ಅತ್ಯಾಚಾರ ಖಂಡಿಸಿ ಜಿಲ್ಲಾದ್ಯಂತ ಪ್ರತಿಭಟನೆ

ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಅಶ್ಲೀಲ ಸಿನಿಮಾ-ಸಾಹಿತ್ಯ ನಿಷೇಧಕ್ಕೆ ಆಗ್ರಹ

Team Udayavani, Dec 4, 2019, 1:06 PM IST

4-December-10

ಹೊಸಪೇಟೆ: ಹೈದರಾಬಾದಿನ ಪಶುವೈದ್ಯ ಮೇಲಿನ ಅತ್ಯಾಚಾರ, ಕೊಲೆ ಕ್ರಮ ಖಂಡಿಸಿ, ನೇತೃತ್ವದಲ್ಲಿ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ನಗರದ ರೋಟರಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌, ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ ನೇತೃತ್ವದಲ್ಲಿ ಅಂಬೇಡ್ಕರ್‌ ವೃತ್ತದಿಂದ ರೋಟರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆ ಸಿದ ವಿದ್ಯಾರ್ಥಿಗಳು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಹಸುಳೆಗೆ (ಮಗುವಿಗೆ) ರಕ್ಷಣೆಯಾವಾಗ, ಸರ್ಕಾರಗಳ ಬೇಜವಬ್ದಾರಿತನಕ್ಕೆ ಧಿಕ್ಕಾರ, ಅಶ್ಲೀಲ ಸಿನಿಮಾ ಸಾಹಿತ್ಯ ನಿಷೇಧಿಸಬೇಕು ಎಂದು ವಿದ್ಯಾರ್ಥಿಗಳು ಮಳೆಯಲ್ಲಿಯೇ ಘೋಷಣೆಗಳನ್ನು ಕೂಗಿದರು.

ಎಐಎಂಎಸ್‌ಎಸ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ಎ.ಶಾಂತಾ ಅವರು ಮಾತನಾಡಿ, ಸಮಾಜದಲ್ಲಿ ದಿನದಿಂದ ದಿನಕ್ಕೆ ಇಂತಹ ಕೃತ್ಯಗಳು ಹೆಚ್ಚಾಗುತ್ತಿವೆ. ಇದು ಸರ್ಕಾರಗಳ ಮತ್ತು ನ್ಯಾಯಾಲಯಗಳ ನಿರ್ಲಕ್ಷ್ಯತಯೇ ಸಂಕೇತವಾಗಿದೆ. ನಿರ್ಭಯಾಘಟನೆ ನಡೆದ ನಂತರ ಜಸ್ಟೀಸ್‌ ವರ್ಮಾ ಆಯೋಗದ ಶಿಫಾರಸ್ಸುಗಳಲ್ಲು ಇನ್ನೂ ಜಾರಿಗೊಳಿಸಿಲ್ಲ. ಅಪರಾಧಿಗಳಿಗೆ ಶಿಕ್ಷೆಯಾಗುತ್ತಿಲ್ಲ. ಇಂತಹ ಘಟನೆಗಳಿಂದ ಸಮಾಜ ಅಧೋಗತಿಗೆ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿವೈಓನ ಜಿಲ್ಲಾ ಸಂಚಾಲಕ ಎನ್‌. ಜಗದೀಶ್‌ ಅವರು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಭದ್ರತೆಯಿಲ್ಲ. ಅತ್ಯಾಚಾರ ನಡೆದ ನಂತರ ಆರೋಪಿಗಳಿಗೆ ರಕ್ಷಣೆ ಸಿಗುತ್ತಿದೆ. ಇದು ದುರಂತದ ಸಂಗತಿಯಾಗಿದೆ. ಇಂತಹ ವ್ಯವಸ್ಥೆಯಲ್ಲಿ ನಮ್ಮ ಹೆಣ್ಣುಮಕ್ಕಳು ಬದುಕುತ್ತಿದ್ದಾರೆ. ಕೊಳೆತ ಸಮಾಜವನ್ನು ಕಿತ್ತುಹಾಕಿ ಮಹಿಳೆಯರನ್ನು ಗೌರವಿಸುವಂತಹ ಸಮಾಜವನ್ನು ನಾವೆಲ್ಲರೂ ನಿರ್ಮಿಸಬೇಕಾಗಿದೆ ಎಂದರು.

ಎಐಡಿಎಸ್‌ಓನ ಜಿಲ್ಲಾಧ್ಯಕ್ಷರಾದ ಜಿ.ಸುರೇಶ್‌, ಜಿಲ್ಲಾ ಕಾರ್ಯದರ್ಶಿ ಎರ್ರಿಸ್ವಾಮಿ, ಮುಖಂಡರಾದ ದಿವ್ಯಾ, ಅಭಿಷೇಕ್‌ ಕಾಳೆ, ಪಂಪಾಪತಿ ಕೋಳೂರ್‌, ರವಿ ದರೋಜಿ, ಹುಲುಗಪ್ಪ, ಯೇಸುದಾಸ್‌, ರಾಜು, ಆರ್‌.ನಾಗರಾಜ್‌, ಎ.ಮಲ್ಲಿಕಾರ್ಜುನ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.