ಭರದಿಂದ ಸಾಗಿದೆ ರೈತರ ಡೆಟಾ ಎಂಟ್ರಿ ಕಾರ್ಯ
ರಾತ್ರಿ 8ರವರೆಗೆ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ಯ ಶೇ. 50ಕ್ಕಿಂತ ಹೆಚ್ಚು ಕಾರ್ಯ ಪೂರ್ಣ
Team Udayavani, Jun 28, 2019, 4:15 PM IST
ಹೊನ್ನಾಳಿ: ತಾಲೂಕು ಕಚೇರಿಯಲ್ಲಿ ಬುಧವಾರ ರಾತ್ರಿ ನೌಕರರು ರೈತರ ಡೇಟಾ ಎಂಟ್ರಿ ಮಾಡುತ್ತಿರುವ ದೃಶ್ಯ.
ಹೊನ್ನಾಳಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಮಾಹಿತಿ ಅಪ್‌ಲೋಡ್ ಮಾಡುವ ಕಾರ್ಯ ತಾಲೂಕು ಕಚೇರಿಯಲ್ಲಿ ತ್ವರಿತ ಗತಿಯಲ್ಲಿ ಸಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ರೂ.6ಸಾವಿರ ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದು, ರೈತರ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕಂದಾಯ ಸಿಬ್ಬಂದಿ ಅಪ್‌ಲೋಡ್ ಮಾಡಬೇಕಿದೆ.
ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸೂಚನೆಯಂತೆ ಅತ್ಯಂತ ವೇಗವಾಗಿ ಡೆಟಾ ಎಂಟ್ರಿ ಕಾರ್ಯ ಮಾಡಿ ಮುಗಿಸಬೇಕು ಎನ್ನವುದನ್ನು ಗಮನದಲ್ಲಿಟ್ಟುಕೊಂಡು ತಹಶೀಲ್ದಾರ್ ತುಷಾರ್ ಬಿ.ಹೊಸೂರು ಕಂದಾಯ ಇಲಾಖೆ ನೌಕರರಿಗೆ ರಾತ್ರಿ 8 ಗಂಟೆಯವರೆಗೂ ಕೆಲಸ ಮಾಡುವಂತೆ ಸೂಚಿಸಿ, ತಾವೂ ಕಚೇರಿಯಲ್ಲಿ ಕುಳಿತು ಪ್ರತಿ ಡೆಟಾ ಎಂಟ್ರಿ ಕೆಲಸವನ್ನು ಪರಿಶೀಲಿಸುತ್ತಿದ್ದಾರೆ.
ಕಂದಾಯ ಇಲಾಖೆ ಮಹಿಳಾ ಸಿಬ್ಬಂದಿಗೆ ಇಲ್ಲಿ ಸ್ವಲ್ಪ ರಿಯಾಯಿತಿ ಕೊಟ್ಟು ತಮ್ಮ ಕೆಲಸವನ್ನು ಬೇಗನೆ ಮಾಡಿ ಸಂಜೆ 6ಕ್ಕೆ ಮನೆಗೆ ತೆರಳಬಹುದು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ.
ಬುಧವಾರ ರಾತ್ರಿ 7.30 ಸಮಯವಾದರೂ ತಾಲೂಕು ಕಚೇರಿಯಲ್ಲಿ ಇಲಾಖಾ ನೌಕರರು ಕೆಲಸ ಮಾಡುತ್ತಿದ್ದುದನ್ನು ಕಂಡು ಕಚೇರಿ ಒಳ ನಡೆದರೆ ತಹಶಿಲ್ದಾರ್, ಉಪ ತಹಶೀಲ್ದಾರ್ ಸೇರಿದಂತೆ ಎಲ್ಲರೂ ರೈತರ ಡೆಟಾ ಎಂಟ್ರಿ ಕಾರ್ಯದಲ್ಲಿ ತೊಡಗಿದ್ದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 44,421 ರೈತ ಫಲಾನುಭವಿಗಳಿದ್ದು, ಈಗಾಗಲೇ 24 ಸಾವಿರ ರೈತರ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ನಮ್ಮ ಕೆಲಸ ಶೇ.50ಕ್ಕೂ ಹೆಚ್ಚು ಆಗಿದ್ದು ಶೀಘ್ರದಲ್ಲಿಯೇ ಶೇ.100ರಷ್ಟು ಸಾಧನೆ ಮಾಡುತ್ತೇವೆ ಎಂದು ತಹಶೀಲ್ದಾರ್ ತುಷಾರ್ ಬಿ.ಹೊಸೂರು ತಿಳಿಸಿದರು.
ದೇಶದ ಬೆನ್ನೆಲುಬು ರೈತ ಎಂದು ಹೇಳಿದರೆ ಸಾಲದು. ನಮಗಾಗಿ ರೈತ ಹೊಲದಲ್ಲಿ ದುಡಿಯುತ್ತಾನೆ. ರೈತನಿಗಾಗಿ ಜನಪ್ರತಿನಿಧಿಗಳಾದ ನಾವು ಅಲ್ಪ ಸೇವೆ ಮಾಡಬೇಕು. ರೈತರ ಡೆಟಾ ಎಂಟ್ರಿ ಕಾರ್ಯವನ್ನು ಆದಷ್ಟು ಬೇಗನೆ ಮಾಡಿ ಮುಗಿಸಿ ಎಂದು ಕಟ್ಟುನಿಟ್ಟಿನ ಸಲಹೆ ನೀಡಿದ್ದೇನೆ.
•ಎಂ.ಪಿ. ರೇಣುಕಾಚಾರ್ಯ,
ಶಾಸಕರು, ಹೊನ್ನಾಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.