ಅರಣ್ಯ ಉಳಿಸಿ ಜಲಮೂಲ ರಕ್ಷಿಸಿ

Team Udayavani, Mar 23, 2021, 12:38 PM IST

ಅರಣ್ಯ ಉಳಿಸಿ ಜಲಮೂಲ ರಕ್ಷಿಸಿ

ರಾಣಿಬೆನ್ನೂರ: ಭೂಮಿ ಮೇಲೆ ಜೀವಿಸುವ ಸಕಲ ಜೀವರಾಶಿಗಳಿಗೂ ನೀರು ಬೇಕು. ನೀರು ಸಿಗಲು ಮಳೆಬೇಕು. ಮಳೆ ಬರಲು ಅರಣ್ಯವಿರಬೇಕು. ಅದಕ್ಕಾಗಿಅರಣ್ಯ ನಾಶ ಮಾಡದೇ ಅದನ್ನು ಬೆಳೆಸುವ ಮೂಲಕ ಸಂರಕ್ಷಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಅಣ್ಣುಗೌಡ ಪಾಟೀಲ ಹೇಳಿದರು.

ನಗರಸಭೆ ಗುಡ್ಡದ ಸ್ಮಾರಕ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತುನಗರಸಭೆ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾನೂನು ನೆರವು- ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭೂಮಿ ಶೇ.70 ಭಾಗ ನೀರಿನಿಂದ ಆವೃತಗೊಂಡು, ಶೇ. 97 ಉಪ್ಪು ನೀರು ಮತ್ತು ಕೇವಲ ಶೇ.3 ಮಾತ್ರಕುಡಿಯಲು ಯೋಗ್ಯವಿದೆ. ಅಭಿವೃದ್ಧಿ ನೆಪದಲ್ಲಿ ಮರಕಡಿದು ಕಾಂಕ್ರೀಟ್‌ ರಸ್ತೆ ಮಾಡಿದ್ದರಿಂದ ತಾಪಮಾನ ಹೆಚ್ಚಾಗಿದೆ. ಇದರಿಂದ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದರು.

ಮಳೆ ನೀರು ಸಮರ್ಪಕ ರೀತಿಯಲ್ಲಿ ಸಂಗ್ರಹಿಸಿ ಅದರ ಉಪಯೋಗ ಪಡೆಯಬೇಕು. ಕೆರೆ-ಕಟ್ಟೆ,ಹಳ್ಳ-ಕೊಳ್ಳಗಳಲ್ಲಿ ನೀರು ನಿಲ್ಲುವುದಕ್ಕೆ ವ್ಯವಸ್ಥೆಮಾಡಬೇಕು. ಕಳೆದೆರೆಡು ವರ್ಷಗಳಲ್ಲಿ ರಾಜ್ಯ-ರಾಷ್ಟ್ರಅನುಭವಿಸಿದ ಬರ ಹಾಗೂ ಅದರ ನೆರಳಲ್ಲಿ ಬೆಂದು ಹೋಗಿರುವ ಜನತೆ ಹಸಿರಿನ ಉಳಿವಿಗಾಗಿ ಅರಣ್ಯಬೆಳೆಸಬೇಕು. ದೇಶದಲ್ಲಿ ಕೃಷಿಗಾಗಿ ಬಳಸುವ ನೀರಿನಪ್ರಾಮಾಣದ ಶೇ.45 ಭತ್ತದ ಬೆಳೆಗೆ ಬಳಸುತ್ತಿರುವುದುವಿಶೇಷ. ಬದಲಿಗೆ ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಕೊಳ್ಳಬೇಕು ಎಂದರು.

ನಗಸಭೆ ಆಯುಕ್ತ ಡಾ| ಮಹಾಂತೇಶ ಎನ್‌.ಪ್ರಾಸ್ತಾವಿಕ ಮಾತನಾಡಿದರು. ಎಸ್‌ಜೆಎಂವಿ ಮಹಿಳಾಕಾಲೇಜು ಪ್ರಾಧ್ಯಾಪಕ ಡಾ| ಈಶ್ವರಪ್ಪ ಉಪನ್ಯಾಸನೀಡಿದರು. ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಸದಸ್ಯೆ ಗಂಗಮ್ಮ ಹಾವನೂರ, ಮಂಜುಳಾ ಹತ್ತಿ, ವಕೀಲರ ಸಂಘದ ಅಧ್ಯಕ್ಷ ಬಿ.ಎಚ್‌. ಬುರಡಿಕಟ್ಟಿ, ಉಪಾಧ್ಯಕ್ಷ ಕುಮಾರ ಮಡಿವಾಳರ, ಕಾರ್ಯದರ್ಶಿ ಗಣೇಶಮುಂಡಾಸದ, ನ್ಯಾಯವಾದಿ ಎಚ್‌.ಡಿ. ಹೊನ್ನಕ್ಕಳವರ, ಜಗದೀಶ, ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.