ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ದ್ವಿಗುಣ
ಐದು ದಿನದಲ್ಲಿ 7.5 ಟಿಎಂಸಿ ನೀರು ಸಂಗ್ರಹ
Team Udayavani, Jul 14, 2019, 12:41 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ನೀರು ಸಂಗ್ರಹ ಏರಿಕೆ ಕಂಡಿರುವುದು.
ಹೊಸಪೇಟೆ: ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಐದು ದಿನದಲ್ಲಿ 7.5 ಟಿಎಂಸಿಯಷ್ಟು ನೀರು ಹರಿದು ಬಂದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕಳೆದ ವಾರದಿಂದ ಬೀಳುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ ದ್ವಿಗುಣವಾಗಿದೆ. ತುಂಗಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಾದಿಂದ 6501 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಶನಿವಾರ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, 26 ಸಾವಿರಕ್ಕೂ ಆಧಿಕ ಕ್ಯೂಸೆಕ್ ನೀರು ಹರಿದು ಬಂದಿದೆ. ಕಳೆದ ವರ್ಷ ಈ ದಿನಾಂಕದಲ್ಲಿ 59ಸಾವಿರ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದಿತ್ತು. ಕಳೆದ ವರ್ಷಗಿಂತಲೂ ಈ ವರ್ಷ ಸುಮಾರು ಅರ್ಧದಷ್ಟು ಒಳ ಹರಿವು ಕಡಿಮೆಯಾಗಿದೆ.
ಜು. 9ರಿಂದ ಜು. 13ರವರೆಗೆ ಒಟ್ಟು 7.5 ಟಿಎಂಸಿ ನೀರು ಹರಿದು ಬಂದಿದ್ದು, ಪ್ರಸ್ತುತ ಜಲಾಶಯದಲ್ಲಿ 9.314 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ನಾಲ್ಕು ವರ್ಷದಿಂದ ಮಳೆ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಈ ಭಾಗದ ರೈತರ ಬದುಕಿಗೆ ತುಂಗಭದ್ರಾ ಜಲಾಶಯ ಜೀವನ ಆಧಾರವಾಗಿದೆ. ಈ ಭಾಗದಲ್ಲಿ ಮಳೆ ಕೈಕೊಟ್ಟರೂ ತುಂಗಭದ್ರೆ ಎಂದಿಗೂ ರೈತರನ್ನು ಕೈ ಬಿಡುವುದಿಲ್ಲ ಎಂಬುದು ನಂಬಿಕೆ. ಹೀಗಾಗಿ ಕಳೆದ ಐದು ದಿನಗಳಿಂದ ಜಲಾಶಯದಲ್ಲಿ ಒಳಹರಿವು ಹರಿದು ಬರುತ್ತಿರುವ ಹಿನ್ನಲೆಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ಚಟುವಟಿಕೆ ಗರಿಗೆದರಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.