ಮಹಿಳಾ ಶೋಷಣೆ ಜೀವಂತ

ಶಿಕ್ಷಣದ ಕೊರತೆ ಇರುವ ಕಡೆ ಕೌಟುಂಬಿಕ ದೌರ್ಜನ್ಯ ಹೆಚ್ಚು: ಬಿಇಒ ಜಯಪ್ಪ

Team Udayavani, Oct 13, 2019, 3:08 PM IST

13-October-11

ಹೊಸದುರ್ಗ: ಶೈಕ್ಷಣಿಕ ಕಾರಣದಿಂದ ಲಿಂಗ ಅಸಮಾನತೆಯಲ್ಲಿ ಸುಧಾರಣೆ ಕಂಡು ಬಂದಿದೆ. ಆದಾಗ್ಯೂ ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಪುರುಷ ಅಸಮಾನತೆ, ಶೋಷಣೆ ಇನ್ನೂ ಜೀವಂತವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌. ಜಯಪ್ಪ ಹೇಳಿದರು.

ಪಟ್ಟಣದ ಇಂದಿರಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಜ್ಯ ಮಹಿಳಾ ತರಬೇತುದಾರರ ಸಂಚಲನ ಸಮನ್ವಯ ಸಮಿತಿ ವತಿಯಿಂದ ಶನಿವಾರ ನಡೆದ ಮಹಿಳೆಯರ ಸ್ಥಿತಿ ಗತಿ ಕುರಿತು ಜಿಲ್ಲಾ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುರುಷರಷ್ಟೇ ಮಹಿಳೆಗೂ ಸಮಾನ ಅವಕಾಶ, ಸ್ಥಾನಮಾನ ಹಾಗೂ ಸಮಾನತೆಯನ್ನು ನೀಡಬೇಕು, ಪುರಾತನ ಕಾಲದಲ್ಲಿ ಮಹಿಳೆಗೆ ಗೌರವ ಸ್ಥಾನಮಾನಗಳಿದ್ದವು. 1990ರ ಈಚೆಗೆ ಕೌಟುಂಬಿಕ ವ್ಯವಸ್ಥೆಯಲ್ಲಿ ಪುರುಷರ ಪ್ರಭಾವದಿಂದ ಸ್ವಲ್ಪ ತಗ್ಗಿತು. ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದರೂ ಅವುಗಳನ್ನು ಮಿರಿ ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹಗಳು ನಡೆಯುತ್ತಿವೆ.

ಇದು ಆಕೆಯ ಮನಸ್ಸು ಮತ್ತು ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಕ್ಷರಸ್ಥ ಕುಟುಂಬಗಳಲ್ಲಿ ಮಹಿಳಾ ಶೋಷಣೆ ತೀರಾ ಕಡಿಮೆ. ಶಿಕ್ಷಣದ ಕೊರತೆ ಇರುವ ಕಡೆ ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗಿರುತ್ತವೆ. ಶಿಕ್ಷಣದಿಂದ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸ ಬಹುದಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರಿಗೆ ಸರಿಸಮಾನವಾಗಿ ನಿಲ್ಲಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರನ್ನು ನೋಡುವ ಜನರ ಚಿಂತನೆ ಮತ್ತು ದೃಷ್ಠಿಕೋನ ಬದಲಾಗಬೇಕು.

ಮಹಿಳೆಯರಿಗೂ ಮುಕ್ತ ಅವಕಾಶ ಕಲ್ಪಿಸಿಕೊಟ್ಟಾಗ ದೇಶ ಅಭಿವೃದ್ಧಿ ಹೊಂದುತ್ತದೆ. ಮಹಿಲಾ ಸಬಲೀಕರಣಕ್ಕೆ ಅನೇಕ ಸಂಘ ಸಂಸ್ಥೆಗಳು ವೇದಿಕೆ ರೂಪಿಸಿವೆ. ಅಂತಹ ಸಂಸ್ಥೆಗಳಲ್ಲಿ ಸಂಚಲನ ಸಮನ್ವಯ ವೇದಿಕೆಯೂ ಒಂದು ಎಂದರು.

ಸಂವಾದದಲ್ಲಿ ಚರ್ಚೆ ಆಗಿದ್ದು: ಮಹಿಳೆಯರ ಸ್ವತಂತ್ರ ನಿರ್ಧಾರಗಳಿಗೆ ಕುಟುಂಬ ಗೌರವಿಸಬೇಕು. ಮಹಿಳೆಯ ಕೌಟುಂಬಿಕ ಕೊಡುಗೆ ಅನನ್ಯವಾದದ್ದು, ಕುಟುಂಬದಲ್ಲಿ ಮಹಿಳೆಯರಿಗೆ ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಸೇವಾ ಕ್ಷೇತ್ರಗಳಲ್ಲೂ ಅವಕಾಶ ಕಲ್ಪಿಸಿಕೊಡಬೇಕು.

ಮಹಿಳೆಯರು ಸ್ಥಳೀಯ ಸರ್ಕಾರಗಳಲ್ಲಿ ಮೀಸಲಾತಿಯಡಿ ಪಡೆದ ಅಕಾರವನ್ನು ಅವರ ಪತಿಯರೇ ಚಲಾಯಿಸುತ್ತಾರೆ. ಪುರುಷನಷ್ಟೇ ಸಮಾನ ಅವಕಾಶಗಳನ್ನು ಮಹಿಳೆಗೂ ನೀಡಬೇಕೆನ್ನುವ ವಿಚಾರಗಳು ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಗೊಳಪಟ್ಟವು. ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ವಿಜಯಮ್ಮ ಶಿವಲಿಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಚಲನ ಸಮನ್ವಯ ಸಂಸ್ಥೆಯ ಅಧ್ಯಕ್ಷೆ ಉಪಾಧ್ಯಕ್ಷೆ ರಾಣಿ ಚಂದ್ರಶೇಖರ್‌ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಉಪಾಧ್ಯಕ್ಷೆ ಅನಿತಾ ಬಸವರಾಜ್‌, ಕೆನರಾ ಬ್ಯಾಂಕ್‌ ವ್ಯವಸ್ಥಾಪಕಿ ನಾಗಲಾಂಬಿಕೆ, ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಟಿ.ಬಸಪ್ಪ, ಉಪನ್ಯಾಸಕಿ ಎಸ್‌. ರೇಖಾ, ಶಿಕ್ಷಕಿ ಪರಮ್ಮ ಇತರರು ಇದ್ದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

11

Puttur: ಬಸ್‌ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.