ಪರಿಹಾರ ವಿತರಣೆಯಲ್ಲಿ ತಾರತಮ್ಯ

ನಿರಾಶ್ರಿತರ ಆರೋಪ ಅಧಿಕಾರಿಗಳ ಧೋರಣೆ ಖಂಡಿಸಿ ಧರಣಿ ಸತ್ಯಾಗ್ರಹ

Team Udayavani, Nov 21, 2019, 3:15 PM IST

21-November-16

ಹೊಳೆಆಲೂರ: ನೆರೆಹಾವಳಿಯಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿರುವ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಿರುವ ಧೋರಣೆ ಖಂಡಿಸಿ ಹೊಳೆಆಲೂರ ನಾಡ ಕಚೇರಿ ಎದುರು ಸಾರ್ವಜನಿಕರು ಬೆಳಗ್ಗೆಯಿಂದ ಸಂಜೆಯವರೆಗೆ ಧರಣಿ ಸತ್ಯಾಗ್ರಹ ನಡೆಸಿದರು.

ಸಂಜೆ ತಹಶೀಲ್ದಾರ್‌ ಸಮಾಧಾನ ಪಡಿಸಿದ್ದರಿಂದ ಧರಣಿ ಕೈಬಿಡಲಾಯಿತು. ಮೊದಲ ಹಂತದಲ್ಲಿ ಅವಕಾಶ ವಂಚಿತರಾಗಿದ್ದ ನಿರಾಶ್ರಿತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಪರಿಣಾಮ ಪುನಃ ಸಮೀಕ್ಷೆ ಮಾಡಿ 320 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಆದರೆ ಅವರಿಗೆ ಇದುವರೆಗೆ ಜಿಪಿಎಸ್‌ ಮಾಡದಿರುವುದರಿಂದ ಪರಿಹಾರ ಬಂದಿರಲಿಲ್ಲ. ಸಂಪೂರ್ಣ ಬಿದ್ದ ಮನೆಗಳನ್ನು ಎ ಗ್ರೇಡ್‌ನ‌ಲ್ಲಿ ಪರಿಗಣಿಸುವ ಬದಲು ಕೇವಲ ಸಿ ಗ್ರೇಡ್‌ ನೀಡಿದ್ದರಿಂದ ಆಕ್ರೋಶಗೊಂಡ ಸಂತ್ರಸ್ತರು ಎಲ್ಲವನ್ನು ಸರಿಪಡಿಸುವಂತೆ ಧರಣಿ ಸತ್ಯಾಗ್ರಹ ಕೈಗೊಂಡಿದ್ದರು.

ಇವರನ್ನು ಸಮಾಧಾನ ಪಡಿಸಲು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಶೀಲ್ದಾರ್‌ ಕೆ.ವೈ. ಬೆಟಗೇರಿ, ಕಂದಾಯ ಅಧಿಕಾರಿ ಆರ್‌.ಸಿ.ಬಾರಕೇರ, ಪಿಎಸ್‌ಐ ಪರಮೇಶ್ವರ ಕವಟಗಿ ಸಂತ್ರಸ್ತರ ಮನವೊಲಿಸಲು ಪ್ರಯತ್ನಿಸಿದರೂ ಅದಕ್ಕೆ ನಿರಾಶ್ರಿತರು ಜಗ್ಗಲಿಲ್ಲ. ಸಂಜೆ 5ಕ್ಕೆ ಧರಣಿ ನಿರತ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಜೆ.ಬಿ. ಜಕ್ಕನಗೌಡ್ರ ಮಾತನಾಡಿ, ಸರಕಾರ ರಾಜೀವಗಾಂಧಿ ನಿಗಮದ ತಂತ್ರಾಂಶ ತಾತ್ಕಾಲಿಕವಾಗಿ ಬಂದ್‌ ಮಾಡಿರುವುದರಿಂದ 320 ಮನೆಗಳ ಜಿಪಿಎಸ್‌ ಕೆಲಸ ನಿಂತಿದ್ದು, ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು ನಾನೇ ಸ್ವತಃ ಹಾನಿಗೊಳಗಾದ ಪ್ರತಿ ಮನೆಗೆ ಭೇಟಿ ನೀಡಿ ಶೀಘ್ರ ಪರಿಹಾರ ಒದಗಿಸಿ ನಿಜವಾದ ಸಂತ್ರಸ್ತರಿಗೆ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.ಇದರಿಂದಾಗಿ ಧರಣಿ ಕೈಬಿಡಲಾಯಿತು.

ನರಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ ಯಾವಗಲ್ಲ, ತಾ.ಪಂ. ಅಧ್ಯಕ್ಷ ಪ್ರಕಾಶ ತಿರಕನಗೌಡ್ರ, ಪ್ರಕಾಶ ಬಜೇಂತ್ರಿ, ಬಸವರಾಜ ಪಾಟೀಲ, ಎಫ್‌.ಎಸ್‌.ಚಿಕ್ಕಮಣ್ಣೂರ, ಮಹಾಬಳೇಶ ಗಾಣಿಗೇರ, ವಾಣಿಜ್ಯೋದ್ಯಮ ಸಂಸ್ಥೆ ಮಾಜಿ ಅಧ್ಯಕ್ಷ ಎಸ್‌.ಜಿ. ತೋಟದ, ಗ್ರಾ.ಪಂ. ಅಧ್ಯಕ್ಷೆ ಸುಮಂಗಲಾ ಕಾತರಕಿ, ಉಪಾಧ್ಯಕ್ಷೆ ಸರೋಜಮ್ಮ ಗೌರಿಮಠ, ರೈತ ಸಂಘದ ಅಧ್ಯಕ್ಷೆ ಶಾಂತಾ ಕಾತರಕಿ, ಶರಣಮ್ಮ ಯಾದವಾಡ, ಲಕ್ಷ್ಮೀ ಭಾಯಿ ಹೆಗ್ರಿ, ಭಾರತಿ ಕಾತರಕಿ, ಶಾವಕ್ಕ ಕಂದಗಲ್ಲ, ದ್ರಾಕ್ಷಾಯಣಿ ಹೆಬ್ಬಳ್ಳಿ ಶಾಂತಾ ದೂಡ್ಡಮನಿ, ಲಕ್ಷ್ಮೀಭಾಯಿ ಮಡಿವಾಳರ ಇದ್ದರು.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.