ಡಿಡಿಪಿಐ ಕಚೇರಿಗೆ ವರ್ಲಿ ಕಲೆ ರಂಗು

ಗಮನ ಸೆಳೆಯುತ್ತಿದೆ ಕಲಾ ಶಿಕ್ಷಕರ ಕೈಚಳಕದ ಚಿತ್ತಾರ

Team Udayavani, Sep 7, 2020, 3:49 PM IST

ಡಿಡಿಪಿಐ ಕಚೇರಿಗೆ ವರ್ಲಿ ಕಲೆ ರಂಗು

ಹಾವೇರಿ: ಸ್ಥಳೀಯ ಜಿಲ್ಲಾಡಳಿತಭವನದಲ್ಲಿರುವ ಸಾರ್ವಜನಿಕ ಶಿಕ್ಷಣಇಲಾಖೆಯ ಕಟ್ಟಡಕ್ಕೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ  ಶಿಕ್ಷಕರು ಸಾಂಪ್ರದಾಯಿಕ ವರ್ಲಿ ಕಲೆಯ ಟಚ್‌ ನೀಡಿದ್ದು, ಕಚೇರಿಯ ಗೋಡೆಗಳು ಎಲ್ಲರ ಗಮನ ಸೆಳೆಯುತ್ತಿವೆ.

ಸ್ಥಳೀಯ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಹೊರ ಆವರಣದ ಗೋಡೆಗಳಿಗೆ ಕಳೆದ ಒಂದು ತಿಂಗಳಿನಿಂದ 25 ಜನ ಕಲಾ ಶಿಕ್ಷಕರ ಕೈಚಳಕದಿಂದ ಮೂಡಿಬಂದ ವರ್ಲಿ ಕಲೆಯ ಪೇಂಟಿಂಗ್‌ ಕಚೇರಿಗೆ ಆಗಮಿಸುವವರನ್ನು ಆಕರ್ಷಿಸುತ್ತಿದೆ.

ಕಲಾ ಶಿಕ್ಷಕರ ಕೈ ಚಳಕದಿಂದ ಕಚೇರಿಯ ಗೋಡೆಗಳು ವರ್ಲಿಕೆಯ ರಂಗು ಪಡೆದುಕೊಂಡಿವೆ. ಶೈಕ್ಷಣಿಕ ಯೋಜನೆಗಳ ಮಾಹಿತಿಯ ಪ್ಲಾಸ್ಟಿಕ್‌ ಫ್ಲೆಕ್ಸ್‌, ಫಲಕಗಳ ಬದಲಿಗೆ ಪರಿಸರ ಸ್ನೇಹಿ ಗೋಡೆ ಬರಹಗಳಲ್ಲಿ ಮಾಹಿತಿ, ಆಕರ್ಷಣೀಯ ಗೋಡೆ ಬರಹಗಳ ಚಿತ್ತಾರಗಳು ಕಚೇರಿಗೆ ಆಗಮಿಸುವ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮನಸೂರೆಗೊಳ್ಳುತ್ತಿವೆ.

ಕಲಾ ಶಿಕ್ಷಕರ ಆಸಕ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಬೆನ್ನೆಲುಬಾಗಿ ನಿಂತು ಸುಣ್ಣದಿಂದ ಮಾಸಿ ಹೋದಂತೆ ಕಾಣುತ್ತಿದ್ದ ಗೋಡೆಗಳಿಗೆ ಅಲಂಕಾರದ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತಂತೆ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ಕಲಾ ಮಾಧ್ಯಮದಲ್ಲಿ ಮಾಹಿತಿಯ ಹೂರಣವನ್ನು ಆಕರ್ಷಕವಾಗಿ ಜನರಿಗೆ ತಲುಪಿಸಲು ಯಶಸ್ವಿಯಾಗಿದ್ದಾರೆ. ಕಲಾ ಶಿಕ್ಷಕರ ಕೈಚಳಕದಿಂದ ಗೋಡೆಯ ಕೆಳಭಾಗದಲ್ಲಿ ವರ್ಲಿ ಕಲೆಯ ಚಿತ್ರಗಳು, ಮೇಲ್ಭಾಗದಲ್ಲಿ ಶಿಕ್ಷಣ ಇಲಾಖೆಯ ಯೋಜನೆಗಳಾದ ಉಚಿತ ಪಠ್ಯಪುಸ್ತಕ ವಿತರಣೆ, ಉಚಿತ ಸೈಕಲ್‌ ವಿತರಣೆ, ಶೂ, ಸಾಕ್ಸ್‌ ವಿತರಣೆ, ಸಮವಸ್ತ್ರ ವಿತರಣೆ, ಅಕ್ಷರ ದಾಸೋಹ, ಕ್ಷೀರಭಾಗ್ಯ, ವಿಕಲಚೇತನ ಮಕ್ಕಳಿಗೆ ವ್ಯಾಯಾಮ, ವಿಟಮಿನ್‌ ಮಾತ್ರೆಗಳ ವಿತರಣೆ, ಪರಿಸರಜಾಗೃತಿ, ವಿಜ್ಞಾನದ ವಿವಿಧ ಮಾದರಿಗಳ ಪ್ರದರ್ಶನ ಹಾಗೂ ಅಟಲ್‌ ಟೆಂಕರಿಂಗ್‌ ಪ್ರಯೋಗಾಲಯ, ಮಕ್ಕಳ ಗುಂಪು ಅಧ್ಯಯನ, ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್‌ ಕೊಡುಗೆ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಒಳಗೊಂಡಂತೆ ಹಲವು ಶೈಕ್ಷಣಿಕ ಯೋಜನೆಗಳು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸ್ಫೂ ರ್ತಿದಾಯಕ ಚಿತ್ರಗಳು ವರ್ಣಗಳಲ್ಲಿ ಕಂಗೊಳಿಸುತ್ತಿವೆ. ಈ ಚಿತ್ರಗಳಿಗೆ ವರ್ಲಿಯ ಚಿತ್ರಗಳು ಇಂಬು ನೀಡಿ ಆಕರ್ಷಣೆಗೊಳಿಸಿವೆ.

ಜಿಲ್ಲೆಯ ಶಾಲೆಗಳಲ್ಲಿ ಅತ್ಯಂತ ಪ್ರತಿಭಾನ್ವಿತ ಕಲಾ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಜಿಲ್ಲೆಯ ಹಲವು ಶಾಲೆಗಳಲ್ಲಿ ಪೇಂಟಿಂಗ್‌ ಮಾಡುವುದರ ಮೂಲಕ ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ. ಈ ಶಿಕ್ಷಕರಿಗೆ ಮತ್ತಷ್ಟು ಪ್ರೇರಣೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ಹೊರಗಡೆ ಗೋಡೆಯ ಮೇಲೆ ವರ್ಲಿ ಕಲೆಯ ಚಿತ್ರಗಳನ್ನು ಬಿಡಿಸುವುದರ ಮೂಲಕ ಕಚೇರಿಗೆ ಸುಂದರ ವಾತಾವರಣ ಕಲ್ಪಿಸಿದ್ದಾರೆ. ಇದರಿಂದ ಕಚೇರಿಗೆ ಭೇಟಿ ನೀಡುವವರಿಗೆ ಖುಷಿ ನೀಡಿದೆ. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಡಿಡಿಪಿಐ ಅಂದಾನೆಪ್ಪ ವಡಗೇರಿ ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲ ಶಾಲೆಗಳಲ್ಲೂ ವರ್ಲಿ ಕಲೆಯ ಮೂಲಕ ಶೈಕ್ಷಣಿಕ ಜಾಗೃತಿ ಸಂದೇಶಗಳ ಜೊತೆಗೆ ಶಾಲಾ ಗೋಡೆಗಳಿಗೂ ಚಿತ್ತಾರ ಬಿಡಿಸುವ ಮೂಲಕ ಮಕ್ಕಳಲ್ಲಿ ಪಾರಂಪರಿಕ ಕಲೆಯ ಬಗ್ಗೆ ಆಸಕ್ತಿ ಮೂಡಿಸಲು ಉದ್ದೇಶಿಸಲಾಗಿದೆ. ಆಸಕ್ತಿ ತೋರುವ ಸರ್ಕಾರಿ ಕಚೇರಿ ಕಟ್ಟಡಗಳಿಗೂ ವರ್ಲಿ ಕಲೆಯ ಚಿತ್ತಾರಕ್ಕೆ ಚಿತ್ರಕಲಾ ಶಿಕ್ಷಕರ ತಂಡ ಸಿದ್ಧವಿದೆ. ಫ್ಲೆಕ್ಸ್‌, ಪ್ಲಾಸ್ಟಿಕ್‌ ಫಲಕಗಳ ಬದಲಿಗೆ ವರ್ಲಿ ಕಲೆಯ ಚಿತ್ರಗಳಿಗೆ ಅವಕಾಶ ಕಲ್ಪಿಸಿದರೆ ಪರಿಸರ ರಕ್ಷಣೆಯ ಜೊತೆಗೆ ಪಾರಂಪರಿಕ ಕಲೆಗಳಿಗೆ, ಕಲಾವಿದರಿಗೆ ಪ್ರೋತ್ಸಾಹ ದೊರಕುತ್ತದೆ ಎಂದು ವೀಕ್ಷಕರ ಅಭಿಪ್ರಾಯವಾಗಿದೆ.

ಜಿಲ್ಲೆಯಲ್ಲಿ ಪ್ರತಿಭಾನ್ವಿತ ಕಲಾ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಮತ್ತಷ್ಟು ಪ್ರೇರಣೆ ನೀಡುವ ನಿಟ್ಟಿನಲ್ಲಿ ಕಚೇರಿಯ ಹೊರಗಡೆ ಗೋಡೆಯ ಮೇಲೆ ವರ್ಲಿ ಕಲೆಯ ಚಿತ್ರಗಳನ್ನು ಬಿಡಿಸಲು ಸೂಚಿಸಲಾಗಿತ್ತು. ವರ್ಲಿ ಕಲೆಯ ಮೂಲಕ ಕಚೇರಿಗೆ ಸುಂದರ ವಾತಾವರಣ ಕಲ್ಪಿಸಿದ್ದಾರೆ. ಇದು ಕಚೇರಿಗೆ ಭೇಟಿ ನೀಡುವವರಿಗೆ ಖುಷಿ ನೀಡುತ್ತಿದೆ. -ಅಂದಾನಪ್ಪ ವಡಗೇರಿ, ಡಿಡಿಪಿಐ, ಹಾವೇರಿ

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.