ಕೆರೆ ಭರ್ತಿ: ರೈತರ ಮೊಗದಲ್ಲಿ ಸಂತಸ

ಬೈರನಹಳ್ಳಿ ಗ್ರಾಮದ ಕಳ್ಳರ ಗುಂಡಿ ಚೆಕ್‌ ಡ್ಯಾಂ-ಕೆರೆಗೆ ಶಾಸಕರ ಭೇಟಿ

Team Udayavani, Jun 24, 2019, 10:01 AM IST

24-June-4

ಹೊನ್ನಾಳಿ: ತಾಲೂಕಿನ ಬೈರನಹಳ್ಳಿ ಗ್ರಾಮಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೆಟಿ ನೀಡಿ ಭರ್ತಿಯಾಗಿರುವ ಕೆರೆ ಮತ್ತು ಚೆಕ್‌ ಡ್ಯಾಂ ವೀಕ್ಷಿಸಿದರು.

ಹೊನ್ನಾಳಿ: ತಾಲೂಕಿನ ಬೈರನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 2 ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ಗ್ರಾಮದಲ್ಲಿ ಬರಿದಾಗಿದ್ದ ಕಳ್ಳರ ಗುಂಡಿ ಚೆಕ್‌ ಡ್ಯಾಂ ಭರ್ತಿಯಗಿ ಸಮೀಪದ 60 ಎಕರೆ ಪ್ರದೇಶದ ಕೆರೆ ಸಂಪೂರ್ಣ ತುಂಬಿ ಇಲ್ಲಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬೈರನಹಳ್ಳಿ ಗ್ರಾಮಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ತೆರಳಿ ಭರ್ತಿಯಾಗಿರುವ ಕೆರೆ ಮತ್ತು ಚೆಕ್‌ ಡ್ಯಾಂನ್ನು ವೀಕ್ಷಿಸಿ ರೈತರೊಂದಿಗೆ ಸಂತಸ ಹಂಚಿಕೊಂಡರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಕಳೆದ 3 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಗ್ರಾಮದ ಕೆರೆ ಮತ್ತು ಚೆಕ್‌ ಡ್ಯಾಂ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗದೇ ಸುತ್ತಮುತ್ತಲಿನ ಗ್ರಾಮಗಳ ಅಚ್ಚುಕಟ್ಟು ಪ್ರದೇಶದ ಜಮೀನುಗಳಿಗೆ ನೀರಿನ ಬವಣೆ ಉಂಟಾಗಿತ್ತು. ಕೆರೆಯ ನೀರನ್ನು ತಲೆತಲಾಂತರದಿಂದ ನೆಚ್ಚಿಕೊಂಡು ಬಂದಿದ್ದ ರೈತರ ಅಡಕೆ, ಭತ್ತ, ಬೆಳೆಗಳು ನೆಲ ಕಚ್ಚುವಂತೆ ಆಗಿತ್ತು. ಕಳೆದ ನಮ್ಮ ಆಡಳಿತಾವಧಿಯಲ್ಲಿ ಈ ಚೆಕ್‌ ಡ್ಯಾಂ ನಿರ್ಮಿಸಲಾಗಿದ್ದರೂ ಮಳೆಯಿಲ್ಲದೆ ಅಂರ್ತಜಲ ಮಟ್ಟ ಕಡಿಮೆಯಾಗಿ ರೈತರಿಗೆ ತೀವ್ರ ತೊಂದರೆಯುಂಟಾಗಿತ್ತು, ಪ್ರಸ್ತುತ ವರುಣನ ಕೃಪೆಯಿಂದ ಮಳೆ ಸುರಿದು ಚೆಕ್‌ ಡ್ಯಾಂ ಭರ್ತಿಯಾಗಿ, ಕೆರೆ ತುಂಬಿರುವುದು ರೈತರಿಗೆ ಅನುಕೂಲವಾಗಲಿದೆ ಎಂದರು.

ಈ ಕೆರೆಯಿಂದ ಪಕ್ಕದ ಕ್ಯಾಸಿನಕೆರೆ, ಚೆನ್ನೇನಹಳ್ಳಿ ಮುಂತಾದ ಗ್ರಾಮಗಳ ಬೋರ್‌ವೆಲ್ಗಳ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರ ತೋಟಗಳಿಗೆ ಹಾಗೂ ಹೊಲಗದ್ದೆಗಳಿಗೆ ತೊಂದರೆಯುಂಟಾಗದಂತೆ ನೀರು ಹರಿಯಲಿದೆ ಎಂದರು.

ಕ್ಷೇತ್ರದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಎಲ್ಲಾ ಕೆರೆಗಳನ್ನು ತುಂಬಿಸಿ ರೈತರ ಸಾವಿರಾರು ಎಕರೆ ಜಮೀನಿಗೆ ನೀರುಣಿಸಲು ಈಗಾಗಲೇ ಸರ್ಕಾರದ ಮಟ್ಟದಲ್ಲಿ ಅಂದಾಜು ತಯಾರಿಸಿ, ಪ್ರಸ್ತಾವನೆ ನೀಡಲಾಗಿದ್ದು ಯೋಜನೆ ಮಂಜೂರಾತಿ ಹಂತದಲ್ಲಿದೆ ಎಂದರು. ಕೆರೆ ಭರ್ತಿಯಾದ ಕಾರಣ ಬಿತ್ತನೆ ಆರಂಭಿಸುತ್ತೇವೆಂದು ರೈತರು ಸಂತಸ ವ್ಯಕ್ತಪಡಿಸಿದರು.

ಜಿ.ಪಂ ಉಪಾಧ್ಯಕ್ಷ ಸಿ.ಸುರೇಂದ್ರ ನಾಯ್ಕ, ಜಿ.ಪಂ ಸದಸ್ಯ ಜಿ. ವೀರಶೇಖರಪ್ಪ, ಎ.ಪಿ.ಎಂ.ಸಿ ನಿರ್ದೇಶಕ ಜಿ.ವಿ.ಎಂ. ರಾಜು, ಚನ್ನಮುಂಬಾಪುರ ಹಾಲೇಶಪ್ಪ, ಲಿಂಗಾಪುರ ಗ್ರಾ.ಪಂ ಸದಸ್ಯ ರಾಮಚಂದ್ರಪ್ಪ ಹಾಗೂ ಗ್ರಾಮದ ರೈತರು ಇದ್ದರು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.