ಸಮ್ಮೇಳನದಲ್ಲಿ ಮಹಿಳಾ ಸುರಕ್ಷತೆ ಮುಖ್ಯ
Team Udayavani, Jan 29, 2021, 6:13 PM IST
ಹಾವೇರಿ: ಹಾವೇರಿಯಲ್ಲಿ ಫೆ. 26 ರಿಂದ ಮೂರು ದಿನಗಳ ಕಾಲ ಜರುಗಲಿರುವ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಮಹಿಳಾ ಸುರಕ್ಷತೆ, ಮಹಿಳೆಯರ ಸೌಲಭ್ಯಗಳ ಕುರಿತಂತೆ ಜಾಗೃತಿ ವಹಿಸಬೇಕೆಂದು ಸಮ್ಮೇಳನದ ಮಹಿಳಾ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಉಪಾಧ್ಯಕ್ಷೆ ರಾಜೇಶ್ವರಿ ಕಲ್ಲೇರ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ಪ್ರದೇಶ, ಊಟದ ಪ್ರದೇಶಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸದಸ್ಯರು ಮಾತನಾಡಿ, ಸಮ್ಮೇಳನದ ಗೋಷ್ಠಿಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಮಹಿಳಾ ಸಾಹಿತಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಸಮ್ಮೇಳನದಲ್ಲಿ ಸನ್ಮಾನಕ್ಕೆ ಅವಕಾಶ ಕಲ್ಪಿಸಬೇಕೆಂದರು. ರಾಜ್ಯದ ವಿವಿಧ ಭಾಗಗಳಿಂದ ಸಮ್ಮೇಳನಕ್ಕೆ ಆಗಮಿಸುವ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆಯ ಜೊತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಉತ್ತಮ ವಸತಿ ಸೌಕರ್ಯ, ಉತ್ತಮ ಸಾರಿಗೆ ವ್ಯವಸ್ಥೆ, ಸುರಕ್ಷತೆಗೆ ಮಹಿಳಾ ಪೊಲೀಸ್ ಪೇದೆಗಳ ನೇಮಕ, ಪ್ರತ್ಯೇಕ ಊಟದ ಕೌಂಟರ್‌ಗಳನ್ನು ತೆರೆಯುವುದು, ಮಹಿಳಾ ಗೋಷ್ಠಿಗಳನ್ನು ಬೆಳಗಿನ ವೇಳೆಯಲ್ಲಿ ಆಯೋಜಿಸುವುದು, ಸಂಜೆಯೊಳಗಾಗಿ ಮಹಿಳೆಯರು ಭಾಗವಹಿಸುವ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸುವುದು ಸೇರಿದಂತೆ ಹಲವು ಸಲಹೆ ನೀಡಿದರು.
ಇದನ್ನೂ ಓದಿ:ಬೇಡಿಕೆ ಈಡೇರಿಕೆಗೆ ಕಾಫಿ ಬೆಳೆಗಾರರ ಒತ್ತಾಯ
ಸಮ್ಮೇಳನದ ಕಾರ್ಯಕರ್ತರಾಗಿ ಮಹಿಳಾ ಸ್ವಯಂ ಸೇವಕರನ್ನು ಬಳಸಿಕೊಳ್ಳಬೇಕು. ಎನ್‌ಎಸ್‌ಎಸ್, ಎನ್ ಸಿಸಿ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಬೇಕು. ತಾಲೂಕುವಾರು ಮಹಿಳಾ ತಂಡಗಳನ್ನು ರಚಿಸಬೇಕು. ಕಾರ್ಯಕ್ರಮಗಳನ್ನು ಹಂಚಿಕೆ ಮಾಡಿ ಉಪ ಸಮಿತಿಗಳನ್ನು ರಚಿಸಿ ಸಕ್ರಿಯವಾಗಿ ಮಹಿಳೆಯರು ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಮಹಿಳಾ ಸಮಿತಿ ಸದಸ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಣ್ಣನವರ, ಹಿರೇಕೆರೂರು ತಹಶೀಲ್ದಾರ್ ಉಮಾ, ಕಸಾಪ ತಾಲೂಕು ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.