26ರಂದು ಮಹಿಳಾ ಸಾಹಿತ್ಯ ಸಮ್ಮೇಳನ
Team Udayavani, May 4, 2019, 4:54 PM IST
ಹೊಸನಗರ: ಕಾರಣಗಿರಿಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಸಾಪ ಕಾರ್ಯಾಧ್ಯಕ್ಷರಾಗಿ ಮ.ಸ.ನಂಜುಂಡಸ್ವಾಮಿ ಅವರನ್ನು ನೇಮಕ ಮಾಡಲಾಯಿತು.
ಹೊಸನಗರ: ಜಿಲ್ಲಾ ಮಟ್ಟದ 3ನೇ ಮಹಿಳಾ ಸಾಹಿತ್ಯ ಸಮ್ಮೇಳನವು ತಾಲೂಕಿನ ಕಾರಣಗಿರಿ ಸಿದ್ಧಿವಿನಾಯಕ ಸಭಾಂಗಣದಲ್ಲಿ ಮೇ 26ರಂದು ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಬಿ. ಶಂಕರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿವಮೊಗ್ಗದ ಸಾಹಿತಿ ಸತ್ಯಭಾಮಾ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಉಸ್ತುವಾರಿ ಮಹಿಳೆಯರೇ ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಮಹಿಳಾ ಬರಹಗಾರರು, ಸಾಹಿತ್ಯದಲ್ಲಿ ಕೃಷಿ ಮಾಡಿದವರನ್ನು ಕಸಾಪ ಗುರುತಿಸಿದೆ.
ಬಿದನೂರು ಅರಸರ ಕಾಲದಿಂದಲೂ ಮಹಿಳಾ ಸಾಹಿತಿಗಳಿಗೆ ಹೆಚ್ಚಿನ ಸ್ಥಾನ ಮಾನ ನೀಡಲಾಗಿತ್ತು ಎಂಬದು ಇತಿಹಾಸ ಪುಟದಿಂದ ತಿಳಿದುಬಂದಿದೆ ಎಂದರು. ಈ ಹಿಂದೆ ಸಾಹಿತ್ಯ ಸಮ್ಮೇಳನವನ್ನು ಶಿಕಾರಿಪುರ ಹಾಗೂ ಶಿವಮೊಗ್ಗ ತಾಲೂಕಿನಲ್ಲಿ ನಡೆಸಲಾಗಿತ್ತು. ಮಹಿಳಾ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಮಹಿಳಾ ಲೇಖಕರಿಗೆ, ಹೊಸ ಬರಹಗಾರ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿದ ಕೀರ್ತಿ ಜಿಲ್ಲಾ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ. ನಮ್ಮ ಮಾದರಿಯಲ್ಲಿ ಕೆಲವು ಜಿಲ್ಲೆಗಳು ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿವೆ ಎಂದರು. ಕಾರ್ಯಾಧ್ಯಕ್ಷರಾಗಿ ಆಯ್ಕೆ: ಇದೇ ವೇಳೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ್ಷರಾಗಿ ಮ.ಸ. ನಂಜುಂಡಸ್ವಾಮಿ ಅವರನ್ನು ನೇಮಕ ಮಾಡಲಾಯಿತು. ತಾಲೂಕು ಕಸಾಪ ಅಧ್ಯಕ್ಷ ಕೆ. ಇಲಿಯಾಸ್, ಕಾರ್ಯದರ್ಶಿ ಗಂಗಾಧರಯ್ಯ, ಜಿಲ್ಲಾ ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳಾದ ಚಂದ್ರಕಲಾ, ಜಿ.ಎಂ. ನಾಗರಾಜ, ಹಿತಕರ ಜೈನ್, ಹನಿಯ ರವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.