ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ: ಬಿ.ಸಿ.ಪಾಟೀಲ್
Team Udayavani, Nov 2, 2020, 1:15 PM IST
ಹಾವೇರಿ: ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಲಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇನ್ನುಳಿದಿರುವ ಎರಡೂವರೆ ವರ್ಷ ಯಾರೂ ಸಹ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಮ್ಮನೆ ಪಕ್ಷದಲ್ಲಿ ಗೊಂದಲ ಸೃಷ್ಟಿಸುವುದು, ತಿರುಕನ ಕನಸು, ಹಗಲುಗನಸು ಕಾಣುವುದನ್ನು ಕೆಲವರು ಮಾಡುತ್ತಿದ್ದು,ಅದೆಂದೂ ಸಾಧ್ಯವಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿಯೇ ಸ್ಥಳೀಯ ಸಂಸ್ಥೆ ಚುನಾವಣೆಯಿಂದ ಹಿಡಿದು ಎಲ್ಲಾ ಚುನಾವಣೆಗಳು ನಡೆಯಲಿವೆ ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರಿಂದ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಲು ಸಾಧ್ಯವಾಯಿತು. ಹೆಚ್.ಡಿ.ಕುಮಾರಸ್ವಾಮಿ ಜೊತೆ ಮೈತ್ರಿ ಸರ್ಕಾರದಲ್ಲಿಯೇ ಇದ್ದಿದ್ದರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲಿ ಇದ್ದಂತಿರಬೇಕಾಗಿತ್ತು ಎಂದರು.
ಮನುಷ್ಯರನ್ನು ನಾಯಿಗೆ ಹೋಲಿಸುವುದು, ಬಂಡೆಗೆ ಹೋಲಿಸುವುದು, ಹುಲಿ, ಟಗರು ಎನ್ನುವುದು ಸಂಸ್ಕೃತಿಯಿಲ್ಲದ್ದು, ಸಿದ್ದರಾಮಯ್ಯ ಈ ರೀತಿ ಪದಗಳನ್ನು ಬಳುಸುವುದು ಸಂಸ್ಕೃತಿಗೆ ತಕ್ಕದ್ದಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ:ಗಂಗಾವತಿ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ: ತಾ.ಪಂ ಸುತ್ತ ಬಿಗುವಿನ ವಾತಾವರಣ
ಸಿದ್ದರಾಮಯ್ಯಗೆ ತನ್ನ ವಿರೋಧ ಪಕ್ಷದ ಸ್ಥಾನ ಎಲ್ಲಿ ಅಲ್ಲಾಡಿ ಹೋಗುತ್ತದೆಯೋ ಎಂಬ ಭಯವಿದೆ. ಮನುಷ್ಯರನ್ನು ರಾಜಕೀಯವಾಗಿ ಸಮಾಧಿ ಮಾಡುವುದು, ನಾಯಿ ಎನ್ನುವುದು ಸಿದ್ದರಾಮಯ್ಯ ಹಾಗೂ ಡಿಕೆಶಿ ಘನತೆಗೆ ಸೂಕ್ತವಲ್ಲ. ನಾಯಿಗೆ ನಿಯತ್ತು ಇರುತ್ತದೆ. ಇವರು ಸಾಕಿರುವ ನಾಯಿಗಳೆಲ್ಲ ಬಹುಶಃ ಕಚ್ಚುವ ನಾಯಿಗಳೇ ಇರಬೇಕು. ಒಳ್ಳೆಯ ನಾಯಿಗಳನ್ನು ಸಾಕಿದ್ದರೆ ಈ ರೀತಿ ದುಃಸ್ಥಿತಿ ಇವರಿಗೆ ಬರುತ್ತಿರಲಿಲ್ಲ. ಹದಿನೇಳು ಜನ ರಾಜಕೀಯ ಸಮಾಧಿಯಾಗುತ್ತಾರೆ ಎಂದು ಡಿಕೆಶಿ ಹೇಳಿದ್ದರು. ಆದರೆ ನಿಜವಾಗಿಯೂ ಸಮಾಧಿಯಾಗುತ್ತಿರುವವರು ಯಾರು ಎಂಬುದನ್ನು ಅರಿಯಬೇಕು ಎಂದು ಮಾರ್ಮಿಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.