ನೀರಿನ ಅಭಾವ ನೀಗಿಸಲು ಕ್ರಮ ಕೈಗೊಳ್ಳಿ: ಪೂರ್ಣಿಮಾ
ನೀರಿನ ಸಮಸ್ಯೆ ತೀವ್ರಗೊಂಡಿರುವ ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ
Team Udayavani, Aug 7, 2019, 4:57 PM IST
ಹಿರಿಯೂರು: ವಲಯ ಅರಣ್ಯಾಧಿಕಾರಿ ಕಚೇರಿ ವತಿಯಿಂದ ನೀಡಿದ ಸೋಲಾರ್ ಲೈಟ್ ಮತ್ತು ಹೀಟರ್ ಅನ್ನು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ವಿತರಿಸಿದರು.
ಹಿರಿಯೂರು: ನಗರದ ತಾಲೂಕು ಕಚೇರಿ ಮುಂಭಾಗದಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ 2018-19ನೇ ಸಾಲಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಲೈಟ್ ಮತ್ತು ಹೀಟರ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಮಳೆ ಅಭಾವದಿಂದ ಅಂತರ್ಜಲ ಮಟ್ಟ ಕಡಿಮೆಯಾಗಿ ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಈಗಾಗಲೇ ನೀರಿನ ಅಭಾವ ಇರುವ ಕಡೆ ಟ್ಯಾಂಕರ್ ಮೂಲಕ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ತಾಲೂಕಿನಲ್ಲಿ ಹೊಸದಾಗಿ 180 ಕೊಳವೆಬಾವಿಗಳನ್ನು ಕೊರೆಸಲಾಗಿದೆ. ಜನರಿಗೆ ನೀರಿನ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಅರಣ್ಯ ಇಲಾಖೆಯ ಚಟುವಟಿಕೆಗಳು ಕಡಿಮೆಯಾಗಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದಾರೆಯೇ ಅಥವಾ ಇಲ್ಲವೇ ಎಂಬುದೇ ಗೊತ್ತಾಗುತ್ತಿಲ್ಲ. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಅರಣ್ಯ ಇಲಾಖೆಯವರು ಎಚ್ಚೆತ್ತುಕೊಂಡು ಸಮರ್ಪಕವಾಗಿ ಕೆಲಸ ಮಾಡಬೇಕೆಂದು ತಾಕೀತು ಮಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ಆರ್. ನಾಗೇಂದ್ರ ನಾಯ್ಕ ಮಾತನಾಡಿ, ಅರಣ್ಯ ಇಲಾಖೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಸರಿಯಾಗಿ ಅನುಷ್ಠಾನಗೊಳಿಸಬೇಕು, ಆಯಾ ವರ್ಷದ ಸೌಲಭ್ಯಗಳನ್ನು ನಿಗದಿತ ಅವಧಿಯೊಳಗೇ ವಿತರಣೆ ಮಾಡಬೇಕು. ವಿಳಂಬ ಮಾಡಿದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ. ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೇಶ್ವರಿ, ಬಿಜೆಪಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಡಿ.ಟಿ. ಶ್ರೀನಿವಾಸ್, ತಾಲೂಕು ಬಿಜೆಪಿ ಅಧ್ಯಕ್ಷ ದ್ಯಾಮೇಗೌಡ, ಲಿಂಗರಾಜು, ಅರಣ್ಯಾಧಿಕಾರಿ ಹರ್ಷ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.