ಜಲಾಶಯದಿಂದ ನೀರು ಹೊರಕ್ಕೆ
ತುಂಗಭದ್ರಾ ಜಲಾಶಯದ 22 ಕ್ರಸ್ಟ್‌ಗೇಟ್ ತೆರೆದು ನೀರು ಬಿಡುಗಡೆ
Team Udayavani, Sep 6, 2019, 3:38 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ 22 ಗೇಟ್ ಮೂಲಕ ನದಿಗೆ ನೀರು ಹರಿಸಿರುವುದು.
ಹೊಸಪೇಟೆ: ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಗುರುವಾರ ಜಲಾಶಯದ 22 ಕ್ರಸ್ಟ್ ಗೇಟ್ ತೆರೆದು 67 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ನದಿಗೆ ಹರಿಬಿಡಲಾಗಿದೆ.
ತುಂಗಭದ್ರಾ ಜಲಾನಯನ ಪ್ರದೇಶಗಳಾದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗಾ, ಭದ್ರಾ ಹಾಗೂ ವರದಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಇದರಿಂದ ತುಂಗಭದ್ರಾ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಲಾಶಯದ ನೀರಿನ ಸಮತೋಲನ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗಿದೆ. ಆಗಸ್ಟ್ ಎರಡನೇ ವಾರದಲ್ಲಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಜಲಾಶಯ ತುಂಬಿ ಒಮ್ಮೆ ನೀರನ್ನು ಹೊರಬಿಡಲಾಗಿತ್ತು. ನಂತರ ನೀರಿನ ಒಳಹರಿವು ಹೆಚ್ಚಾದಂತೆ ಒಂದು, ನಾಲ್ಕು ಗೇಟ್‌ಗಳನ್ನು ತೆರೆದು ಆಗಾಗ ನೀರು ನದಿಗೆ ಹರಿಸಲಾಗಿತ್ತು. ಆದರೆ ಬುಧವಾರ ಒಮ್ಮೆಲೆ ಒಳಹರಿವು ಹೆಚ್ಚಿದ್ದರಿಂದ ರಾತ್ರಿ 12 ಗೇಟ್ ತೆರೆಯಲಾಗಿತ್ತು. ಗುರುವಾರ ಬೆಳಗ್ಗೆ 22 ಗೇಟ್‌ಗಳನ್ನು ತೆರೆದು ನಿರಂತರವಾಗಿ ನದಿಗೆ ನೀರು ಹರಿಸಲಾಗುತ್ತಿದೆ.
ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಹರಿಬಿಟ್ಟಿರುವುದರಿಂದ ನದಿ ಪಾತ್ರದ ಗ್ರಾಮದ ಜನ-ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುಂಗಭದ್ರಾ ಜಲಮಂಡಳಿ ಅಧಿಕಾರಿಗಳು ಸೂಚಿಸಿದ್ದಾರೆ.
ಜುಲೈನಲ್ಲಿ ಭರ್ತಿಯಾಗಲಿಲ್ಲ ಜಲಾಶಯ: ಪ್ರತಿವರ್ಷ ಜುಲೈ ತಿಂಗಳ ಮೊದಲ ಹಾಗೂ ಎರಡನೇ ವಾರದಲ್ಲಿ ಭರ್ತಿಯಾಗಬೇಕಿದ್ದ ಜಲಾಶಯ ಈ ಬಾರಿ ಭರ್ತಿಯಾಗದೇ ಈ ಭಾಗದ ರೈತಾಪಿ ಜನರು ಆತಂಕದಲ್ಲಿದ್ದರು. ಕೊನೆಗೂ ಆಗಸ್ಟ್ ಎರಡನೇ ವಾರದ ಆರಂಭದಲ್ಲಿ ಜಲಾನಯನ ಪ್ರದೇಶದಲ್ಲಿ ಆಧಿಕ ಮಳೆಯಾಗಿ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಕೇವಲ ಎರಡು ಮೂರು ದಿನದಲ್ಲಿ ಜಲಾಶಯ ಭರ್ತಿಯಾಯಿತು. ಜಲಾಶಯ ಭರ್ತಿಯಾಗುತ್ತಿದಂತೇ ತುಂಗಭದ್ರಾ ಮಂಡಳಿ ಹೆಚ್ಚುವರಿ ನೀರನ್ನು ಆ. 10ರಂದು ನದಿಗೆ ಹರಿಸಿತು.
ಅಂದಿನಿಂದ ಜಲಾಶಯ ನೀರಿನ ಮಟ್ಟದಲ್ಲಿ ಏರಿಳಿತವಿತ್ತು. ಇದೀಗ ಜಲಾಶಯಕ್ಕೆ ಹರಿದು ಬರುವ ಒಳಹರಿವು ಏರಿಕೆ ಕಂಡಿದ್ದು, 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈಗಷ್ಟೇ ನದಿ ನೀರಿನ ಮಟ್ಟ ತಗ್ಗಿದ ಹಿನ್ನೆಲೆಯಲ್ಲಿ ರೈತಾಪಿ ಜನರು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದು, ದೈನಂದಿನ ಬದುಕಿಗೆ ಹೊಂದಿಕೊಂಡಿದ್ದರು. ಇದೀಗ ಮತ್ತೂಮ್ಮೆ ನದಿಗೆ ಹೆಚ್ಚು ನೀರು ಹರಿಬಿಟ್ಟಿರುವುದರಿಂದ ಅನಿವಾರ್ಯವಾಗಿ ನದಿ ಪಾತ್ರದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದ್ದು, ದಿಕ್ಕು ತೋಚದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ
Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್ ಮೇಲೇ ಕಣ್ಣು!
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.