ಬೈಸೆ ಶಾಲೆ ದುರಸ್ತಿ ಬೇಡಿಕೆಗೆ ಸಿಗ್ತಿಲ್ಲ ನಯಾಪೈಸೆ ಬೆಲೆ!

ಏಳು ದಶಕ ಪೂರೈಸಿದ ಸರಕಾರಿ ಶಾಲೆ ಕಟ್ಟಡ ಶಿಥಿಲಅಧಿಕಾರಿಗಳು-ಜನಪ್ರತಿನಿಧಿಗಳ ನಿರ್ಲಕ್ಷ್ಯ ಆರೋಪ

Team Udayavani, Dec 16, 2019, 1:30 PM IST

16-December-10

„ಕುಮದಾ ನಗರ

ಹೊಸನಗರ: ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣದ ಹಸಿವು ನೀಗಿಸಿದ ವಿದ್ಯಾ ದೇಗುಲ ಇದು. 70 ವರ್ಷ ಹಳೆಯದಾದ ಈ ಸರ್ಕಾರಿ ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಕೊಠಡಿಯೊಳಗೆ ತರಗತಿ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ, ಜನಪ್ರತಿನಿ ಧಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಹೌದು, ಹೊಸನಗರ ತಾಲೂಕಿನ ಮೂಡುಗೊಪ್ಪ- ನಗರ ಗ್ರಾಪಂ ವ್ಯಾಪ್ತಿಯ ಬೈಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರವಸ್ಥೆ ಇದು.

ಬಾರೀ ಹಳೆಯದಾದ ಕಟ್ಟಡವಾಗಿದ್ದು ಸಂಪೂರ್ಣ ಶಿಥಿಲಗೊಂಡು ಒಂದೊಂದೇ ಇಟ್ಟಿಗೆಗಳು ಕೆಳಗೆ ಬೀಳಲಾರಂಭಿಸಿವೆ. ಅಲ್ಲದೆ ಅಲ್ಲಲ್ಲಿ ತೀವ್ರತರದ ಬಿರುಕು ಬಿಟ್ಟಿದ್ದು ಆತಂಕ ಹುಟ್ಟಿಸಿದೆ. ನಾಲ್ಕು ಕೊಠಡಿ ಹೊಂದಿರುವ ಈ ಕಟ್ಟಡದಲ್ಲಿ ತರಗತಿ ನಡೆಸಲು ಸಾಧ್ಯವಾಗದೆ ಉಳಿದ ಕಟ್ಟಡದಲ್ಲಿ ಒಟ್ಟಿಗೆ ಒಂದರಿಂದ ಏಳನೇ ತರಗತಿಯನ್ನು ಒಟ್ಟಿಗೆ ಕೂರಿಸಿ ನಡೆಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.

ಸ್ವಾತಂತ್ರ್ಯ ಪೂರ್ವ ಕಟ್ಟಡ: ಬೈಸೆಯ ಸರ್ಕಾರಿ ಶಾಲೆಯ ಕಟ್ಟಡಕ್ಕೆ ಶಾಲೆಯ ಮೂಲಗಳ ಪ್ರಕಾರ 7 ದಶಕ ಕಳೆದಿದೆ. ಸ್ವಾತಂತ್ರ್ಯ ಪೂರ್ವ ಅಂದರೆ 1947ರಲ್ಲಿ ಈ ಕಟ್ಟಡ ಸ್ಥಾಪನೆಯಾಯ್ತು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ಈವರೆಗೆ ನಿರಂತರ ವಿದ್ಯಾದಾನ ಮಾಡುತ್ತ ಮೂಡುಗೊಪ್ಪ ಮತ್ತು ಅರಮನೆಕೊಪ್ಪ ಗ್ರಾಪಂ ಭಾಗದ ಜನರ ಮಹತ್ವದ ಶೈಕ್ಷಣಿಕ ಕೇಂದ್ರವಾಗಿತ್ತು. ಇದೀಗ ಸುಮಾರು 29 ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದು ಕಟ್ಟಡದ ದುಸ್ಥಿತಿಯಿಂದಾಗಿ ಸುಗಮ ವ್ಯಾಸಂಗ ಕಷ್ಟವಾಗಿದೆ.

ಕಟ್ಟಡಕ್ಕೇನು ಕೊರತೆ ಇಲ್ಲ; ತಜ್ಞರ ವರದಿ: ಭೀಕರ ಮಳೆಹಾನಿಗೆ ತುತ್ತಾದ ಸಂದರ್ಭದಲ್ಲಿ ಶಾಲಾ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಧಿಕಾರಿಗಳು ವರದಿ ಕೇಳಿದ್ದರು. ಅಲ್ಲಿಗೆ ಭೇಟಿ ಕೊಟ್ಟ ಇಂಜನಿಯರ್‌ ಕಟ್ಟಡ ಪರಿಶೀಲಿಸಿ ಕಟ್ಟಡಕ್ಕೇನು ತೊಂದರೆ ಇಲ್ಲ ಎಂಬ ವರದಿ ರವಾನಿಸಿದ್ದರು. ಆದರೆ ಕಟ್ಟಡದ ದುಸ್ಥಿತಿ ಕಣ್ಣಿಗೆ ರಾಚುವಂತಿದ್ದರೂ ಅ ಧಿಕಾರಿಗಳು ಹೀಗೇಕೆ ವರದಿ ಕೊಟ್ಟರು ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ. ಹೊಸ ಕಟ್ಟಡಕ್ಕಾಗಿ ಕೆಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದು, ಇಂಜನಿಯರ್‌ ವರದಿಯಿಂದಾಗಿ ಹಿನ್ನೆಡೆಯಾಗಿದೆ.

ಶಿಕ್ಷಣ ಇಲಾಖೆ ಅಧಿ ಕಾರಿಗಳು ತುರ್ತು ಪರಿಶೀಲನೆ ನಡೆಸಿ ನೂತನ ಕಟ್ಟಡ ಮಂಜೂರು ಮಾಡುವಂತೆ ಬೈಸೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಾಲಾ ಆವರಣದಲ್ಲಿ ಪಾಳುಬಿದ್ದ ಬಾವಿ: ಬೈಸೆ ಶಾಲೆಯ ಆವರಣ ಪ್ರವೇಶಿಸುತ್ತಿದ್ದಂತೆ ಪಾಳು ಬಿದ್ದ ಬಾವಿ ಕಾಣಿಸುತ್ತದೆ. ಬಾವಿಯ ಕೈಪಿಡಿ ಕಿತ್ತು ಹೋಗಿ ಹಲವು ವರ್ಷಗಳೇ ಕಳೆದಿವೆ. ಅಲ್ಲದೆ ಬಾವಿಯೊಳಗೆ ಕಸಕಡ್ಡಿಗಳು ಬಿದ್ದು ನೀರಿಲ್ಲದಂತೆ ಆಗಿದೆ. ತೆರೆದ ಬಾವಿಯಾದ ಕಾರಣ ಅಪಾಯಕ್ಕೂ ಆಹ್ವಾನ ನೀಡುತ್ತಿದೆ. ಹೀಗಿದ್ದರೂ ಬಾವಿಯನ್ನು ದುರಸ್ತಿಗೊಳಿಸುವ ಇಲ್ಲವೇ ಮುಚ್ಚುವ ಕೆಲಸ ಮಾಡಿಲ್ಲ. ಅಲ್ಲದೆ ಶೌಚಾಲಯದ ಮೇಲು ಹೊದಿಕೆ ಕೂಡ ಶಿಥಿಲಗೊಂಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub