ಮಹಿಳೆ-ಮಕ್ಕಳ ಸಾಗಾಣಿಕೆ ಹೀನ ಕೃತ್ಯ


Team Udayavani, Sep 9, 2018, 3:32 PM IST

9-sepctember-21.jpg

ಹಾವೇರಿ: ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ಅತ್ಯಂತ ಹೀನ ಕೃತ್ಯವಾಗಿದೆ. ಪೊಲೀಸ್‌ ಠಾಣೆಗಳಲ್ಲಿ ದಾಖಲಾಗುವ ದೂರುಗಳಲ್ಲಿ ಶೇ. 60ರಷ್ಟು ಹೆಣ್ಣು ಮಕ್ಕಳ ಸಾಗಾಣಿಕೆ ಪ್ರಕರಣಗಳಾಗಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಕೆ.ಪರಶುರಾಮ ಹೇಳಿದರು.

ನಗರದ ದೇವರಾಜ ಅರಸು ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸಾಗಾಣಿಕೆ ಹಾಗೂ ವಾಣಿಜ್ಯಿಕ ಲೈಂಗಿಕ ಶೋಷಣೆ ಸಂತ್ರಸ್ತರ ಯೋಜನೆ-2015’ ಕುರಿತ ಕಾರ್ಯಕ್ರಮ ಹಾಗೂ ಪೊಲೀಸ್‌ ದೂರು ಪ್ರಾಧಿಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆ ಮತ್ತು ಮಕ್ಕಳ ಸಾಗಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಯಾವುದೋ ಆಮಿಷಕ್ಕೆ ಒಳಗಾಗಿ ಮಹಿಳೆಯರು ಶೋಷಣೆಗೊಳಲಾಗುತ್ತಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದನ್ವಯ 18ವರ್ಷದೊಳಗಿನ ಹೆಣ್ಣುಮಕ್ಕಳು ಕಾಣೆಯಾದಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದರು. 

ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಸರ್ಕಾರ ಮಹಿಳಾ ಪೊಲೀಸ್‌ ಠಾಣೆಗಳನ್ನು ತೆರೆದಿದೆ. ಈ ಠಾಣೆಗಳಲ್ಲಿ ಮಹಿಳಾ ಪೊಲೀಸರೇ ಕರ್ತವ್ಯ ನಿರ್ವಹಿಸುತ್ತಾರೆ. ದೌರ್ಜನ್ಯಕ್ಕೆ ಹಾಗೂ ಶೋಷಣೆಗೆ ಒಳಗಾದ ಮಹಿಳೆಯರು ಈ ಠಾಣೆಗಳಲ್ಲಿ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು. ಈ ಕುರಿತು ಪೊಲೀಸ್‌ ಇಲಾಖೆಯಲ್ಲಿ ಮಾತ್ರ ದೂರ ಪ್ರಾಧಿಕಾರವಿದ್ದು, ಬೇರಾವ ಇಲಾಖೆಯಲ್ಲೂ ಈ ಸೌಲಭ್ಯ ಒದಗಿಸಿಲ್ಲ. ಪೊಲೀಸ್‌ ಇಲಾಖೆಯಲ್ಲಿ ದೌರ್ಜನ್ಯ ನಡೆಯುತ್ತದೆ ಎಂಬ ಆರೋಪಗಳು ಬಂದ ಕಾರಣ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪೊಲೀಸ್‌ ದೂರು ಪ್ರಾಧಿಕಾರ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು ಪೊಲೀಸ್‌ ಅಧೀಕ್ಷಕರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ಜಿಲ್ಲಾ ಮಟ್ಟದ ದೂರುಗಳನ್ನು ಡಿಸಿ ಕಚೇರಿಯಲ್ಲಿನ ದೂರು ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್‌ ನ್ಯಾಯಾಧೀಶ ವೈ.ಎಲ್‌. ಲಾಡಖಾನ್‌ ಮಾತನಾಡಿ, ಹಿಂದಿನ ಕಾಲದಲ್ಲಿ ನಗ, ನಾಣ್ಯ, ಬಂಗಾರ ಕಳ್ಳತನವಾಗುತ್ತಿತ್ತು. ಆದರೆ, ಇಂದಿನ ಸಮಾಜದಲ್ಲಿ ಮನುಷ್ಯರ ಕಳ್ಳತನವಾಗುತ್ತಿದೆ. ಮಹಿಳೆ ಮತ್ತು ಮಕ್ಕಳನ್ನು ಅಪಹರಿಸಿ ದಾರಿತಪ್ಪಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವುದು ಆತಂಕಕಾರಿ ಸಂಗತಿ ಎಂದರು.

ಇದೊಂದು ಹೀನ ಕೃತ್ಯವಾಗಿದ್ದು, ಪೊಲೀಸ್‌ ಠಾಣೆಗಳಲ್ಲಿ ದಾಖಲಾಗುವ ದೂರುಗಳಲ್ಲಿ ಶೇ. 60 ರಷ್ಟು ಹೆಣ್ಣು ಮಕ್ಕಳ ಸಾಗಾಣಿಕೆ ಪ್ರಕರಣಗಳಾಗಿವೆ. ಲೈಂಗಿಕ ಶೋಷಣೆಗೊಳಗಾದಾಗ ಮಹಿಳೆಯರು ಮತ್ತು ಮಕ್ಕಳು ಘಟನೆ ನಡೆದ 24 ತಾಸಿನಲ್ಲಿ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದರೆ ಅಂಥವರಿಗೆ ನ್ಯಾಯ ಒದಗಿಸಲಾಗುವುದು. ಇದು ಕೇವಲ ಸರ್ಕಾರದ ಕಾರ್ಯ ಮಾತ್ರವಲ್ಲದೇ ಸಮಾಜದ ಎಲ್ಲರೂ ಇಂತಹ ಘಟನೆ ವಿರುದ್ಧ ಹೋರಾಡಬೇಕು. ಜಾಗೃತಿ ಮೂಡಿಸಲು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಸಿ. ನೀರಲಗಿ, ಕಾರ್ಯದರ್ಶಿ ದೇವರಾಜ ನಾಯ್ಡು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್‌. ಮಾಳಗೇರ, ಎಎಸ್‌ಐ ಉದಯ ಕುಲಕರ್ಣಿ ಇದ್ದರು.ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಉಮಾ ಕೆ.ಎಸ್‌. ಸ್ವಾಗತಿಸಿದರು. ವಿನಯ ಗುಡಗೂರ ನಿರೂಪಿಸಿದರು.

ವೇಶ್ಯಾವಾಟಿಕೆ ಅಂತಾರಾಷ್ಟ್ರೀಯ ಮಟ್ಟದ ವೃತ್ತಿಯಾಗಿ ಬೆಳೆದಿದೆ. ತಿಳಿದೋ ತಿಳಿಯದೆಯೋ ಈ ವೃತ್ತಿಯಲ್ಲಿ ತೊಡಗಿಕೊಂಡವರು ಮರಳಿ ಆ ಜಗತ್ತಿನಿಂದ ಹೊರಬರುವುದು ಕಷ್ಟಸಾಧ್ಯ. ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆಗೆ ಒಳಗಾದವರನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಸಮಾಜದಲ್ಲಿ ಗೌರಯುತವಾಗಿ ಬಾಳಲು ಅವಕಾಶ ನೀಡುವುದು ಕಾನೂನು ಸೇವೆಗಳ ಪ್ರಾಧಿ ಕಾರದ ಉದ್ದೇಶ.
 ವೈ.ಎಲ್‌. ಲಾಡಖಾನ್‌, ನ್ಯಾಯಾಧೀಶರು

ಉಪನ್ಯಾಸ
ವಕೀಲರಾದ ಎಂ.ಎಚ್‌. ವಾಲಿಕರ ಕಲಂ-357ಎ, ಪಿಸಿ ಮತ್ತು ಸಂತ್ರಸ್ತರ ಪರಿಹಾರಧನ ಯೋಜನೆ ಕುರಿತು, ಆಶಾಕಿರಣ ಸಂಸ್ಥೆಯ ಅಧ್ಯಕ್ಷ ಮುತ್ತುರಾಜ ಮಾದರ ಸಾಗಾಣಿಕೆ ಹಾಗೂ ವಾಣಿಜ್ಯಿಕ ಲೈಂಗಿಕ ಶೋಷಣೆ ಸಂತ್ರಸ್ತರ ಕಾಯಿದೆ-2015ರ ಕುರಿತು ಹಾಗೂ ಪಿಎಸ್‌ಐ ಮಾಲತೇಶ, ಪೊಲೀಸ್‌ ದೂರು ಪ್ರಾಧಿಕಾರ ರಚನೆ, ಮಹತ್ವ ಮತ್ತು ಅದರ ಕಾರ್ಯ ಚಟುವಟಿಕೆ ಕುರಿತು ಉಪನ್ಯಾಸ ನೀಡಿದರು. 

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.