ವೀಕೆಂಡ್ ಕರ್ಫ್ಯೂ ಮುಂದುವರಿಕೆ
Team Udayavani, Jun 26, 2021, 10:46 AM IST
ಹಾವೇರಿ: ಮಹಾಮಾರಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂ ಮುಂದುವರಿಸಲಾಗಿದ್ದು, ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯಾವಶ್ಯಕ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಎರಡನೇ ಅಲೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಜಿಲ್ಲಾದ್ಯಂತ ಜುಲೈ 5 ರವರೆಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಜೂ.20 ರಂದು ಹೊರಡಿಸಿದ ಆದೇಶದಂತೆ ವಾರಾಂತ್ಯದಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 6ರವರೆಗೆ ದಿನಸಿ, ತರಕಾರಿ, ಹಾಲು, ಔಷಧ, ಮಾಂಸ, ಮೀನು, ಪಶು ಆಹಾರದ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಸಾರ್ವಜನಿಕ ವಿತರಣಾ ವ್ಯವಸ್ಥೆ ಅಂಗಡಿಗಳಿಗೆ ಹಾಗೂ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 5 ರವರೆಗೆ ಅನುಮತಿಸಲಾಗಿದೆ. ಅತ್ಯಾವಶ್ಯಕ ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಉಳಿದ ವಾರದ ದಿನಗಳಲ್ಲಿ ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ನಿಗ ದಿತ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಲಾಗಿದೆ. ಸೋಮವಾರದಿಂದ ಶುಕ್ರವಾರದವರೆ ರಾತ್ರಿ ಕರ್ಫ್ಯೂ ಸಂಜೆ 7 ರಿಂದ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರುತ್ತದೆ. ವೀಕೆಂಡ್ ಕರ್ಫ್ಯೂ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಎಲ್ಲಾ ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಹಾಗೂ ಗಾರ್ಮೆಂಟ್ ತಯಾರಿಕೆಯಲ್ಲಿ ತೊಡಗಿರುವ ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕೋವಿಡ್-19ರ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ಪ್ರತಿದಿನ ಬೆಳಗ್ಗೆ 6ರಿಂದ ಸಂಜೆ 5 ಗಂಟೆವರೆಗೆ ಕೋವಿಡ್ ಎಸ್‌ಓಪಿ ನಿಯಮ ಅನುಸರಿಸಿಕೊಂಡು ತೆರೆಯಲು ಅನುಮತಿ ನೀಡಲಾಗಿದೆ. ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್‌ಗಳಲ್ಲಿ(ಮದ್ಯಪಾನ ಹೊರತುಪಡಿಸಿ)ಕುಳಿತುಕೊಂಡು ಆಹಾರ ಸೇವಿಸಲು ಪ್ರತಿದಿನ ಬೆಳಗ್ಗೆ 6 ಸಂಜೆ 5 ಗಂಟೆವರೆಗೆ ಅನುಮತಿ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸಿ ಶೇ.50ರ ಸಾಮರ್ಥ್ಯದೊಂದಿಗೆ ಲಾಡ್ಜ್ಗಳು ಮತ್ತು ರೆಸಾರ್ಟ್ ಗಳಿಗೆ ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಮತ್ತು ದುರಸ್ತಿಗೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು, ಸಂಸ್ಥೆಗಳಿಗೆ ಪ್ರತಿದಿನ ಬೆಳಗ್ಗೆ 6 ಸಂಜೆ 5 ಗಂಟೆವರೆಗೆ ಅನುಮತಿ ನೀಡಲಾಗಿದೆ. ವಾಕಿಂಗ್ ಉದ್ದೇಶಕ್ಕಾಗಿ ಬೆಳಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ. ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಜಿಮ್‌ಗಳಿಗೆ(ಹವಾನಿಯಂತ್ರಣ ಇಲ್ಲದೆ) ಅವಕಾಶ ನೀಡಲಾಗಿದೆ.
ಗರಿಷ್ಠ ಇಬ್ಬರು ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಲಾಗಿದೆ. ವೀಕ್ಷಕರಿಲ್ಲದೆ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ. ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ಸಿಬ್ಬಂದಿಯ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಜಿಲ್ಲಾದ್ಯಂತ ನಿಂತು ಪ್ರಯಾಣಿಸುವುದನ್ನು ನಿರ್ಬಂಧಿಸಿ ಬಸ್‌ಗಳ ಸಂಚಾರಕ್ಕೆ ಶೇ.50 ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಅನುಮತಿಸಲಾಗಿದೆ.
ಈಗಾಗಲೇ ನಿಗದಿಪಡಿಸಲಾಗಿರುವ ಮದುವೆ ಸಮಾರಂಭಗಳನ್ನು ಅವರವರ ಮನೆಗಳಲ್ಲಿಯೇ ಹತ್ತಿರದ ಸಂಬಂಧಿಕರು ಒಳಗೊಂಡಂತೆ 40 ಜನರಿಗೆ ಮೀರದಂತೆ ಅನುಮತಿಸಿದೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಐದು ಜನರು ಮೀರದಂತೆ ನಡೆಸಲು ಅನುಮತಿಸಲಾಗಿದೆ. ಜಿಲ್ಲಾದ್ಯಂತ ವಿನಾಯಿತಿ ಪಡೆದ ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕೂ ಅಧಿಕ ವ್ಯಕ್ತಿಗಳ ಸೇರುವಿಕೆಯನ್ನು ನಿಷೇ ಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳನ್ನು ಜಿಲ್ಲಾದ್ಯಂತ ಜುಲೈ 5 ರವರೆಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲಾದ್ಯಂತ ಬಸ್‌ಗಳಲ್ಲಿ ನಿಂತುಕೊಂಡು ಪ್ರಯಾಣಿಸುವುದನ್ನು ನಿರ್ಬಂಧಿಸಿ, ಬಸ್‌ಗಳಲ್ಲಿ ಶೇ.50 ರಷ್ಟು ಪ್ರಯಾಣಿಕರನ್ನು ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ.-ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.