ಶರಣರ ಸಂಗದಲ್ಲಿದೆ ದೊಡ್ಡ ಶಕ್ತಿ: ಶಿಮುಶ

ಸರಳ ಜೀವನ ಮೈಗೂಡಿಸಿಕೊಳ್ಳಿ •ಸತ್ಸಂಗದಿಂದ ನಡೆಯಲಿದೆ ಸತ್ಕಾರ್ಯ

Team Udayavani, Aug 17, 2019, 11:42 AM IST

17-Agust-17

ಹೊಳಲ್ಕೆರೆ: ಅಂತಾಪುರದಲ್ಲಿ ಗ್ರಾಮಸ್ಥರು ಬಸವಣ್ಣವರ ವಚನ ಸಂಪುಟಗಳನ್ನು ಹೊತ್ತು ಮುರುಘಾ ಶರಣರ ಅದ್ಧೂರಿ ಮೆರವಣಿಗೆ ನಡೆಸಿದರು.

ಹೊಳಲ್ಕೆರೆ: ಯಾರು ಜೀವನದಲ್ಲಿ ಸತ್ಸಂಗಕ್ಕೆ ಒಳಗಾಗುತ್ತಾರೊ, ಶರಣರ, ಸಜ್ಜನರ ಸಂಗ ಮಾಡುತ್ತಾರೋ ಅಂಥವರು ತಮ್ಮ ದೈನಂದಿನ ಜೀವನದಲ್ಲಿ ಮಹತ್ಕಾರ್ಯಗಳನ್ನು ಮಾಡುತ್ತಾರೆ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

ಬಸವಕೇಂದ್ರ ಮುರುಘಾಮಠದ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಶ್ರಾವಣ ಮಾಸದ ಅಂಗವಾಗಿ ತಾಲೂಕು ಅಂತಾಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣ ದರ್ಶನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಪ್ರಭುದೇವರ ಜೀವನದ ಔನ್ನತ್ಯವೆಂದರೆ ಶರಣರ ಸಂಗವಾಗಿತ್ತು. ಲೌಕಿಕ, ಭೌತಿಕ, ಆಸೆ, ಅಪೇಕ್ಷೆಗಳನ್ನು ಅಳಿದು ಅಕ್ಕಮಹಾದೇವಿ ಅನುಭವ ಮಂಟಪಕ್ಕೆ ಹೋದರು. ಶರಣರ ಸಂಗದಲ್ಲಿ ದೊಡ್ಡ ಶಕ್ತಿಯೇ ಇದೆ. ಶರಣರೆಂದರೆ, ಸಾತ್ವಿಕವಾದ ಸರಳವಾದ ಜೀವನ ಮಾಡುವುದು. ಸತ್ಸಂಗದಲ್ಲಿ ಇದ್ದವರಿಗೆ ಒಳ್ಳೆಯ ಆಲೋಚನೆಗಳು ಬರುತ್ತವೆ. ಬದುಕು ಸುಗಮವಾಗಿ ಸಾಗುತ್ತದೆ. ಸತ್ಸಂಗದಿಂದ ಸತ್ಕಾರ್ಯಗಳು ನೆರವೇರುತ್ತವೆ. ಸತ್‌ಚಿಂತನೆಗಳು ಹೊರಹೊಮ್ಮುತ್ತವೆ. ಸತ್‌ಚಿಂತನೆಗಳಿಂದಾಗಿ ಸಂಸ್ಕಾರವಂತರಾಗಿ ಸತ್ಕಾರ್ಯಗಳನ್ನು ಮಾಡುತ್ತಾರೆ ಎಂದರು.

ಮುರುಘಾಮಠದ ನೂರಾರು ಭಕ್ತರು ಈ ಊರಿನಲ್ಲಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಪ್ರತಿಯೊಬ್ಬ ತಂದೆ ತಾಯಿಯ ಆದ್ಯ ಕರ್ತವ್ಯ. ಹಾಗಾಗಿ ಅವರನ್ನು ಕೂಲಿಗೆ ಕಳುಹಿಸಬಾರದು. ಇಂದು ಕಲಿಕೆಯ ಜತೆಗೆ ಗಳಿಸುವಿಕೆಗೂ ತೊಡಗಿ ಇಂದು ಹಲವಾರು ವಿದ್ಯಾರ್ಥಿಗಳು ಉನ್ನತ ಹಂತದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಡತನ ಶಿಸ್ತಿನ ಪಾಠ ಕಲಿಸುತ್ತದೆ. ಬಡತನವಿದೆ ಎಂದು ಚಿಂತೆ ಮಾಡಬಾರದು. ನಿಮ್ಮ ರಟ್ಟೆಗಳಿಗೆ ಬಡತನವನ್ನು ಒಧ್ದೋಡಿಸುವ ದಾರಿದ್ರ್ಯತನವನ್ನು ತೊಲಗಿಸುವ ಶಕ್ತಿಯಿದೆ ಎಂದರು.

ಸತತ ಬರಗಾಲದಿಂದ ಈ ನಾಡಿಗೆ ವಿಮೋಚನೆ ನೀಡಬೇಕು. ಬರವಿಲ್ಲದಂತೆೆ ಸಮೃದ್ಧಿ ನಾಡು ಮಾಡಬೇಕು. ಅದರಲ್ಲಿಯೂ ಚಿತ್ರದುರ್ಗ ಜಿಲ್ಲೆಗೆ ನೀರಾವರಿ ವ್ಯವಸ್ಥೆಗೆ ಮುರುಘಾಮಠ 25 ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದೆ. ಅಧಿಕಾರದಲ್ಲಿ ಯಾವ ಪಕ್ಷದ ಸರ್ಕಾರವಿದ್ದರೂ ಪರವಾಗಿಲ್ಲ. ಆದರೆ ನಮ್ಮ ಭಾಗದ ಜನರ ಜೀವನಕ್ಕೆ ನೀರಾವರಿ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸುತ್ತಲೇ ಬಂದಿದ್ದೇವೆ ಎಂದರು.

ಸತ್ಕಾರ್ಯಗಳು ವಿಷಯ ಕುರಿತು ವಿಷಯಾವಲೋಕನ ಮಾಡಿದ ವಸಂತಕುಮಾರ್‌, ಅಜ್ಞಾನದಿಂದ ಜ್ಞಾನದೆಡೆಗೆ ನಮ್ಮನ್ನು ಒಯ್ಯುವ ಕಾರ್ಯಕ್ರಮ ಈ ಕಲ್ಯಾಣ ದರ್ಶನ. ಸತ್ಕಾರ್ಯಗಳು ಎಂದರೆ ಉತ್ತಮವಾದ ಜನಪರವಾದ ಕೆಲಸಗಳನ್ನು ಮಾಡುವುದು. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಹಾಗೆಯೇ ನಾನಾ ವಿಧದ ಸಂಪ್ರದಾಯ, ಸಂಸ್ಕೃತಿಗಳನ್ನು ಒಳಗೊಂಡ ರಾಷ್ಟ್ರ. ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಒಗ್ಗೂಡುತ್ತಾರೆ ಆದರೆ ದೇವರ ಹೆಸರಿನಲ್ಲಿ ಬಹಳಷ್ಟು ಜನ ಮೋಸ ಮಾಡುತ್ತಾರೆ. ಕಾರಣ ಮೌಡ್ಯತನದಿಂದಾಗಿ. ಮೌಡ್ಯದಿಂದ ನಾವು ಹೊರಬರಬೇಕು. ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಬಹಳಷ್ಟು ಜನ ಒಂದು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಅಂಥವರಿಗೆ ಸಹಾಯ ಮಾಡುವುದರಿಂದ ಸಹಕಾರ ನೀಡಿದಂತಾಗುವುದು ಎಂದರು.

ಶಿರಸಿ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮಿಗಳು, ಎಲ್.ಬಿ. ರಾಜಶೇಖರ್‌, ಪ.ಪಂ ಸದಸ್ಯ ಮುರುಗೇಶ್‌, ಪರಮೇಶ್ವರಪ್ಪ, ಬಿ.ಸಿ. ರಂಗಪ್ಪ, ತಿಪ್ಪೇಸ್ವಾಮಿ ಮುಂತಾದವರಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಎಚ್.ರೇವಣಸಿದ್ದಪ್ಪ ಸ್ವಾಗತಿಸಿದರು.

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.