ಸಚಿವ ಸ್ಥಾನ ಕೇಳಿದ್ದು ತಪ್ಪಾ?

ಕಾಂಗ್ರೆಸ್‌-ಜೆಡಿಎಸ್‌ ಸೇರುತ್ತಾರೆಂದು ಸುಳ್ಳು ವದಂತಿ ಹಬ್ಬಿಸಿದ್ರು: ಗೂಳಿಹಟ್ಟಿ

Team Udayavani, Aug 26, 2019, 12:33 PM IST

26-Agust-19

ಹೊಸದುರ್ಗ: ಪಟ್ಟಣದ ಶ್ರೀ ಬನಶಂಕರಿ ಸಮುದಾಯ ಭವನದಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‌ ಮಾತನಾಡಿದರು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಗೂಳಿಹಟ್ಟಿ ಶೇಖರ್‌ ಅಭಿಮಾನಿಗಳು. (ಬಲ ಚಿತ್ರ).

ಹೊಸದುರ್ಗ: ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರದ ಆಮಿಷಗಳಿಗೆ ಬಲಿಯಾಗದೆ ಬಿಜೆಪಿಗೆ ನಿಷ್ಠನಾಗಿದ್ದೇನೆ. ತಾಲೂಕಿನ ಅಭಿವೃದ್ಧಿಗಾಗಿ ಸಚಿವ ಸ್ಥಾನ ಕೇಳಿದ್ದು ತಪ್ಪೇ ಎಂದು ಶಾಸಕ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಪ್ರಶ್ನಿಸಿದರು.

ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ಭಾನುವಾರ ನಡೆದ ಗೂಳಿಹಟ್ಟಿ ಶೇಖರ್‌ ಅಭಿಮಾನಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈತ್ರಿ ಸರ್ಕಾರ ಇದ್ದಾಗ ಕ್ಷೇತ್ರಕ್ಕೆ ಅಗತ್ಯವಿದ್ದ ಅನುದಾನ ಕೇಳಲು ಹೋಗುವುದನ್ನೇ ತಪ್ಪಾಗಿ ಅರ್ಥೈಸಿಕೊಂಡು, ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಕಾಂಗ್ರೆಸ್‌ ಅಥವಾ ಜೆಡಿಎಸ್‌ ಸೇರುತ್ತಾರೆಂದು ಸುದ್ದಿಯಾಯಿತು. ಈ ಸಮಯದಲ್ಲಿ ಬಿಜೆಪಿ ಸಹ ನನ್ನ ಮೇಲೆ ಅನುಮಾನದ ನಡೆ ಅನುಸರಿಸಿತು. ಯಡಿಯೂರಪ್ಪ ಅವರ ಬಳಿ ಕೆಲವರು ನನ್ನ ಬಗ್ಗೆ ಇಲ್ಲಸಲ್ಲದ ದೂರು ಹೇಳುತ್ತಿದ್ದಾರೆ. ನಾನು ಚುನಾವಣೆ ಹಾಗೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ನನಗೆ ಸಾಕಷ್ಟು ಆಫರ್‌ ಬಂದರೂ ಅದನ್ನೆಲ್ಲ ತಿರಸ್ಕರಿಸಿದೆ. ಅವಮಾನಗಳಿಂದ ನೊಂದಿದ್ದರೂ ಕ್ಷೇತ್ರದ ಜನತೆಗಾಗಿ ಸಹಿಸಿಕೊಂಡಿರುವೆ ಎಂದರು.

ಸಚಿವರನ್ನಾಗಿಸಿ ಎಂದಿದ್ದು ತಪ್ಪೇ?: ಬಿಜೆಪಿ ಮತ್ತು ಸರ್ಕಾರ ನನ್ನನ್ನು ಈಗಲೂ ಅನುಮಾನದಿಂದ ನೋಡುತ್ತಿವೆ. ಅವಕಾಶವಿದ್ದಲ್ಲಿ ನನ್ನನ್ನೂ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ಕೇಳುವುದೇ ತಪ್ಪೇ ಎಂದು ಪುನರುಚ್ಚರಿಸಿದ ಗೂಳಿಹಟ್ಟಿ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ನನ್ನ ತೀರ್ಮಾನಗಳಿಗೆ ಬೆಂಬಲ ನೀಡುವುದರ ಜತೆಗೆ ಕ್ಷೇತ್ರದ ಜನತೆ ಕೇಳುವ ಪ್ರಶ್ನೆಗಳಿಗೆ ನನ್ನ ಪರವಾಗಿ ಸಮರ್ಥನೆ ಮಾಡಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದು ಹೇಳಿದರು.

ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಮೇಲಿನ ಹಂತದಲ್ಲಿ ನನಗೆ ಸೂಕ್ತ ಮನ್ನಣೆ ಸಿಗುತ್ತಿಲ್ಲ. ಪಕ್ಷ ಮತ್ತು ಸರ್ಕಾರದ ಹಂತದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದ್ದು, ಅನಿವಾರ್ಯ ಸಂದರ್ಭದಲ್ಲಿ ನಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬದ್ಧರಾಗಿರಬೇಕು ಎಂದು ಮನವಿ ಮಾಡಿದರು.

ಪಿಎಸ್‌ಐ ನೇಮಕಕ್ಕೂ ಸ್ವಾತಂತ್ರ್ಯ ಇರಲಿಲ್ಲ: ಹಿಂದಿನ ಸರ್ಕಾರ ಇದ್ದಾಗ ಹೊಸದುರ್ಗಕ್ಕೆ ಇಂಥವರನ್ನೇ ಪಿಎಸ್‌ಐ ಆಗಿ ನಿಯೋಜನೆ ಮಾಡಿ ಎಂದು ಮುಖ್ಯಮಂತ್ರಿ ಕಚೇರಿಯಿಂದ ದಾವಣಗೆರೆ ಡಿಐಜಿಗೆ ಶಿಫಾರಸ್ಸು ಮಾಡಲಾಗುತ್ತದೆ. ಕಾಂಗ್ರೆಸ್‌ ಮತು ್ತಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇದ್ದಾಗ ನಮ್ಮ ಯಾವುದೇ ಕಡತಗಳಿಗೂ ಮಾನ್ಯತೆ ಸಿಗುತ್ತಿರಲಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ಹೊಸದುರ್ಗ ಕ್ಷೇತ್ರಕ್ಕೆ ನಯಾಪೈಸೆ ಅನುದಾನ ನೀಡದೆ ತಾರತಮ್ಯ ಮಾಡಲಾಗಿದೆ. ಅಲ್ಲದೆ ನಮ್ಮ ಕಾರ್ಯಕರ್ತರೂ ಸಂಕಷ್ಟ ಅನುಭವಿಸಿದರು. ಇದಕ್ಕೆಲ್ಲಾ ಮೈತ್ರಿ ಸರ್ಕಾರದ ಆಡಳಿತವೇ ಕಾರಣ ಎಂದು ಗೂಳಿಹಟ್ಟಿ ಶೇಖರ್‌ ಆರೋಪಿಸಿದರು.

ನಾನು ಸೇರಿದಂತೆ ಅಭಿಮಾನಿಗಳು ಬಿಜೆಪಿಗೆ ಇನ್ನೂ ಹೊಂದಿಕೊಂಡಿಲ್ಲ. ನನಗೆ ಯಾವ ಪಕ್ಷವೂ ಆಗಿ ಬರೋದಿಲ್ಲ. ಬಿಜೆಪಿಯವರು ನನಗಾಗಿ ತ್ಯಾಗ ಮಾಡಿ ಟಿಕೆಟ್ ನೀಡಿದ್ದಾರೆ. ಅವರಿಗೆ ಅನ್ಯಾಯ ಮಾಡುವುದಿಲ್ಲ. ಪಕ್ಷ ಅಧಿಕಾರಕ್ಕೂ ಬಂದಿದ್ದು, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅವರಿಗಿಂತಲೂ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಘೋಷಿಸಿದರು.

ಟಾಪ್ ನ್ಯೂಸ್

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.