಂಚರ್ ಪತ್ತೆ… ಆತಂಕ

Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Shock for BJP’s illustrious family too; Jolla Putra’s land is called Waqf

Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್‌ ಹೆಸರು

darshna-Court

Renukaswamy Case: ನಟ ದರ್ಶನ್‌ಗೆ ಜಾಮೀನು ಕೊಟ್ಟು ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು?

HDK-Kandre

Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್‌.ಡಿ.ಕುಮಾರಸ್ವಾಮಿ

DK-Shiva

Congress Gurantee: ಮಹಿಳೆಯರಿಂದಲೇ ಉಚಿತ ಪ್ರಯಾಣಕ್ಕೆ ವಿರೋಧ: ಡಿಸಿಎಂ ಡಿ.ಕೆ.ಶಿವಕುಮಾರ್‌

Shivaraj-Thangadagi

Golden Jubilee: ಕರ್ನಾಟಕ ನಾಮಕರಣಕ್ಕೆ 50 ವರ್ಷ: 100 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Shanubhogara magalu movie cleared Sensor certificate

Ragini prajwal: ಸೆನ್ಸಾರ್‌ ಪಾಸಾದ ಶ್ಯಾನುಭೋಗರ ಮಗಳು

ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ

Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ

6(1)

Bolar ಶಾಲೆ ಮಕ್ಕಳಿಂದ ಪರಿಸರ ಸ್ನೇಹಿ ಗೂಡುದೀಪ

5

Ajekar: ನೀರೆಯ ಭತ್ತದ ಗದ್ದೆಯಲ್ಲಿ ಬಾವಿ ಹೋಲುವ ಗುಹೆ ಪತ್ತೆ

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.