ಪಾರದರ್ಶಕ-ನಿಷ್ಪಕ್ಷಪಾತ ಚುನಾವಣೆಗೆ ಶ್ರಮಿಸಿ
Team Udayavani, Oct 18, 2020, 3:33 PM IST
ಹಾವೇರಿ: ಮತಗಟ್ಟೆಯ ವಿದ್ಯಮಾನಗಳ ಬಗ್ಗೆ ಗಮನಿಸಿ ಪಾರ ದರ್ಶಕ ಮತ್ತು ನಿಷ್ಪಕ್ಷಪಾತವಾದ ಚುನಾವಣೆಗಾಗಿ ಮತಗಟ್ಟೆವಾರು ನೇಮಕಗೊಂಡ ಮೈಕ್ರೋ ವೀಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪಶ್ಚಿಮ ಪದವೀಧರರ ಚುನಾವಣೆಯ ಸಹಾಯಕ ಚುನಾವಣಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತಗಟ್ಟೆ ಮೈಕ್ರೋ ವೀಕ್ಷಕರ ಮೊದಲ ಹಂತದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 37 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಮತಗಟ್ಟೆಗೆ ಓರ್ವರಂತೆ ಕೇಂದ್ರ ಸರ್ಕಾರದಅಧಿಕಾರಿಗಳನ್ನು ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ನೇಮಕಗೊಂಡ ಅಧಿಕಾರಿಗಳು ಮತಗಟ್ಟೆಯ ಚಲನವಲನ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಮತದಾನ ಪ್ರಕ್ರಿಯೆ ಕುರಿತಂತೆ ನಿಗಾ ವಹಿಸಿ ವರದಿ ಮಾಡುವಂತೆ ಸೂಚನೆ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಸುರಕ್ಷಾ ಕ್ರಮಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮುಖ್ಯವಾಗಿದೆ. ಇದರೊಂದಿಗೆ ತಾವು ಆರೋಗ್ಯದ ಕಾಳಜಿಯೊಂದಿಗೆ ಸೂಕ್ಷ್ಮವಾಗಿ ಕಾರ್ಯನಿರ್ವಹಿಸಿ ಆಯೋಗದ ಮಾರ್ಗಸೂಚಿ ಪಾಲಿಸಬೇಕೆಂದು ಸಲಹೆ ನೀಡಿದರು. ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಅವರು ಮೈಕ್ರೋ ವೀಕ್ಷಕರ ಕರ್ತವ್ಯಗಳು ಹಾಗೂ ಕಾರ್ಯನಿರ್ವಹಣೆ ಕುರಿತಂತೆ ವಿವರಿಸಿದರು.
ಉಪವಿಭಾಗಾಧಿಕಾರಿ ಡಾ| ದಿಲೀಷ್ ಶಶಿ ಹಾಗೂ ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲವಾರ ಉಪಸ್ಥಿತರಿದ್ದರು.ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿಗೆ ತರಬೇತಿ :
ಹಾವೇರಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಅ. 28ರಂದು ನಡೆಯಲಿದ್ದು, ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗಾಗಿ ನಿಯೋಜನೆಗೊಂಡ ಸಿಬ್ಬಂದಿಗೆ ನಗರದ ಹುಕ್ಕೇರಿಮಠ ಕಾಲೇಜಿನಲ್ಲಿ ತರಬೇತಿ ಏರ್ಪಡಿಸಲಾಗಿತ್ತು.
ತಹಶೀಲ್ದಾರ್ ಜಿ.ಎಸ್. ಶಂಕರ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕಮತಗಟ್ಟೆ ಅಧಿಕಾರಿಗಳು ಆಯೋಗದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿಕೋವಿಡ್ ಸುರಕ್ಷಿತಾ ಕ್ರಮಗಳ ಕುರಿತಂತೆ ಮತಗಟ್ಟೆ ಕೇಂದ್ರಗಳಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಅಚ್ಚುಕಟ್ಟಾಗಿ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆ ನಿಯಮಾವಳಿಗಳ ಕುರಿತಂತೆ ತರಬೇತಿಯಲ್ಲಿ ಮನನ ಮಾಡಿಕೊಂಡು ವ್ಯವಸ್ಥಿತ ಹಾಗೂ ಪಾರದರ್ಶಕ ಮತದಾನದ ವ್ಯವಸ್ಥೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಶಿಕ್ಷಣಾಧಿಕಾರಿ ಭಗವಂತಗೌಡರ ಅವರು ಸಂಪನ್ಮೂಲ ಅಧಿಕಾರಿಗಳು ನಿಯೋಜಿತ ಮತಗಟ್ಟೆ ಅಧಿಕಾರಿಗಳಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತಂತೆ ತರಬೇತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.