ಹಿರಿಯರನ್ನು ಗೌರವಿಸಿ
ಯುವಕರು ಹಿರಿಯರ ಮಾರ್ಗದರ್ಶನ ಪಾಲಿಸಲಿ: ಡಾ| ಶ್ರೀಪತಿ
Team Udayavani, Dec 16, 2019, 5:50 PM IST
ಹಿರಿಯೂರು: ಹಿರಿಯ ನಾಗರಿಕರನ್ನು ಪ್ರೀತಿ ಹಾಗೂ ಗೌರವದಿಂದ ಕಾಣುವಂತಹ ಕೆಲಸವನ್ನು ಇಂದಿನ ಯುವ ಸಮೂಹ ಮಾಡಬೇಕು ಎಂದು ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎನ್. ಶ್ರೀಪತಿ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಾಣಿವಿಲಾಸ ವಿದ್ಯಾಸಂಸ್ಥೆ ಹಾಗೂ ಕಳವಿಭಾಗಿ ಶ್ರೀ ರಂಗನಾಥಸ್ವಾಮಿ ಸಾಂಸ್ಕೃತಿಕ ಕಲಾ ಸಂಘ ಸಕ್ಕರ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಗೌರವದ ಭಾವನೆ ತೋರದೆ ಅವರ ಮಾರ್ಗದರ್ಶನ ಪಡೆದು ಉನ್ನತಿ ಸಾಧಿಸಬೇಕು ಎಂದರು. ಸಮಾಜಸೇವಕಿ ಶಶಿಕಲಾ ರವಿಶಂಕರ್ ಮಾತನಾಡಿ, ಸಮಾಜದಲ್ಲಿ ದುಡಿಮೆಯ ನೆಪದಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ದೂರ ಮಾಡಬಾರದು. ಹಣ, ಅಧಿಕಾರ, ಆಸ್ತಿ, ಅಂತಸ್ತುಗಳಿಗೆ ಆದ್ಯತೆ ನೀಡದೆ ತಂದೆ-ತಾಯಿ, ಗುರುಹಿರಿಯರನ್ನು ಗೌರವಿಸಿದಾಗ ಮಾತ್ರ ಮಾನವೀಯ ಮೌಲ್ಯಗಳು ಉಳಿಯುತ್ತವೆ ಎಂದು ಅಭಿಪ್ರಾಯಪಟ್ಟರು.
ಪ್ರೊ| ಎಚ್.ಎನ್. ನರಸಿಂಹಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ, ಅನುಭವ ಹಾಗೂ ಚಿಂತನೆಗಳನ್ನು ರೂಢಿಸಿಕೊಂಡಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ಅನುಭವ ಎನ್ನುವುದು ಯಾವುದೇ ಶಾಲಾ-ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕಲಿತ ವಿದ್ಯೆಗಿಂತ ಅಮೂಲ್ಯವಾದುದು ಎಂದರು.
ಅಧ್ಯಕ್ಷತೆ ವಹಿಸಿದ್ದ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಸ್. ರಘುನಾಥ್ ಮಾತನಾಡಿ, ಮಾನವೀಯತೆ ಮತ್ತು ಮನುಷ್ಯತ್ವದ ಕೊರತೆಯಿಂದ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಇಂದಿನ ಯುವ ಸಮುದಾಯ ತಂದೆ-ತಾಯಿಗಳನ್ನು ಮರಣದ ನಂತರ ಪೂಜಿಸುವ ಬದಲು ಬದುಕಿರುವಾಗಲೇ ಪ್ರೀತಿಯಿಂದ ಕಾಣುವ ಗುಣ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಮಕ್ಕಳು ಮನೆಯಲ್ಲಿ ಗುರು-ಹಿರಿಯರನ್ನು, ತಂದೆ-ತಾಯಿಗಳನ್ನು, ಪ್ರೀತಿಸುವ ಗೌರವಿಸುವ ಗುಣ ಬೆಳೆಸಿಕೊಳ್ಳಲಿ ಎಂಬ ಉದ್ದೇಶದಿಂದ ಹಿರಿಯ ನಾಗರಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಾದ ಜೆ.ಸಿ.ನಾಗಭೂಷಣಯ್ಯ, ಎಚ್. ರಾಮಚಂದ್ರಪ್ಪ, ಎಸ್.ಶಂಭುಲಿಂಗಯ್ಯ, ಎನ್. ವೆಂಕಟೇಶಯ್ಯ, ಸಣ್ಣಭೀಮಣ್ಣ, ಪ್ರೊ| ಬಿ.ಕೆ. ನಾಗಣ್ಣ, ಜಗನ್ನಾಥ ಗುಪ್ತಾ, ದೇವರಾಜಮೂರ್ತಿ, ಜೋಗಪ್ಪ, ಸುಂದರಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಗೌರವಾಧ್ಯಕ್ಷ ಕೆ.ಆರ್. ವೆಂಕಟೇಶ್, ಛೇರ್ಮನ್ ಬಿ.ಎಸ್. ನವಾಬ್ ಸಾಬ್, ಉಪಾಧ್ಯಕ್ಷ ಎಚ್.ಎಸ್. ಸುಂದರರಾಜ್, ಕಾರ್ಯದರ್ಶಿ ಎಂ.ಎಸ್. ರಾಘವೇಂದ್ರ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ. ವೀರಣ್ಣ, ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಎಸ್.ಜಿ. ರಂಗಸ್ವಾಮಿ ಸಕ್ಕರ, ಟಿ. ಮಲ್ಲೇಶಪ್ಪ, ಅಂಬಣ್ಣ, ಹಿರಿಯ ಪತ್ರಕರ್ತರಾದ ಪಿ.ಆರ್. ಸತೀಶ್ ಬಾಬು, ಎಂ.ಬಿ. ಲಿಂಗಪ್ಪ, ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿಯರಾದ ಹೇಮಲತಾ, ಶಾಂತಾಬಾಯಿ, ವ್ಯವಸ್ಥಾಪಕಿ ಮೊಹಸಿನಾ ಫಿರ್ದೋಸ್ ಸೇರಿದಂತೆ ಶಿಕ್ಷಕ- ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.