ಪಿಆರ್‌ಒ-ಎಪಿಆರ್‌ಒಗಳಿಗೆ ತರಬೇತಿ
ಮತದಾನ ಪ್ರಕ್ರಿಯೆ-ನಿಯಮಗಳ ಕುರಿತು ಮಾಹಿತಿಇವಿಎಂ-ವಿವಿಪ್ಯಾಟ್ ಪ್ರಾತ್ಯಕ್ಷಿಕೆ
Team Udayavani, Apr 6, 2019, 2:54 PM IST
ಹೊನ್ನಾಳಿ: ಪಟ್ಟಣದ ಗಂಗಮ್ಮ ವೀರಭದ್ರಶಾಸ್ತ್ರಿ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಮತಗಟ್ಟೆ ಕೇಂದ್ರಗಳ ಪಿಆರ್‌ಒ ಮತ್ತು ಎಪಿಆರ್‌ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಎಆರ್‌ಒ ಮಾತನಾಡಿದರು.
ಹೊನ್ನಾಳಿ: ಪ್ರತಿ ಚುನಾವಣೆಯಲ್ಲಿ ನಿಯಮಗಳು ಬದಲಾಗುತ್ತಿರುತ್ತವೆ. ಹೊಸ ಬದಲಾವಣೆಗೆ ಹೊಂದಿಕೊಂಡು ಮತಗಟ್ಟೆ ಕೇಂದ್ರದ ಪಿಆರ್‌ಒ ಮತ್ತು ಎಪಿಆರ್ ಒಗಳು ಕಾರ್ಯ ನಿರ್ವಹಿಸಬೇಕು ಎಂದು ದಾವಣಗೆರೆ ಲೋಕಸಭಾ ಚುನಾವಣಾ
ವ್ಯಾಪ್ತಿಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿ ಕಾರಿ ಸುರೇಶ್ ರೆಡ್ಡಿ ಹೇಳಿದರು.
ಪಟ್ಟಣದ ಗಂಗಮ್ಮ ವೀರಭದ್ರಶಾಸ್ತ್ರಿ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಮತಗಟ್ಟೆ ಕೇಂದ್ರಗಳ ಪಿಆರ್‌ಒ ಮತ್ತು ಎಪಿಆರ್‌ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸೆಕ್ಟರ್ ಅಧಿಕಾರಿಗಳು ಇವಿಎಂ, ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ತರಬೇತಿ ನೀಡುವರು. ಏನೇ ಅನುಮಾನವಿದ್ದಲ್ಲಿ ಕೇಳಿ ಪರಿಹರಿಸಿಕೊಳ್ಳಬೇಕು ಎಂದರು.
ಪಿಆರ್‌ಒ ಮತ್ತು ಎಪಿಆರ್‌ಒಗಳಿಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗುತ್ತಿದೆ. ಮೊದಲನೆ ಹಂತ ತಾಲೂಕು ಕೇಂದ್ರದಲ್ಲಿ ಹಾಗೂ ಎರಡನೇ ಹಂತದ ತರಬೇತಿಯನ್ನು ಬೇರೆ ತಾಲೂಕಿನಲ್ಲಿ ನೀಡಲಾಗುವುದು. ಇದರಿಂದ ಮತಗಟ್ಟೆ ಕೇಂದ್ರದ ಎಲ್ಲಾ ಸಿಬ್ಬಂದಿ
ಪರಸ್ಪರ ಪರಿಚಯವಾಗುತ್ತದೆ ಎಂದು ಹೇಳಿದರು.
ತರಬೇತಿ 10ಗಂಟೆಗೆ ಎಂದು ತಿಳಿಸಿದ್ದರೂ ಮತಗಟ್ಟೆ ಪಿಆರ್‌ಒ ಹಾಗೂ ಎಪಿಆರ್ ಒಗಳು 11.30ರವರೆಗೂ ತರಬೇತಿ ಕೇಂದ್ರಕ್ಕೆ ಬರುವದನ್ನು ಕಂಡ ತಹಶೀಲ್ದಾರ್ ಮಲ್ಲಿಕಾರ್ಜುನ ಅವರ ಮೇಲೆ ರೇಗಾಡಿದ್ದೂ ನಡೆಯಿತು.
12 ಕೊಠಡಿಗಳಲ್ಲಿ 23 ಸೆಕ್ಟರ್ ಅಧಿಕಾರಿಗಳು ಪ್ರಾತ್ಯಕ್ಷಿಕೆ ತೋರಿಸಿ ತರಬೇತಿ ನೀಡಿದರು. ನ್ಯಾಮತಿ ತಹಶೀಲ್ದಾರ್ ರೇಣುಕಾ, ಉಪ ತಹಶೀಲ್ದಾರ್ ಎನ್.ನಾಗರಾಜಪ್ಪ, ಇತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.