ಜಲಮೂಲ ಸಂರಕ್ಷಣೆಗೆ ನಿಷ್ಠೆಯಿಂದ ಶ್ರಮಿಸಿ

ನೀರಾವರಿ ಇಲಾಖೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ತಾಕೀತು ;ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವ ಎಚ್ಚರಿಕೆ

Team Udayavani, Oct 15, 2022, 4:42 PM IST

19

ಹಾನಗಲ್ಲ: ಕೆರೆ-ಕಟ್ಟೆಗಳು ಸರಕಾರದ ಆಸ್ತಿ. ಮುಂದಿನ ಪೀಳಿಗೆವರೆಗೂ ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆರೆ ಒತ್ತುವರಿ ತೆರವುಗೊಳಿಸಿ, ದುರಸ್ತಿಪಡಿಸುವುದು ನಿಮ್ಮ ಜವಾಬ್ದಾರಿ ಅಲ್ಲವೇ? ಈ ಕೆಲಸ ನೀವಲ್ಲದೇ ಮತ್ತ್ಯಾರು ಮಾಡಬೇಕು? ಈ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು. ನಿಮ್ಮ ಬೇಜವಾಬ್ದಾರಿ ಮುಂದುವರೆದರೆ ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವೆ. ಅವಕಾಶ ನೀಡದೇ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜಲಮೂಲ ಸಂರಕ್ಷಿಸಬೇಕೆಂದು ಶಾಸಕ ಶ್ರೀನಿವಾಸ ಮಾನೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣದ ತಮ್ಮ ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ನಡೆದ ಸಣ್ಣ ನೀರಾವರಿ, ಬೃಹತ್‌ ಮತ್ತು ಏತ ನೀರಾವರಿ, ಜಿಪಂ, ತಾಪಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಕೆರೆ ಸರ್ವೇ ಕೈಗೊಳ್ಳಲು ಆಗಮಿಸುವ ಸರ್ವೇಯರ್‌ ಕೆರೆ ಒತ್ತುವರಿ ಮಾಡಿದವರ ಮನೆಯಲ್ಲಿ ಕುಳಿತು ಹೋಗುತ್ತಾನೆ ಎಂದರೆ ಏನಿದರ ಅರ್ಥ? ಎಂದು ಖಾರವಾಗಿ ಪ್ರಶ್ನಿಸಿದ ಶಾಸಕರು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಎಚ್ಚೆತ್ತುಕೊಳ್ಳದಿದ್ದರೆ ಅಧಿವೇಶನದಲ್ಲಿ ಮಾತನಾಡುವುದು ಅನಿವಾರ್ಯವಾದೀತು ಎಂದು ಎಚ್ಚರಿಸಿದರು.

ಕೆರೆ-ಕಟ್ಟೆ ಒತ್ತುವರಿ ತೆರವಿಗೆ ಹಿಂದೆ-ಮುಂದೆ ನೋಡಬೇಡಿ. ಇದರಲ್ಲಿ ಸ್ವಾರ್ಥ, ಸ್ವಹಿತ, ರಾಜಕಾರಣಕ್ಕೆ ಅವಕಾಶ ನೀಡುವುದು ಬೇಡ ಎಂದರು.

ಕಾಲುವೆಗಳು ಅನೇಕ ಕಡೆಗಳಲ್ಲಿ ಒತ್ತುವರಿಯಾಗಿದ್ದು, ಮಳೆ ಸುರಿದಾಗಲೆಲ್ಲ ಹೊಲ-ಗದ್ದೆಗಳು ಜಲಾವೃತಗೊಂಡು ಬೆಳೆ ನಾಶ ಉಂಟಾಗುತ್ತಿದೆ. ಒತ್ತುವರಿ ತೆರವುಗೊಳಿಸಿ, ಗಿಡ-ಗಂಟಿ ತೆರವುಗೊಳಿಸಿ ಶುಚಿಗೊಳಿಸಿದರೆ ನೀರು ಹರಿದು ಕೆರೆ-ಕಟ್ಟೆ, ನದಿಗಳಿಗೆ ಸೇರಲಿದೆ. ಈ ಕೆಲಸ ಮಾಡದೇ ನಿರ್ಲಕ್ಷ್ಯ ವಹಿಸಿ, ಸಮಯ ಹರಣ ಮಾಡುತ್ತೀರಿ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ. ಮಾರ್ಚ್‌, ಏಪ್ರಿಲ್‌ ಹೊತ್ತಿಗೆ ಇದೆಲ್ಲವೂ ಮುಗಿದಿರಬೇಕು. ಪ್ರತಿಯೊಂದು ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಈ ಕೆಲಸ ಮಾಡಬೇಕು. ಮೊದಲೇ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಕಾರದ ಬಿಡಿಗಾಸಿನ ಪರಿಹಾರ ಅವರ ಕೈಹಿಡಿಯದು. ಎಷ್ಟು ಸಾಧ್ಯವೋ ಅಷ್ಟು ರೈತರ ನೆರವಿಗೆ ಧಾವಿಸಬೇಕು. ಇದು ನಿಮ್ಮ ಕರ್ತವ್ಯ ಎಂದು ಖಡಕ್‌ ಸೂಚನೆ ನೀಡಿದರು.

ಬಸವಣ್ಣನ ಕಾಯಕ ಸಂಸ್ಕೃತಿ ನಾವೆಲ್ಲ ಬೆಳೆಸಿಕೊಳ್ಳೋಣ. ನಮಗೆಲ್ಲರಿಗೂ ಜವಾಬ್ದಾರಿಗಳಿವೆ. ಜನರ ಭರವಸೆ, ವಿಶ್ವಾಸ ಹುಸಿಗೊಳಿಸುವುದು ಬೇಡ. ಅಧಿಕಾರಿಗಳು ಗಂಭೀರವಾಗಿ ವರ್ತಿಸಬೇಕು. ನೀವೆಲ್ಲ ಕೈಜೋಡಿಸಿ, ಸಹಕಾರ ನೀಡಿದರೆ ಹೊಸ ಬದಲಾವಣೆಗೆ ನಾವೆಲ್ಲ ಸೇರಿ ಮುನ್ನುಡಿ ಬರೆಯೋಣ ಎಂದರು.

ಒತ್ತುವರಿ ತೆರವಿಗೆ ರೈತರು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಿ. ನಾನೂ ಕೂಡ ಆ ಕೆಲಸ ಮಾಡುತ್ತಿದ್ದೇನೆ. ಅನಾಹುತಗಳ ಬಗ್ಗೆ ಮನವರಿಕೆ ಮಾಡಿಕೊಡಿ. ಖಂಡಿತವಾಗಿಯೂ ನಿಮಗೆ ಸಹಕಾರ ಸಿಗಲಿದೆ. ನಾನೂ ಕೂಡ ನಿಮ್ಮ ಜತೆಗೆ ನಿಲ್ಲುವೆ. ಕನಿಷ್ಟ ವಾರದಲ್ಲಿ ಒಂದು ದಿನ ಒತ್ತುವರಿ ತೆರವಿಗೆ ಸಮಯ ಮೀಸಲಿಡಿ. ಹಂತ ಹಂತವಾಗಿ ವಿಶೇಷ ಆದ್ಯತೆಯ ಮೇರೆಗೆ ಕಾರ್ಯ ನಿರ್ವಹಿಸಿದರೆ ಒತ್ತುವರಿ ತೆರವುಗೊಂಡು ನೀರು ಸರಾಗವಾಗಿ ಹರಿದು ಜಲಮೂಲ ಸೇರಲಿದೆ. ಇದರಿಂದ ರೈತರಲ್ಲೂ ನೆಮ್ಮದಿ ಮೂಡಲಿದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಇಒ ಬಿ.ಸುನೀಲಕುಮಾರ, ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ, ಬೃಹತ್‌ ಮತ್ತು ಏತ ನೀರಾವರಿ ಇಲಾಖೆ ಎಇಇ ಶಿವಮೂರ್ತಿ, ಜಿಪಂ ಎಇಇ ದೇವಿಂದ್ರಪ್ಪ, ಸಣ್ಣ ನೀರಾವರಿ ಇಲಾಖೆ ಎಇಇ ಸಿ.ಬಿ.ಹಾವನೂರ ಸೇರಿದಂತೆ ಜಿಪಂ ಮತ್ತು ಉದ್ಯೋಗ ಖಾತ್ರಿ ಯೋಜನೆ ಅಭಿಯಂತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.