
ಒಡಲಲ್ಲೇ ಜಲಾಶಯವಿದ್ರೂ ಬರ!
ಡೆಡ್ ಸ್ಟೋರೇಜ್ ಹಂತ ತಲುಪಿದ ವಾಣಿವಿಲಾಸ ಸಾಗರ ನೀರಿನ ಸಂಗ್ರಹ
Team Udayavani, May 25, 2019, 5:31 PM IST

ಹಿರಿಯೂರು: ಒಡಲಲ್ಲೇ ವಾಣಿವಿಲಾಸ ಸಾಗರ ಜಲಾಶಯವನ್ನು ಹೊಂದಿದ್ದರೂ ತಾಲೂಕಿನ ಜನರು ಹನಿ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ತಾಲೂಕಿನಾದ್ಯಂತ ನೀರಿನ ಅಭಾವ ದಿನೇ ದಿನೇ ಹೆಚ್ಚುತ್ತಿದೆ. ತಾಲೂಕು ಆಡಳಿತ ಗ್ರಾಮೀಣ ಭಾಗಕ್ಕೆ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿದ್ದರೂ ಸಾಲುತ್ತಿಲ್ಲ. ಹಿರಿಯೂರು ನಗರಕ್ಕೆ ನೀರು ಪೂರೈಕೆ ಮಾಡುತ್ತಿದ್ದ ವಾಣಿವಿಲಾಸ ಸಾಗರದಲ್ಲಿನ ನೀರು ಸಂಗ್ರಹ ಡೆಡ್ ಸ್ಟೋರೆಜ್ ಹಂತ ತಲುಪಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ.
ನಗರದಲ್ಲಿ 60 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, 31 ವಾರ್ಡ್‌ಗಳಿಗೆ ನಗರಸಭೆ ನೀರು ಸರಬರಾಜು ಮಾಡಬೇಕಿದೆ. ವಾಣಿವಿಲಾಸ ಸಾಗರದ ನೀರಿನ ಮಟ್ಟ ಕಡಿಮೆ ಆಗಿರುವುದರಿಂದ ಓವರ್‌ಹೆಡ್ ಟ್ಯಾಂಕ್‌ಗಳಿಗೆ ನೀರು ಪೂರೈಕೆ ಆಗುತ್ತಿಲ್ಲ. ನೀರು ಸರಬರಾಜು ಕೇಂದ್ರಕ್ಕೆ ವಿವಿ ಸಾಗರದ ನೀರು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹರಿದು ಬರುತ್ತಿದೆ, ಇದರಿಂದ ನಗರದಲ್ಲಿ
ಪ್ರತಿ ಐದು ದಿನಗಳಿಗೊಮ್ಮೆ ಕುಡಿಯುವ ನೀರನ್ನು ನಗರಸಭೆ ಪೂರೈಕೆ ಮಾಡುತ್ತಿದ್ದಾರೆ. ಆ ನೀರು ಕೇವಲ 20 ನಿಮಿಷ ಮಾತ್ರ ನಲ್ಲಿಗಳಲ್ಲಿ ಬರುತ್ತದೆ. ನೀರು ಪಡೆಯಲು ಸಾರ್ವಜನಿಕ ನಳಗಳ ಬಳಿ ಕಿತ್ತಾಟ, ಜಗಳ ಸಾಮಾನ್ಯವಾಗಿಬಿಟ್ಟಿವೆ.
ಮಳೆ ಕೊರತೆ ಹಾಗೂ ಅಂತರ್ಜಲ ಮಟ್ಟ ಕುಸಿತದಿಂದ ಬಹುತೇಕ ಕೊಳವೆಬಾವಿಗಳು ಬತ್ತಿ ಹೋಗಿವೆ. ಶುದ್ಧ ಕುಡಿಯುವ ನೀರಿನ ಘಟಕಗಳ ಮುಂದೆ ಜನರ ದಂಡು ನೆರೆದಿರುತ್ತದೆ. ಕುಡಿಯುವ ನೀರಿಗಾಗಿ ಜನರು ಗಂಟೆಗಟ್ಟಲೆ ಕಾಯುವಂತಾಗಿದೆ. ಕೊಡ, ಕ್ಯಾನ್‌ಗಳಲ್ಲಿ ನೀರು ಪಡೆಯಲು ಪರದಾಟ ನಡೆಸಬೇಕಿದೆ. ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಶುದ್ಧ ನೀರು ಘಟಕಗಳ ಮುಂದೆ ನೀರಿಗಾಗಿ ಜನರು ಹರಸಾಹಸ ಮಾಡುವ ದೃಶ್ಯ ಕಂಡು ಬರುತ್ತಿದೆ. ಆದ್ದರಿಂದ ನೀರಿನ ಬವಣೆ ನೀಗಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಗಮನ ನೀಡಬೇಕಿದೆ.
ವರುಣ ಕೃಪೆಗೆ ದೇವರ ಮೊರೆ
ನೀರಿನ ಬವಣೆಯಿಂದ ಜನರು ಕಂಗಾಲಾಗಿದ್ದಾರೆ. ನೀರಿಗಾಗಿ ಕೊಡ, ಕ್ಯಾನ್‌ಗಳನ್ನು ಹಿಡಿದು ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಬರುವ ಸ್ಥಳಗಳ ಬಳಿ ಕೈಗಾಡಿ, ಆಟೋ, ದ್ವಿಚಕ್ರ ವಾಹನ, ಲಗೇಜ್ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಮಳೆಯಾದರೆ ನೀರಿನಮ ಸಮಸ್ಯೆ ಸ್ಪಲ್ಪವಾದರೂ ನಿವಾರಣೆಯಾಗುತ್ತದೆ. ಹಾಗಾಗಿ ಸಾರ್ವಜನಿಕರು ದೇವರ ಮೊರೆ ಹೋಗುತ್ತಿದ್ದಾರೆ. ವಿವಿಧ ದೇವಾಲಯಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಯುತ್ತಿವೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.