ಬೇಸಿಗೆ ಸಂಭ್ರಮದಲ್ಲಿ ಮಕ್ಕಳು
ಸರಕಾರಿ ಶಾಲಾ ಮಕ್ಕಳಿಗಾಗಿ ಬೇಸಿಗೆ ಶಿಬಿರ ಆಯೋಜನೆ
Team Udayavani, May 4, 2019, 10:08 AM IST
ಹೊನ್ನಾಳಿ: ಬೆನಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಬೇಸಿಗೆ ಸಂಭ್ರಮ ಶಿಬಿರಕ್ಕೆ ಡಿಡಿಪಿಐ ಪರಮೇಶ್ವರಪ್ಪ ಭೇಟಿ ನೀಡಿ ವೀಕ್ಷಿಸಿದರು.
ಹೊನ್ನಾಳಿ: ಸ್ವಲ್ಪ ಓದು ಸ್ವಲ್ಪ ಮೋಜು ಎಂಬ ಘೋಷಣೆಯೊಂದಿಗೆ ಆಯೋಜಿಸಲಾಗಿರುವ ಬೇಸಿಗೆ ಸಂಭ್ರಮ ಶಿಬಿರಗಳಲ್ಲಿ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ 30 ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕುಣಿಯುತ್ತ, ನಲಿಯುತ್ತ, ಆಟವಾಡುತ್ತ ಕಲಿಯುತ್ತಿದ್ದಾರೆ.
ಪ್ರತಿ ವಾರಕ್ಕೊಂದು ವಿಷಯದಂತೆ ಕುಟುಂಬ, ಆರೋಗ್ಯ, ಪರಿಸರ, ನೀರು ಹಾಗೂ ಆಹಾರ ವಿಷಯಗಳ ಬಗ್ಗೆ ಆರು ಮತ್ತು ಏಳನೇ ತರಗತಿ ವಿದ್ಯಾಥಿಗಳಿಗೆ ಶಿಕ್ಷಕರಿಂದ ಅರಿವು ಮೂಡಿಸಲಾಗುತ್ತಿದೆ. ಈ ಬೇಸಿಗೆ ಶಿಬಿರ ಏ.24 ರಿಂದ ಪ್ರಾರಂಭವಾಗಿದ್ದು, ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತದೆ.
ಇತ್ತೀಚಿಗೆ ಮೊಬೈಲ್ನಲ್ಲಿ ಗೇಮ್ ಆಡುತ್ತ ಕಾಲ ಕಳೆಯುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಅದನ್ನು ತಪ್ಪಿಸಲು ಶಿಬಿರ ಆಯೋಜಿಸಲಾಗಿದ್ದು, ಕುಟುಂಬದ ವಿಷಯದಲ್ಲಿ ಅವಿಭಕ್ತ ಕುಟುಂಬ ಹಾಗೂ ಸಂಬಂಧಗಳು, ಪರಿಸರದ ವಿಚಾರಕ್ಕೆ ಬಂದಾಗ ನಮ್ಮ ಸುತ್ತಮುತ್ತಲಿನ ಗಿಡ-ಮರಗಳ ಸಂರಕ್ಷಣೆ, ನೀರನ್ನು ಹೇಗೆ ಮಿತವಾಗಿ ಬಳಸಬೇಕು ಹಾಗೂ ಅದರ ಮಹತ್ವ ಹೀಗೆ ಐದು ಚಟುವಟಿಕೆಗಳ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಂಪು ಶಿಕ್ಷಣ ನೀಡುತ್ತಿದ್ದಾರೆ.
ಪ್ರತಿನಿತ್ಯ ಒಂದೊಂದು ಶಾಲೆಗೆ ಸಿಆರ್‌ಪಿ, ಇಸಿಒ, ಬಿಇಒ, ಅಕ್ಷರ ದಾಸೋಹ ನಿರ್ದೇಶಕ, ಬಿಆರ್‌ಸಿ ಹಾಗೂ ಡಿಡಿಪಿಐ ಸೇರಿದಂತೆ ಎಲ್ಲಾ ಶಿಕ್ಷಣಾಧಿಕಾರಿಗಳು ಬೇಸಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ವಿನೂತನವಾದ ಈ ಬೇಸಿಗೆ ಸಂಭ್ರಮ ಕಾರ್ಯಕ್ರಮ ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಬರಗಾಲದ ಬಿಸಿಯೂಟದ ಯೋಜನೆ: ಅವಳಿ ತಾಲೂಕಿನ 146 ಶಾಲೆಗಳ ವಿದ್ಯಾರ್ಥಿಗಳಿಗೆ ಬರಗಾಲದ ಬಿಸಿಯೂಟದ ಯೋಜನೆಯನ್ನು ಏ. 11ರಿಂದ ಮುಂದುವರೆಸಲಾಗಿದೆ. ನೀರಾವರಿ ಪ್ರದೇಶವನ್ನು ಹೊರತುಪಡಿಸಿ ಮಳೆಯಾಶ್ರಿತ ಪ್ರದೇಶದಲ್ಲಿರುವ ಶಾಲೆಗಳಿಗೆ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲಾಗಿದೆ. 146 ಶಾಲೆಯ ಸುಮಾರು 5 ಸಾವಿರ ವಿದ್ಯಾರ್ಥಿಗಳು ಈ ಬಿಸಿಯೂಟ ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಸರ್ಕಾರದ ಯೋಜನೆಗಳು ವೈಜ್ಞಾನಿಕವಾಗಿದ್ದು, ಮಕ್ಕಳು ಸದುಪಯೋಗ ಮಾಡಿಕೊಂಡು ಶಿಕ್ಷಣವಂತರಾಗಲು ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗಿದೆ.
ಜಿ.ಇ.ರಾಜೀವ್,
ಬಿಇಒ ಹೊನ್ನಾಳಿ. ಹೊನ್ನಾಳಿ
ಹೊನ್ನಾಳಿ ತಾಲೂಕು ಬರಗಾಲ ಪೀಡಿತ ತಾಲೂಕು ಪಟ್ಟಿಗೆ ಸೇರಿರುವುದರಿಂದ ಏ. 11 ರಿಂದ 146 ಶಾಲೆಗಳಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ. ಈ ಯೋಜನೆಯನ್ನು ಮಕ್ಕಳು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.
•ಕೆ.ಆರ್.ರುದ್ರಪ್ಪ,
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ, ಹೊನ್ನಾಳಿ.
ಎಂ.ಪಿ.ಎಂ.ವಿಜಯಾನಂದಸ್ವಾಮಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.