ಸಂಚಾರ ಸಮಸ್ಯೆ ಸೃಷ್ಟಿಸಿದ ಆಧಾರ ಕೇಂದ್ರ

ರಸ್ತೆಯಲ್ಲೇ ಸರತಿ ಸಾಲು-ವಾಹನಗಳ ಪಾರ್ಕಿಂಗ್‌ | ಓಡಾಟಕ್ಕೂ ಪರದಾಟ-ಸ್ಥಳೀಯರ ಆಕ್ಷೇಪ

Team Udayavani, Jan 5, 2020, 2:03 PM IST

5-January-38

ಹುಬ್ಬಳ್ಳಿ: ಇಲ್ಲಿನ ಕ್ಲಬ್‌ ರಸ್ತೆಯಲ್ಲಿ ಬೃಹತ್‌ ಆಧಾರ ಸೇವಾ ಕೇಂದ್ರ ಆರಂಭವಾದರೂ ಜನರು ದಿನಗಟ್ಟಲೇ ಸರತಿಯಲ್ಲಿ ನಿಲ್ಲುವುದು ತಪ್ಪದಂತಾಗಿದೆ. ರಸ್ತೆ ಬದಿಯಲ್ಲಿ ಜನರ ಸರತಿ, ಸರಕು ಸಾಗಣೆ ವಾಹನ ಸೇರಿದಂತೆ ವಿವಿಧ ವಾಹನಗಳಿಂದಾಗಿ ಸಂಚಾರ ಸಮಸ್ಯೆ ಎದುರಾಗಿದೆ.

ದಿನದಿಂದ ದಿನಕ್ಕೆ ಆಧಾರ ಕಾರ್ಡ್‌ನ ಅಗತ್ಯತೆ ಹೆಚ್ಚಾಗುತ್ತಿರುವುದರಿಂದ ಹೊಸ ಕಾರ್ಡ್‌, ತಿದ್ದುಪಡಿ ಕಾರ್ಯಕ್ಕೆ ಆಧಾರ್‌ ಕೇಂದ್ರಗಳಿಗೆ ಬೇಡಿಕೆ ಉಂಟಾಗಿದೆ. ಕರ್ನಾಟಕ ಒನ್‌ ಸೇರಿದಂತೆ ಕೆಲ ಅಧಿಕೃತ ಖಾಸಗಿ ಕೇಂದ್ರಗಳಲ್ಲಿ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಕ್ಲಬ್‌ ರಸ್ತೆಯಲ್ಲಿ ಆಧಾರ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.

ಆದರೆ ಈ ಕೇಂದ್ರ ಆರಂಭವಾದರೂ ಜನ ಸರತಿಯಲ್ಲಿ ನಿಲ್ಲುವುದು ತಪ್ಪಿಲ್ಲ. ತಿದ್ದುಪಡಿ ಅಥವಾ ಹೊಸ ಕಾರ್ಡ್‌ಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿತ್ಯ 16 ಕೌಂಟರ್‌ಗಳ ಮೂಲಕ ಸುಮಾರು 1000 ಕಾರ್ಡ್‌ಗಳ ಕಾರ್ಯ ನಿರ್ವಹಿಸುವ
ಸಾಮರ್ಥ್ಯವಿದ್ದರೂ ಕ್ಯೂ ಮಾತ್ರ ತಪ್ಪಿಲ್ಲ.

ಸಾಕಷ್ಟು ಕೌಂಟರ್‌ಗಳಿವೆ ಆದಷ್ಟು ಬೇಗ ಕೆಲಸ ಮುಗಿಯುತ್ತಿದೆ ಎನ್ನುವ ಕಾರಣಕ್ಕೆ ಜನರು ಹಿಂದಿನ ಎಲ್ಲ ಕೇಂದ್ರಗಳನ್ನು ಬಿಟ್ಟು ಇಲ್ಲಿನ ಕೇಂದ್ರಕ್ಕೆ ಮುಗಿ ಬೀಳುತ್ತಿರುವುದು ಇಷ್ಟೊಂದು ದಟ್ಟಣೆಗೆ ಕಾರಣ ಎನ್ನಲಾಗಿದೆ. ಇಲ್ಲಿನ ಸರತಿ ನೋಡಿದರೆ ಆ ಕೇಂದ್ರಗಳೇ ಉತ್ತಮ ಎನ್ನುವ ಮಾತುಗಳು ಜನರಿಂದ ಕೇಳಿಬರುತ್ತಿವೆ. ನಿತ್ಯ 1000 ಜನರಿಗೆ ಟೋಕನ್‌ ನೀಡಲಾಗುವುದು ಎಂದು ಹೇಳುತ್ತಿದ್ದರು.

ಆದರೆ 400-500ಕ್ಕೆ ಸೀಮಿತಗೊಳಿಸುತ್ತಿದ್ದಾರೆ. ಇಷ್ಟೊಂದು ಬೃಹತ್‌ ಕೇಂದ್ರದ ಪರಿಸ್ಥಿತಿ ಹೀಗಾದರೆ ಹೇಗೆ ಎಂಬುದು
ಜನರ ಪ್ರಶ್ನೆಯಾಗಿದೆ.

ಓಡಾಡುವುದು ಕಷ್ಟ: ಆಧಾರ ಸೇವಾ ಕೇಂದ್ರ ಆರಂಭವಾದಾಗಿನಿಂದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಆಧಾರ್‌ ಕಾರ್ಡ್‌ ಕೆಲಸಗಳಿಗೆ ಬರುವ ಜನರನ್ನು ರಸ್ತೆಯಲ್ಲಿಯೇ ಟೋಕನ್‌ ನೀಡಿ ಸರತಿಯಲ್ಲಿ ನಿಲ್ಲಿಸಲಾಗುತ್ತಿದೆ. ಅವರು ತಂದ ವಾಹನಗಳನ್ನು ಇನ್ನೊಂದು ಪಕ್ಕದಲ್ಲಿ ನಿಲ್ಲಿಸಲಾಗುತ್ತಿದೆ. ಇದರಿಂದ ಇರುವ ಸಣ್ಣ ರಸ್ತೆ ದ್ವಿಚಕ್ರ ವಾಹನ ಓಡಾಟಕ್ಕೂ ತೊಂದರೆಯಾಗುತ್ತಿದೆ. ಆಟೋ ರಿಕ್ಷಾ, ದ್ವಿಚಕ್ರವಾಹನ, ಕಾರುಗಳು ನಿಲ್ಲುತ್ತಿರುವುದರಿಂದ ಇನ್ನೊಂದು ವಾಹನದ ಸಂಚಾರಕ್ಕೂ ರಸ್ತೆಯಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಆಧಾರ ಕೇಂದ್ರದ ಪಕ್ಕದಲ್ಲಿಯೇ ಇರುವ ಗೋದಾಮುವೊಂದಕ್ಕೆ ಸಾಮಗ್ರಿ ಇಳಿಸಲು, ತೆಗೆದುಕೊಂಡು ಹೋಗಲು ಲಾರಿಗಳು ಬರುತ್ತಿರುವುದು ಸಹ ಸಮಸ್ಯೆಗೆ ಕಾರಣವಾಗಿದೆ. ಈ ರಸ್ತೆಯಲ್ಲಿ ಆಸ್ಪತ್ರೆ, ಔಷಧಿ ಅಂಗಡಿ, ರಕ್ತ ಪರೀಕ್ಷೆ ಕೇಂದ್ರಗಳು, ಅಪಾರ್ಟ್‌ಮೆಂಟ್ಸ್‌, ಇತರೆ ಹಲವು ಕಚೇರಿಗಳಿವೆ. ಖಾಸಗಿ ಕಾಲೇಜು ಇದ್ದು, ಅಲ್ಲಿನ ವಾಹನಗಳು ಸಹ ಸಂಚಾರಕ್ಕೆ ಸಮಸ್ಯೆ ಸೃಷ್ಟಿಸುತ್ತಿವೆ. ಗದಗ ರಸ್ತೆಯಿಂದ ಕ್ಲಬ್‌ ರಸ್ತೆಗೆ ಕಾಲ್ನಡಿಗೆ ಮೂಲಕ ಆಗಮಿಸುವ ಜನರಿಗೆ ಇದು ಅಡ್ಡ ರಸ್ತೆ ಕೂಡ ಹೌದು. ಈ ಮೊದಲೇ ದಟ್ಟಣೆಯಿಂದ ಕೂಡಿದ್ದ ರಸ್ತೆ ಇದೀಗ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸೂಕ್ತ ವ್ಯವಸ್ಥೆ ಅಗತ್ಯ: ಆಧಾರ್‌ ಸೇವಾ ಕೇಂದ್ರಕ್ಕೆ ಬರುವ ಜನರನ್ನು ಆವರಣದೊಳೆಗೆ ಸಾಲಿನಲ್ಲಿ ನಿಲ್ಲಿಸಬೇಕು. ಕಟ್ಟಡದ ಮುಂಭಾಗದಲ್ಲಿ ವಾಹನಗಳ ನಿಲುಗಡೆ ಅವಕಾಶ ನೀಡಬೇಕು. ಆದರೆ ಕೇಂದ್ರದ ಸಿಬ್ಬಂದಿ ರಸ್ತೆ ಬದಿಯಲ್ಲಿ ಸಾಲು, ಇನ್ನೊಬ್ಬರ ಅಂಗಡಿ ಕಚೇರಿಗಳ ಮುಂದೆ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಈ ಕಾರಣದಿಂದ ಸ್ಥಳೀಯರ ಆಕ್ಷೇಪಕ್ಕೆ ಕಾರಣವಾಗಿದೆ. ಕಳೆದ ಮೂರ್‍ನಾಲ್ಕು ದಿನಗಳ ಹಿಂದೆ ಇದೇ ವಿಚಾರಕ್ಕೆ ಪೊಲೀಸರು ಬಂದು ಸೂಚನೆ ನೀಡಿದ ಘಟನೆಯೂ ನಡೆದಿದೆ. ಈ ಎಲ್ಲಾ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಜನಾಗ್ರಹವಾಗಿದೆ.

„ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.