ತುಂಗಾ ನಾಲೆ ಕಾಮಗಾರಿ ವೀಕ್ಷಣೆ
ಕೊನೆ ಭಾಗಕ್ಕೂ ಶೀಘ್ರ ನೀರು•ರೈತರ ಬಾಳು ಹಸನು: ರೇಣುಕಾಚಾರ್ಯ
Team Udayavani, May 7, 2019, 5:41 PM IST
ಹೊನ್ನಾಳಿ: ನ್ಯಾಮತಿ ತಾಲೂಕಿನ ಬಿಜೋಗಟ್ಟೆ ಗ್ರಾಮದ ಬಳಿ ಹಾದು ಹೋಗಿರುವ ತುಂಗಾ ನಾಲೆ ಆಧುನೀಕರಣ ಕಾಮಗಾರಿಯನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ವೀಕ್ಷಿಸಿದರು.
ಹೊನ್ನಾಳಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತುಂಗಾ ನಾಲಾ ಆಧುನೀಕರಣದಂತಹ 348 ಕೋಟಿ ರೂ. ವೆಚ್ಚದ ಮಹಾತ್ವಾಕಾಂಕ್ಷಿ ಕಾಮಗಾರಿಗೆ ಯಡಿಯೂರಪ್ಪನವರು ಅಂದಿನ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಮಂಜೂರಾತಿ ನೀಡಿ ಜಾರಿಗೊಳಿಸಿದ್ದರು. ನಾಲಾ ಆಧುನೀಕರಣದಿಂದ ಕೊನೆಯ ಭಾಗದ ಹೊಲಗದ್ದೆಗಳಿಗೆ ನೀರು ಸರಾಗವಾಗಿ ಹರಿದು ರೈತರ ಬಾಳು ಹಸನಾಗಲಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ತಾಲೂಕಿನ ಬಿಜೋಗಟ್ಟೆ ಗ್ರಾಮದ ಬಳಿ ಹಾದು ಹೋಗಿರುವ ತುಂಗಾ ನಾಲೆಯ ಆಧುನೀಕರಣ ಕಾಮಗಾರಿ ಪ್ರಗತಿಯನ್ನು ಸೋಮವಾರ ವೀಕ್ಷಿಸಿ ಅವರು ಮಾತನಾಡಿದರು.
ಕಳೆದ ಹಲವಾರು ವರ್ಷಗಳಿಂದ ತುಂಗಾ ನಾಲೆಗಳಲ್ಲಿ ಸಂಪೂರ್ಣ ಹೂಳು ತುಂಬಿ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹೊಲಗದ್ದೆಗಳಿಗೆ ಸರಾಗವಾಗಿ ನೀರು ಹರಿಯದೆ ರೈತರಿಗೆ ಸಮಸ್ಯೆಯಾಗಿತ್ತು. ನನ್ನ ಹಿಂದಿನ ಶಾಸಕತ್ವದ ಅವಧಿಯಲ್ಲಿ ತುಂಗಾ ನಾಲಾ ಆಧುನೀಕರಣಗೊಳಿಸುವಂತೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದ ಫಲವಾಗಿ ಯಡಿಯೂರಪ್ಪನವರು ಆಧುನಿಕರಣ ಯೋಜನೆಗೆ 348 ಕೋಟಿ ರೂ. ಮೀಸಲಿರಿಸಿ ಆದೇಶ ಹೊರಡಿಸಿದ್ದರು. ಆದರೆ ಕೇಂದ್ರ ಯುಪಿಎ ಸರ್ಕಾರ ಯೋಜನೆಯ ಕಡತವನ್ನು ಮೂಲೆಗುಂಪು ಮಾಡಿದ ಪರಿಣಾಮ ಕಾಮಗಾರಿ ವಿಳಂಬವಾಗಿತ್ತು. ಮೋದಿ ಸರ್ಕಾರ ಆಡಳಿತಕ್ಕೆ ಬಂದ ಪ್ರಾರಂಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಜೊತೆಗೂಡಿ ದೆಹಲಿಗೆ ನಿಯೋಗ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದಿನ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಇವರಿಗೆ ಯೋಜನೆಗೆ ತಾಂತ್ರಿಕ ಮಂಜೂರಾತಿ ನೀಡುವಂತೆ ಮನವಿ ಪತ್ರ ನೀಡಿದ ಪರಿಣಾಮ ಕಾಮಗಾರಿ ಜಾರಿಗೆ ಬಂತು. ಶೀಘ್ರವೇ ನಾಲೆಗಳಲ್ಲಿ ಸರಾಗವಾಗಿ ನೀರು ಹರಿದು ಕೊನೆಯ ಭಾಗದ ರೈತರಿಗೆ ಯಾವುದೇ ತೊಂದರೆಯಿಲ್ಲದೆ ನೀರು ದೊರೆಯಲಿದೆ ಎಂದರು.
ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಶಾಸಕರು, ಕಾಮಗಾರಿ ಕಳಪೆಯಾದಲ್ಲಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಜಿ.ಪಂ ಉಪಾಧ್ಯಕ್ಷ ಸಿ.ಸುರೇಂದ್ರನಾಯ್ಕ, ಕಾಮಗಾರಿ ಗುತ್ತಿಗೆದಾರರು ಹಾಗೂ ಬಿಜೋಗಟ್ಟೆ ಸುತ್ತಮುತ್ತಲ ಗ್ರಾಮದ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.