ಆದರ್ಶ ಜೀವನ ಸಾಗಿಸಿ

ಜನಸಂಖ್ಯೆ ಸ್ಫೋಟ ನುಂಗುತ್ತಿದೆ ದೇಶದ ಅಭಿವೃದ್ಧಿ: ಎಂ.ಪಿ. ರಮೇಶ

Team Udayavani, Dec 14, 2019, 11:29 AM IST

14-December-4

ಹೊನ್ನಾಳಿ: ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು. ಕೂಲಂಬಿಯ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯ ಸುಕ್ಷೇತ್ರದಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸತಿ-ಪತಿಗಳಾಗುವುದು ಪೂರ್ವಜನ್ಮದ ಪುಣ್ಯದ ಫಲವಾಗಿದೆ. ಆದ್ದರಿಂದ, ಇಲ್ಲಿ ಸಂಗಾತಿಗಳಾಗಿರುವವರು ಆದರ್ಶ ಜೀವನ ನಡೆಸಬೇಕು ಎಂದು ಹೇಳಿದರು.

ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಬಿಜೆಪಿ ಮುಖಂಡ ಎಂ.ಪಿ. ರಮೇಶ್‌ ಮಾತನಾಡಿ, ಚಿಕ್ಕ ಸಂಸಾರ ದೇಶಕ್ಕೆ ಹಿತಕರ. ಬೆಳೆಯುತ್ತಿರುವ ಜನಸಂಖ್ಯೆ ನಮ್ಮ ದೇಶದ ಎಲ್ಲಾ ಅಭಿವೃದ್ಧಿಯನ್ನು ನುಂಗಿ ಹಾಕುತ್ತಿದೆ. ಆದ್ದರಿಂದ, ನಾವೆಲ್ಲರೂ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಹಾಗಾಗಿ, ಸಾಮೂಹಿಕ ವಿವಾಹದಲ್ಲಿ ಸತಿ-ಪತಿಗಳಾದವರು ಚಿಕ್ಕ ಸಂಸಾರಕ್ಕೆ ಮೊದಲ ಆದ್ಯತೆ ನೀಡಬೇಕು. ಹೆಣ್ಣಾಗಲಿ, ಗಂಡಾಗಲಿ, ನಮಗೆ ಒಂದೇ ಮಗು ಸಾಕು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂದೇಶವನ್ನು ಎಂ.ಪಿ. ರಮೇಶ್‌ ವಾಚಿಸಿದರು. ಶ್ರೀ ಗುರು ಗದ್ದಿಗೇಶ್ವರ, ಬಸವಣ್ಣ, ರಾಮೇಶ್ವರ ಟ್ರಸ್ಟ್‌ ಕಮಿಟಿ ಅಧ್ಯಕ್ಷ ಟಿ.ಎಸ್‌.
ಸೋಮಶೇಖರ್‌ ಮಾತನಾಡಿದರು. ಸಂಸದ ಜಿ.ಎಂ. ಸಿದ್ಧೇಶ್ವರ್‌ ಪತ್ನಿ ಗಾಯತ್ರಿ ಸಿದ್ಧೇಶ್ವರ್‌ ವಧು-ವರರಿಗೆ ಬಟ್ಟೆ ಉಚಿತವಾಗಿ ವಿತರಿಸಿದರು.

ಜಿಪಂ ಸದಸ್ಯೆ ದೀಪಾ ಜಗದೀಶ್‌, ಶಿಮುಲ್‌ ನಿರ್ದೇಶಕ ಬಿ.ಜಿ. ಬಸವರಾಜಪ್ಪ, ತಾಪಂ ಸದಸ್ಯೆ ಅಂಬುಜಾಕ್ಷಿ ಮರುಳಸಿದ್ಧಪ್ಪ, ಕೂಲಂಬಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ ಪ್ರಶಾಂತ್‌, ಸದಸ್ಯರಾದ ಜಿ.ಎಸ್‌. ಸಿದ್ಧೇಶ್‌, ಕೆ.ಆರ್‌. ಅಜ್ಜಯ್ಯ, ಟಿ.ಜಿ. ರಮೇಶ್‌, ಟಿ.ಬಿ.ಮಂಜುನಾಥ್‌, ತಹಸೀಲ್ದಾರ್‌ ತುಷಾರ್‌ ಬಿ.ಹೊಸೂರ್‌ ಇತರರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹ ಸಮಾರಂಭದಲ್ಲಿ 74 ಜೋಡಿ ದಾಂಪತ್ಯಕ್ಕೆ ಅಡಿ ಇಟ್ಟರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.