ಸಿಸಿಬಿ ಹುತ್ತಕ್ಕೆ ಕೈ ಹಾಕಿದ ಕಮಿಷನರ್‌

ಪೊಲೀಸ್‌ ಇಲಾಖೆಗೆ ಕಪ್ಪುಚುಕ್ಕೆ ತರುವ ಅಧಿಕಾರಿಗಳ ಎತ್ತಂಗಡಿ |ಹೊಸ ತಂಡ ರಚನೆಗೆ ಆದೇಶ

Team Udayavani, Oct 11, 2019, 4:26 PM IST

Udayavani Kannada Newspaper

ಹೇಮರಡ್ಡಿ ಸೈದಾಪುರ
ಹುಬ್ಬಳ್ಳಿ: ಅವಳಿ ನಗರದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರ ವಹಿಸುವ ನಗರ ಅಪರಾಧ ದಳಕ್ಕೆ (ಸಿಸಿಬಿ) ಮೇಜರ್‌ ಸರ್ಜರಿಗೆ ಹು-ಧಾ ಮಹಾನಗರ ಆಯುಕ್ತ ಆರ್‌.ದಿಲೀಪ್‌ ಮುಂದಾಗಿದ್ದಾರೆ. ಹಲವು ವರ್ಷಗಳಿಂದ ಬೇರೂರಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಹಲವು ಸಿಬ್ಬಂದಿಯನ್ನು ವಿವಿಧ ಠಾಣೆಗಳಿಗೆ ವರ್ಗಾಯಿಸಿ ಹೊಸ ತಂಡ ರಚಿಸಲು ಆದೇಶಿಸಿದ್ದಾರೆ.

ನಗರದ ಅಪರಾಧ ಕೃತ್ಯ ಹಾಗೂ ಅಕ್ರಮ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಗರ ಅಪರಾಧ ದಳ (ಸಿಸಿಬಿ) ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇಲ್ಲಿನ ಸಿಸಿಬಿಯ ಕೆಲ ಸಿಬ್ಬಂದಿ ಮೂಲ ಕರ್ತವ್ಯ ಮರೆತು ಇಲಾಖೆಗೆ ಕಪ್ಪು ಚುಕ್ಕೆ ತರುವ ಕೆಲಸದಲ್ಲಿ ತೊಡಗಿದ್ದರು. ಅಕ್ರಮ ದಂಧೆಕೋರರಿಗೆ ಬೆಂಬಲ, ಸಮಾಜಘಾತುಕ ಶಕ್ತಿಗಳೊಂದಿಗೆ ಶಾಮೀಲು, ಇಲಾಖೆ ಗೌಪ್ಯ ಮಾಹಿತಿ ಸೋರಿಕೆ, ಬಡ್ಡಿ ವ್ಯವಹಾರ ಸೇರಿದಂತೆ ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಗಳು ಬಂದ ಹಿನ್ನೆಲೆಯಲ್ಲಿ ಮಹಾನಗರ ಪೊಲೀಸ್‌ ಆಯುಕ್ತ ಆರ್‌.ದಿಲೀಪ್‌ ಸಿಸಿಬಿಗೆ ದೊಡ್ಡ ಮಟ್ಟದ ಸರ್ಜರಿಗೆ ಆದೇಶಿಸಿದ್ದಾರೆ.

ಸಿಸಿಬಿಯನ್ನು ಹೊಸದಾಗಿ ರಚಿಸುವಂತೆ ಅಪರಾಧ ಮತ್ತು ಸಂಚಾರ ಡಿಸಿಪಿ ಡಾ| ಶಿವಕುಮಾರ ಗುಣಾರೆ ಅವರಿಗೆ ಆದೇಶ ನೀಡಿದ್ದು, ಪ್ರಾಮಾಣಿಕ ಹಾಗೂ ಕರ್ತವ್ಯ ನಿಷ್ಠೆ ಹೊಂದಿದ ಸಿಬ್ಬಂದಿಗೆ ಒತ್ತು ನೀಡುವಂತೆ ಸೂಚಿಸಿದ್ದಾರೆ.

ಅಧಿಕಾರಿಗಳಿಗೆ ತಲೆ ನೋವಾಗಿದ್ದರು: ಸಿಸಿಬಿ ಕೆಲ ಸಿಬ್ಬಂದಿ ಅಕ್ರಮ ಚಟುವಟಿಕೆಗಳಿಗೆ ಬೆಂಬಲವಾಗಿದ್ದ ನಿಂತಿದ್ದರಿಂದ ಇದೊಂದು ವಸೂಲಿ ಗ್ಯಾಂಗ್‌ ಎನ್ನುವಷ್ಟರ ಮಟ್ಟಿಗೆ ಇಲಾಖೆಯಲ್ಲಿ ಕುಖ್ಯಾತಿಗೆ ಕಾರಣವಾಗಿತ್ತು.

ಅಲ್ಲಿನ ಮೇಲಹಂತದ ಅಧಿಕಾರಿಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿರಲಿಲ್ಲ. ಅಕ್ರಮ ಚಟುವಟಿಕೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುತ್ತಿಲ್ಲ. ಅಕ್ರಮ ಚಟುವಟಿಕೆಗಳಿಗೆ ಇವರೇ ಸಾಥ್‌ ನೀಡುತ್ತಿದ್ದಾರೆ ಎಂದು ಕೆಲ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದರು. ಅಧಿಕಾರಿಗಳ ಕೆಲ ನ್ಯೂನ್ಯತೆಗಳನ್ನು ಇಟ್ಟುಕೊಂಡು ಅವರನ್ನು ಹೆದರಿಸಿ ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದರು.

ಅಕ್ರಮ ಚಟುವಟಿಕೆಗಳ ನಡೆಸುತ್ತಿರುವವರ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದರೆ ಗೌಪ್ಯ ಮಾಹಿತಿಯನ್ನು ದಂಧೆಕೋರರಿಗೆ ಸೋರಿಕೆ ಮಾಡುತ್ತಿದ್ದರು ಎಂಬುದು ಸೇರಿದಂತೆ ಹಲವು ಆರೋಪಗಳನ್ನು ಹೊತ್ತ ಸಿಬ್ಬಂದಿಯಿಂದ ಪ್ರಾಮಾಣಿಕ ಕೆಲಸ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಕೆಲ ಅಧಿಕಾರಿಗಳು ಪೊಲೀಸ್‌ ಆಯುಕ್ತರ ಮುಂದೆ ಮೌಖೀಕ ದೂರು ನೀಡಿದ್ದರು. ಅಲ್ಲದೆ ನಗರದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ಹಾಗೂ ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಿಸಿಬಿ ಸಿಬ್ಬಂದಿ ಸಂಪೂರ್ಣ ವಿಫಲವಾಗಿದ್ದಾರೆ ಎನ್ನುವ ಕಾರಣಕ್ಕೆ ಪೊಲೀಸ್‌ ಆಯುಕ್ತರು ಮೇಜರ್‌ ಸರ್ಜರಿಗೆ ಮುಂದಾಗಲು ಕಾರಣವಾಗಿದೆ.

ಅಧಿಕಾರಿಗಳ ಅನುಕೂಲಕ್ಕಾಗಿ ತಂಡ: ಹಿಂದಿನ ಕೆಲ ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸಿಸಿಬಿಯನ್ನು ರಚಿಸಿ ತಮಗೆ ಬೇಕಾದ ಸಿಬ್ಬಂದಿಯನ್ನು ಹಾಕಿಕೊಂಡಿದ್ದಾರೆ ಎನ್ನುವ ಬಲವಾದ ಆರೋಪ ಇಲಾಖೆಯಲ್ಲಿದೆ. ಇನ್ನೂ ಕೆಲ ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ವಸೂಲಿ ಬಾಜಿ, ಕರ್ತವ್ಯದಲ್ಲಿ ನಿರ್ಲಕ್ಷ್ಯದಂತಹ
ಪ್ರಕರಣದಲ್ಲಿ ಶಿಸ್ತು ಕ್ರಮಕ್ಕೊಳಗಾದವರು ಸಿಸಿಬಿಯಲ್ಲಿದ್ದರು.

ಇಂತಹ ಸಿಬ್ಬಂದಿಯನ್ನು ಸಿಸಿಬಿಗೆ ವರ್ಗಾಯಿಸಿದ್ದು ರತ್ನಗಂಬಳಿ ಹಾಸಿದಂತಾಗಿತ್ತು. ಹಿಂದಿನ ಕೆಲ ಅಧಿಕಾರಿಗಳು ಮೌಖೀಕ ಆದೇಶದ ಮೂಲಕ ಸಿಬ್ಬಂದಿಯನ್ನು ಸಿಸಿಬಿಗೆ ಹಾಕಿಸಿಕೊಂಡಿದ್ದರು. ರಾಜಕಾರಣಿ ಹೆಸರು, ಸಂಘಟನೆಗಳ ಹೆಸರು ಹೇಳಿಕೊಂಡು ಅಧಿಕಾರಿಗಳನ್ನು ಹೆದರಿಸುವಷ್ಟರ ಮಟ್ಟಿಗೆ ಬಲಾಡ್ಯರಾಗಿ ಬೆಳೆದಿದ್ದರು. ಸಿಸಿಬಿ ಎನ್ನುವುದು ಅಧಿಕಾರಿಗಳ ಅನುಕೂಲಕ್ಕಾಗಿಯೇ ಇರುವ ತಂಡ ಎನ್ನುವುದು ಇಲಾಖೆ ಸಿಬ್ಬಂದಿಯನಾಮಾಂಕಿತವಾಗಿದೆ.

ವಿಶೇಷ ದಳ ಸಮ್ಮತಿ: ನಿಯಮಾವಳಿ ಪ್ರಕಾರ ಸಿಸಿಬಿ ತಂಡದಲ್ಲಿ ಇರುವ ಸಿಬ್ಬಂದಿಯನ್ನು ನಿಯೋಜಿಸಿ ಪ್ರತ್ಯೇಕ ತಂಡವೊಂದನ್ನು ರಚಿಸಲು ಚಿಂತನೆ ನಡೆಸಲಾಗಿದೆ. ಮಹಾನಗರದ ವ್ಯಾಪ್ತಿಗೆ ಇರುವ ಸಿಬ್ಬಂದಿ ಸಾಲುವುದಿಲ್ಲ ಎನ್ನುವಕಾರಣಕ್ಕೆ ಸಿಸಿಬಿ ಮಾದರಿಯಲ್ಲಿ
ಕರ್ತವ್ಯ ನಿರ್ವಹಿಸುವ ಪ್ರತ್ಯೇಕ ತಂಡ ರಚನೆಯಾಗಲಿದೆ.

ನಗರದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ನಿಯಂತ್ರಣ, ರೌಡಿಶೀಟರ್‌ಗಳ ಹತೋಟಿ ಹಾಗೂ ಅಪರಾಧಿಕ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸಿಸಿಬಿ ಹಾಗೂ ವಿಶೇಷ ತಂಡಕ್ಕೆ ಸಿಬ್ಬಂದಿಯ ನಿಯೋಜನೆಗೆ ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ.

ನಗರ ವಿಶೇಷ ಶಾಖೆ (ಸಿಎಸ್‌ಬಿ)ಯಲ್ಲಿ ಹತ್ತಾರು ವರ್ಷಗಳಿಂದ ನೆಲೆಯೂರಿರುವ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಎಸ್‌ಬಿ ಪೇದೆಗಳ ಕಾರ್ಯವೈಖರಿ ಕುರಿತು ಪೊಲೀಸ್‌
ಆಯುಕ್ತರು ಗಮನ ಹರಿಸಬೇಕು ಎನ್ನುವುದು ಸಿಬ್ಬಂದಿಯ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.