ಶರಾವತಿ ನದಿಗೆ ಧಕ್ಕೆಯಾದರೆ ಹೋರಾಟ: ಚನ್ನಬಸವ ಸ್ವಾಮೀಜಿ

ಸರ್ಕಾರದ ಯೋಜನೆ ಅವೈಜ್ಞಾನಿಕ

Team Udayavani, Jun 28, 2019, 4:05 PM IST

28-June-29

ಹೊಸನಗರ: ಶರಾವತಿ ನದಿಗಾಗಿ ನಾವು ಹೋರಾಟ ಕುರಿತು ಪೂರ್ವಭಾವಿ ಸಭೆ ನಡೆಯಿತು.

ಹೊಸನಗರ: ಶರಾವತಿ ನಮ್ಮ ತಾಲೂಕಿನ ಜೀವನದಿ. ಮಲೆನಾಡ ಪರಿಸರ ಹುಟ್ಟಿ ಬೆಳೆದ ಈ ನದಿ ಮಲೆನಾಡಿಗರ ಸಾಕ್ಷಿಪ್ರಜ್ಞೆಯಾಗಿದೆ. ಶರಾವತಿ ನದಿಯಲ್ಲಿ ನಮ್ಮವರು ಬದುಕು ಕಟ್ಟಿಕೊಂಡಿದ್ದಾರೆ. ನದಿ ಆಸರೆಯಲ್ಲಿ ನಾವಿದ್ದೇವೆ. ಬದುಕಿಗೆ ಆಸರೆಯಾಗಿರುವ ನಮ್ಮ ಶರಾವತಿ ನದಿ ಅಸ್ತಿತ್ವಕ್ಕೆ ಧಕ್ಕೆ ಆದಲ್ಲಿ ಹೋರಾಟವೇ ಉತ್ತರವಾಗಬೇಕಿದೆ. ಈ ವಿಚಾರದಲ್ಲಿ ಮಲೆನಾಡಿಗರಾದ ನಾವು ಕೈ ಕಟ್ಟಿ ಕೂರುವ ಪ್ರಶ್ನೆಯೇ ಉದ್ಭವಿಸದು ಎಂದು ಮೂಲೆಗದ್ದೆ ಸದಾನಂದ ಶಿವಯೋಗಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ಸುದ್ದಿಮನೆಯಲ್ಲಿ ನಡೆದ ‘ಶರಾವತಿ ನದಿಗಾಗಿ ನಾವು.. ಶರಾವತಿ ನದಿ ನೀರು ಉಳಿಸಿ’ ಹೋರಾಟ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಪ್ರಸ್ತಾಪಿಸಿದ ಈ ಯೋಜನೆ ತೀರಾ ಅವೈಜ್ಞಾನಿಕವಾಗಿದೆ. ಇದು ಯಾವ ಕಾರಣಕ್ಕೂ ಕಾರ್ಯಸಾಧುವಲ್ಲ. ಯೋಜನೆ ಜಾರಿಯಿಂದ ಮಲೆನಾಡ ಜನರಲ್ಲಿ ಆತಂಕ ಉಂಟಾಗಿದೆ. ಮಲೆನಾಡಲ್ಲಿ ಶಾಂತಿ ಕದಡುವ ಪ್ರಯತ್ನದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಪರಿಸರ ಕಾರ್ಯಕರ್ತ ಚಕ್ರವಾಕ ಸುಬ್ರಹ್ಮಣ್ಯ ಮಾತನಾಡಿ, ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಶರಾವತಿ ನೀರನ್ನು ಕೊಂಡೊಯ್ಯುವ ಸರ್ಕಾರದ ಪ್ರಸ್ತಾವಿತ ಯೋಜನೆ ತೀರಾ ಮೂರ್ಖತನದ್ದಾಗಿದೆ. ಮಾತ್ರವಲ್ಲ ಸಾರ್ವಜನಿಕವಾಗಿಯೂ ಇದು ನಗೆಪಾಟಲಿಗೆ ಗುರಿಯಾಗಿದೆ ಎಂದರು.

ಲಿಂಗನಮಕ್ಕಿಯಿಂದ ಬೆಂಗಳೂರು ಸುಮಾರು 4 ಸಾವಿರ ಮೀಟರ್‌ ಎತ್ತರ ಇದ್ದು ಸುಮಾರು 400ಕ್ಕೂ ಹೆಚ್ಚು ಕಿಮೀ ದೂರ ಇದೆ. ಇಷ್ಟು ಅಂತರದಲ್ಲಿ ನದಿ ನೀರನ್ನು ಕೊಂಡ್ಯೊಯಲು ಸಾಧ್ಯವೇ ಇಲ್ಲವಾಗಿದೆ ಎಂದರು. ಸಾಮಾಜಿಕ ಕಾರ್ಯಕರ್ತ ಹನಿಯ ರವಿ ಮಾತನಾಡಿ, ಶರಾವತಿ ನದಿ ನೀರಿಗಾಗಿ ನಡೆಯುತ್ತಿರುವ ಈ ಹೋರಾಟ ಕೇವಲ ಹೋರಾಟವಾಗಿ ಉಳಿಯದೆ ನಿರಂತರವಾಗಿ ಶರಾವತಿ ಸಂರಕ್ಷಣೆಗೆ ಕಟಿಬದ್ಧವಾಗಿ ನಡೆಯುವ ಸಾಂಘಿಕ ಹೋರಾಟದ ಶಕ್ತಿ ಪ್ರದರ್ಶನಕ್ಕೆ ನಾಂದಿ ಹಾಡಬೇಕಿದೆ. ಇದರಿಂದ ಸ್ಥಳೀಯ ಸಮಸ್ಯೆಗಳ ನಿವಾರಣೆ ಜಾಗೃತಿ ಮೂಡಿಸಲಿ ಎಂದು ಹಾರೈಸಿದರು.

ಜಿಪಂ ಸದಸ್ಯ ಕಲಗೋಡು ರತ್ನಾಕರ್‌ ಮಾತನಾಡಿ, ಈ ಹಿಂದೆ ಜಿಲ್ಲೆಯ ಗ್ರಾಮಗಳ ಕುಡಿಯುವ ನೀರು ಸರಬರಾಜಿಗಾಗಿ ಬಹುಗ್ರಾಮ ಯೋಜನೆ ಕಾರ್ಯರೂಪಕ್ಕೆ ಪ್ರಸ್ತಾವನೆ ಕಳಿಸಿತ್ತು. ಆದರೆ ಈ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ. ಈಗ ಸರ್ಕಾರ ಬೆಂಗಳೂರಿಗೆ ಶರಾವತಿ ನದಿ ನೀರು ಹರಿಸಲು ಯೋಜನೆ ರೂಪಿಸಲು ಹೊರಟಿದ್ದು ಮಲೆನಾಡ ಜನತೆ ಶಾಪವೇ ಸರಿ ಎಂದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಎಂ.ವಿ. ಜಯರಾಮ್‌ ಮಾತನಾಡಿ, ಶರಾವತಿ ನದಿ ನೀರು ವಿಚಾರದಲ್ಲಿ ಸಂಘಟನಾತ್ಮಕ ಹೋರಾಟ ಅಗತ್ಯವಾಗಿದೆ. ಒಗ್ಗಟ್ಟಿನ ಪ್ರದರ್ಶನವಾಗಿ ಮಲೆನಾಡ ಜನತೆಗೆ ನೆಮ್ಮದಿ ತರುವ ಪ್ರಯತ್ನವಾಗಬೇಕಿದೆ ಎಂದು ಆಶಿಸಿದರು. ಬಿಜೆಪಿ ಮುಖಂಡ ಎನ್‌.ಆರ್‌. ದೇವಾನಂದ್‌ ಮಾತನಾಡಿ, ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಮುನ್ನ ಸಾಗರ, ಹೊಸನಗರ ತಾಲೂಕುಗಳ ಗ್ರಾಮಗಳ ಕುಡಿಯುವ ನೀರು ಸಂಬಂಧಿತ ಯೋಜನೆ ಜಾರಿ ಆಗಬೇಕಿದೆ. ಇಲ್ಲಿ ಕುಡಿಯಲು ನೀರಿಲ್ಲವಾಗಿರುವಾಗ ದೂರದ ಬೆಂಗಳೂರಿಗೆ ನೀರು ಹರಿಸುವ ಯೊಜನೆ ಯಾವತ್ತಿಗೂ ಸಲ್ಲ ಎಂದರು.

ಸಭೆಯಲ್ಲಿ ನೂರಾಕ್ಕೂ ಹೆಚ್ಚು ಮಂದಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ನಮ್ಮ ಶರಾವತಿ ನದಿ ನೀರು ಬೆಂಗಳೂರಿಗೆ ಹೋಗಲು ಸಾಧ್ಯವೇ ಇಲ್ಲ. ಜೀವದ ಹಂಗು ತೊರೆದು ಹೋರಾಟ ನಡೆಸಬೇಕಾಗಿದೆ. ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಹೋರಾಟ ಕಾವು ಪಡೆಯಬೇಕಾಗಿದೆ. ಸಹಿ ಸಂಗ್ರಹ ನಡೆಸಿ ಮುಖ್ಯಮಂತ್ರಿಗಳಿಗೆ ಕಳುಹಿಸಬೇಕಾಗಿದೆ ಎಂಬಿತ್ಯಾದಿ ಅಭಿಪ್ರಾಯಗಳು ವ್ಯಕ್ತವಾದವು.

10ರ ಬಂದ್‌ಗೆ ಬೆಂಬಲ: ಶರಾವತಿ ನದಿ ನೀರು ಹರಿಸುವ ಸರ್ಕಾರದ ಯೋಜನೆ ಖಂಡಿಸಿ ನಡೆಸಲುದ್ದೇಶಿಸಿರುವ ಶಿವಮೊಗ್ಗ ಬಂದ್‌ಗೆ ಹೊಸನಗರ ಜನತೆ ಬೆಂಬಲಿಸುತ್ತದೆ. ಹೊಸನಗರದಿಂದ ಸಾವಿರಾರು ಜನರು ಬಂದ್‌ನಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲಾಗುತ್ತದೆ ಎಂದು ಘೋಷಿಸಿದರು.

ಸಭೆಯಲ್ಲಿ ಚಲನಚಿತ್ರ ನಟ ಏಸು ಪ್ರಕಾಶ್‌, ಸಾರಾ ಸಂಸ್ಥೆಯ ಅರುಣಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ. ನಾಗರಾಜ್‌, ಕಸಾಪ ಅಧ್ಯಕ್ಷ ಇಲಿಯಾಸ್‌, ಕಾರ್ಯದರ್ಶಿ ಹ.ರು. ಗಂಗಾಧರಯ್ಯ, ಜೆಸಿಐನ ಬಿ.ಎಸ್‌. ಸುರೇಶ್‌, ಅರೆಮನೆ ವಿನಾಯಕ, ಹೊಸನಗರ ಹಿತರಕ್ಷಣಾ ವೇದಿಕೆಯ ಅಭಿಲಾಷ್‌, ಅನ್ಸರ್‌, ಜಬಗೋಡು ಹಾಲಪ್ಪ, ಪಪಂ ಸದಸ್ಯ ಸುರೇಂದ್ರ ಕೋಟ್ಯಾನ್‌, ಸಿಂಥಿಯಾ ಸೆರೆವೂ, ಶಾಂತಮೂರ್ತಿ ಸಂಕೂರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.