ಸ್ವೀಪ್ ಸಮಿತಿಯಿಂದ ಜಾಗೃತಿಗೆ ಮೊಂಬತ್ತಿ ಬೆಳಕಿನ ನಡಿಗೆ
Team Udayavani, Apr 18, 2019, 5:44 PM IST
ಹಾವೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾರರ ಜಾಗೃತಿಗಾಗಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿಯಿಂದ ನಗರದಲ್ಲಿ ಮೊಂಬತ್ತಿ ಬೆಳಕಿನ ನಡಿಗೆ (ಕ್ಯಾಂಡಲ್ ಮಾರ್ಚ್) ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚಾಯಿತಿ ಆವರಣದಲ್ಲಿ ಕ್ಯಾಂಡಲ್ ಮಾರ್ಚ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಕೃಷ್ಣ ಭಾಜಪೇಯಿ, ಕೇಂದ್ರ ಚುನಾವಣಾ ವೆಚ್ಚ ವೀಕ್ಷಕರಾದ ಹಸನ್ ಅಹ್ಮದ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಲೀಲಾವತಿ ಚಾಲನೆ ನೀಡಿದರು.
ಕ್ಯಾಂಡಲ್‌ಗಳನ್ನು ಬೆಳಗಿಸಿದ ವಿವಿಧ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಮಹಿಳಾ
ಸಂಘಟನೆಗಳು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೇಲ್ ವಿದ್ಯಾರ್ಥಿಗಳು ತಾಪಂ ಆವರಣದಿಂದ ಪಿ.ಬಿ.ರಸ್ತೆ ಮಾರ್ಗವಾಗಿ
ಹೊಸಮನಿ ಸಿದ್ದಪ್ಪ ಸರ್ಕಲ್ ವರೆಗೆ ಬೀದಿಗಳಲ್ಲಿ ಕ್ಯಾಂಡಲ್ ಬೆಳಕು ಚೆಲ್ಲುತ್ತ ಮತದಾನದ ಮಹತ್ವ ಸಾರುವ ಜಾಗೃತಿ ಸಂದೇಶಗಳ ಮೂಲಕ ಮತದಾನದ ಜಾಗೃತಿ ಸಂದೇಶ ತಲುಪಿಸಿದರು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕ್ಯಾಂಡಲ್ ಗಳನ್ನು ಉರಿಸಿ, ಮತದಾನ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಕೃಷ್ಣ
ಭಾಜಪೇಯಿ ಪ್ರತಿಜ್ಞಾವಿಧಿ ಬೋಧಿಸಿದರು.
ವಾರ್ತಾಧಿಕಾರಿ ರಂಗನಾಥ್, ತಾಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಚುನಾವಣಾ ತಹಶೀಲ್ದಾರ್ ಚಂದ್ರಶೇಖರ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಜಮಖಾನೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ
ಅಂದಾನೆಪ್ಪ ವಡಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ
ಶಿವಣ್ಣ, ಅಕ್ಷರ ದಾಸೋಹ ಅಧಿಕಾರಿ ಅಡಿಗ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಶಾಖೀರ್ ಅಹ್ಮದ್, ವಿಕಲಚೇತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.