ಪಾಲಿಕೆ ಪೌರಕಾರ್ಮಿಕ ನೇಣಿಗೆ ಶರಣು
•+: ಆರೋಪ•ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಕಾರ್ಮಿಕರು
Team Udayavani, Jul 4, 2019, 12:22 PM IST
ಹುಬ್ಬಳ್ಳಿ: ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ ಪೌರ ಕಾರ್ಮಿಕರು ಹಾಗೂ ಮುಖಂಡರು.
ಹುಬ್ಬಳ್ಳಿ: ಮಹಾನಗರ ಪಾಲಿಕೆ ಗುತ್ತಿಗೆ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇರ ವೇತನಕ್ಕೆ ಪರಿಗಣಿಸದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಂಬಂಧಿಕರು ದೂರಿದ್ದಾರೆ.
ತ್ಯಾಜ್ಯ ವಿಲೇವಾರಿ ಮಾಡುವ ಟಿಪ್ಪರ್‌ನಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಲ್ಲಪ್ಪ ಅಣ್ಣಿಗೇರಿ (34) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ಬೂಸ್‌ಪೇಟೆಯಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಿನ ಜಾವ ಕೆಲಸಕ್ಕೆ ಕರೆಯಲು ಹೋದ ಸಂದರ್ಭದಲ್ಲಿ ಆತ್ಮಹತ್ಯೆ ಶರಣಾಗಿರುವು ಗೊತ್ತಾಗಿದೆ. ಕೂಡಲೇ ಅಟೋ ಟಿಪ್ಪರ್‌ನಿಲ್ಲಿ ಕಿಮ್ಸ್‌ಗೆ ದಾಖಲು ಮಾಡಿದ್ದಾರೆ. ಅದಾಗಲೇ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಸುಮಾರು 15 ವರ್ಷಗಳಿಂದ ಪೌರ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಮಾಡಿಕೊಂಡ ಕಲ್ಲಪ್ಪ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.
ಅಧಿಕಾರಿಗಳೇ ಹೊಣೆ: ಪೌರ ಕಾರ್ಮಿಕನ ಸಾವಿಗೆ ಪಾಲಿಕೆ ಅಧಿಕಾರಿಗಳು ಹೊಣೆಯಾಗಿದ್ದಾರೆ. ನೇರ ವೇತನಕ್ಕೆ ಕಲ್ಲಪ್ಪ ಅರ್ಹರಿದ್ದು, ಅವರನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಕಷ್ಟು ಅರ್ಹ ಪೌರ ಕಾರ್ಮಿಕರಿಗೆ ಪಾಲಿಕೆ ಅಧಿಕಾರಿಗಳು ವಂಚನೆ ಮಾಡಿದ್ದಾರೆ. ನ್ಯಾಯುತವಾಗಿ ನಗರದ ಸ್ವಚ್ಛತಾ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರನ್ನು ನೇರ ವೇತನಕ್ಕೆ ಪರಿಗಣಿಸದಿರುವುದು ಪ್ರಮುಖ ಕಾರಣವಾಗಿದೆ ಎಂದು ಪೌರ ಕಾರ್ಮಿಕರ ಮುಖಂಡರು ಆರೋಪಿಸಿದರು.
ಇಲ್ಲಿನ ಕಿಮ್ಸ್ ಆಸ್ಪತ್ರೆ ಶವಗಾರದ ಮುಂಭಾಗದಲ್ಲಿ ಜಮಾಯಿಸಿದ ಪೌರಕಾರ್ಮಿಕರು ಪಾಲಿಕೆ ಘನತ್ಯಾಜ್ಯ ವಿಲೇವಾರಿ ವಿಭಾಗದ ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು. ಪಾಲಿಕೆ ಕಚೇರಿ ಮುಂಭಾಗದ ಶವ ಇಟ್ಟು ಪ್ರತಿಭಟನೆಗೆ ಪೌರ ಕಾರ್ಮಿಕರು ಮುಂದಾಗಿದ್ದರು. ಇದಕ್ಕೆ ಅಧಿಕಾರಿಗಳು ಹಾಗೂ ಮುಖಂಡರು ಆಸ್ಪದ ನೀಡಲಿಲ್ಲ. ಇದರಿಂದ ಕೆಲ ಪೌರ ಕಾರ್ಮಿಕ ಮುಖಂಡರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ನೇರ ವೇತನ ಹಾಗೂ ಕಾಯಂಗೊಳಿಸಲು ತಯಾರಿಸುವ ಪಟ್ಟಿ ತಾರತಮ್ಯದಿಂದ ಕೂಡಿದ್ದು, ನ್ಯಾಯುತವಾಗಿ ದುಡಿದವರಿಗೆ ಸೌಲಭ್ಯ ಕಲ್ಪಿಸಬೇಕು. ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಪಾಲಿಕೆಯಿಂದ ಪರಿಹಾರ ನೀಡುವಂತೆ ಮನವಿ ಮಾಡಿದರು. ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.