ರೈತರಲ್ಲಿ ಮಂದಹಾಸ ಮೂಡಿಸಿದ ವರುಣ
ಬತ್ತಿ ಹೋಗಿದ್ದ ಕೆರೆ-ಕಟ್ಟೆಗಳಲ್ಲಿ ನೀರು ಸಂಗ್ರಹಮೂರ್ನಾಲ್ಕು ದಿನಗಳಿಂದ ಸುರಿದ ಮಳೆ ಭೂಮಿ ತಂಪು
Team Udayavani, Sep 30, 2019, 6:57 PM IST
ಹಿರಿಯೂರು: ತಾಲೂಕಿನಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭೂಮಿ ತೇವಾಂಶಗೊಂಡಿದ್ದು, ರೈತನ ಮೊಗದಲ್ಲಿ ಸಂತಸದ ಕಳೆ ಮೂಡಿದೆ. ಹಿಂಗಾರು ಬಿತ್ತನೆಗೆ ಅಣಿಯಾಗುತ್ತಿದ್ದಾನೆ. ಹಿರಿಯೂರು ನಗರ ಸೇರಿದಂತೆ ಹೊಸಹಳ್ಳಿ, ಮಾವಿನ ಮಡು, ಗೌಡನಹಳ್ಳಿ, ಮಾಳಗೊಂಡನಹಳ್ಳಿ, ಪಿಲಾಲಿ, ಉಡುವಳ್ಳಿ, ಮೇಟಿ ಕುರ್ಕೆ, ಕೂಡ್ಲಹಳ್ಳಿ, ಕಸುವನಹಳ್ಳಿ ಕೆರೆಗಳು ಮಳೆಯಿಂದ ವಿವಿಧ ಕೆರೆ ಕಟ್ಟೆಗಳಲ್ಲಿ ನೀರು ತುಂಬಿಕೊಂಡಿವೆ. ಮಳೆ ಕೊರತೆ ಅನುಭವಿಸಿದ್ದ ರೈತರಲ್ಲಿ ಮಂದಹಾಸದ ನಗೆ ಬೀರಿದೆ.
ಸತತವಾಗಿ ಮೂರು ದಿನಗಳಿಂದ ಸಂಜೆ ಮತ್ತು ರಾತ್ರಿ ಮಳೆಯಾಗುತ್ತಿದೆ. ಮದ್ದರಹಳ್ಳದಲ್ಲಿ 10-15 ಅಡಿ ಎತ್ತರದಷ್ಟು ನೀರು ಹರಿದು ಹೋಗುತ್ತಿದೆ. ಕತ್ತೆ ಹೊಳೆ ತುಂಬಿ ಉಡುವಳ್ಳಿ ಕೆರೆಗೆ ನೀರು ಹರಿದು ಬರುತ್ತಿದೆ. ಮೇಟಿ ಕುರ್ಕೆ, ಕೂಡ್ಲಹಳ್ಳಿ, ಕಸುವನಹಳ್ಳಿ ಕೆರೆಗಳು ನೀರು ತುಂಬಿ ಕೊಂಡಿವೆ. ಬಹುತೇಕ ತಾಲೂಕಿನ ಹಳ್ಳ-ಕೊಳ್ಳ, ಕೆರೆಗಳಲ್ಲಿ ಮಳೆಯಿಂದ
ನೀರು ತುಂಬಿ ರೈತರಲ್ಲಿ ಸಂತಸ ಮೂಡಿಸಿದೆ. ಕಳೆದ 6 ತಿಂಗಳಿಂದ ಬಿಸಿಲಿನ ತಾಪಕ್ಕೆ ಅಂತರ್ಜಲ ಕುಸಿದು ನೀರು ಬತ್ತಿ ಹೋಗಿದ್ದು, ಇದೀಗ ಸಾರ್ವಜನಿಕರ ಕೊಳವೆ ಬಾವಿಗಳಲ್ಲಿ ನೀರು ಕಾಣಿಸಿ
ಕೊಂಡು ಜನರಿಗೆ ನೆಮ್ಮದಿ ತಂದಿದೆ.
ತಾಲೂಕಿನಲ್ಲಿ ಶನಿವಾರ ರಾತ್ರಿ ಹಿರಿಯೂರಿನಲ್ಲಿ 39.2 ಮಿ.ಮೀ,
ಬಬ್ಬೂರು 52.6 ಮಿ.ಮೀ, ಇಕ್ಕನೂರು 18.8 ಮಿ.ಮೀ, ಈಶ್ವರಗೆರೆ 27 ಮಿ.ಮೀ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.