ಸಾಕ್ಷರತೆಯಿಂದ ಕುರುಬ ಸಮುದಾಯ ಅಭಿವೃದ್ಧಿ: ಗೀತಾ

ಕುರುಬ ನೌಕರರ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Team Udayavani, Jul 22, 2019, 12:36 PM IST

22-July-22

ಹುಮನಾಬಾದ: ಮಾಣಿಕನಗರ ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಕುರುಬ(ಗೊಂಡ) ಸರ್ಕಾರಿ ನೌಕರರ ಸಂಘದಿಂದ‌ ಎಸ್‌ಎಸ್‌ಎಲ್ಸಿ, ಪಿಯುಸಿ, ನೀಟ್ ಹಾಗೂ ಜೆಇಇ ಸಾಧಕರನ್ನು ಸನ್ಮಾನಿಸಲಾಯಿತು.

ಹುಮನಾಬಾದ: ಸಾಕ್ಷರತೆ, ಆರ್ಥಿಕ ಸ್ವಾವಲಂಬನೆಯಿಂದ ಮಾತ್ರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಕುರುಬ(ಗೊಂಡ) ಸಮುದಾಯದ ಪಾಲಕರು ಮಕ್ಕಳನ್ನು ಪರಂಪರಾಗತವಾದ ಕುರಿ ಸಾಕಾಣಿಕೆಗೆ ಸೀಮಿತಗೊಳಿಸದೇ, ಪುರುಷ-ಮಹಿಳೆ ಎಂಬ ಭೇದ ಮಾಡದೇ ಸಾಕ್ಷರರನ್ನಾಗಿಬೇಕು ಎಂದು ಜಿಪಂ ಅಧ್ಯಕ್ಷೆ ಗೀತಾ ಪಂಡಿತ್‌ ಚಿದ್ರಿ ಸಲಹೆ ನೀಡಿದರು.

ಮಾಣಿನಗರದ ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ತಾಲೂಕು ಕುರುಬ (ಗೊಂಡ) ನೌಕರರ ಸಂಘ ರವಿವಾರ ಆಯೋಜಿಸಿದ್ದ ಎಸ್‌ಎಸ್‌ಎಲ್ಸಿ, ಪಿಯುಸಿ, ನೀಟ್ ಮತ್ತು ಜಿಇಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಕ್ಷರತೆ ವಿಷಯದಲ್ಲಿ ಪುರುಷರಿಗೆ ಹೋಲಿಸಿದರೆ ಮಹಿಳೆಯರ ಸಂಖ್ಯೆ ತೀರಾ ಕಡಿಮೆಯಾಗಿದೆ. ಭವಿಷ್ಯದಲ್ಲಿ ಸ್ತ್ರೀ-ಪುರುಷರ ಮಧ್ಯ ಭೇದಭಾವ ಎಣಿಸದೇ ಇಬ್ಬರನ್ನೂ ಸಮಾನರಾಗಿ ಕಾಣುವ ಮೂಲಕ ಸಮುದಾಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸಬೇಕು. ಮಹಿಳೆಯರು ಪ್ರತಿಯೊಂದಕ್ಕೂ ಪುರುಷರನ್ನು ಅವಲಂಬಿಸದೇ ಆರ್ಥಿಕ ಸ್ವಾವಲಂಬನೆ ಮೂಲಕ ಸ್ವಾಭಿಮಾನದಿಂದ ಬದುಕಬೇಕು ಎಂದು ಹೇಳಿದರು.

ಕುರಿ ಮತ್ತು ಉಣ್ಣೆ ಮಹಾಮಂಡಳದ ಅಧ್ಯಕ್ಷ ಪಂಡಿತ್‌ ಚಿದ್ರಿ ಮಾತನಾಡಿ, ಸಾಧನೆ ವಿಷಯದಲ್ಲಿ ವಿದ್ಯಾರ್ಥಿಗಳು ಕೇವಲ ಕನಸು ಕಂಡರೆ ಸಾಲದು. ಅದನ್ನು ನನಸಾಗಿಸಲು ಕಠಿಣ ಪರಿಶ್ರಮ ಪಡಬೇಕು. ನಮ್ಮಲ್ಲಿ ಹೇಳುವುದು ಹೆಚ್ಚು ಮಾಡಿ ತೋರಿಸುವುದು ಕಡಿಮೆಯಾದ ಕಾರಣ ಸಮುದಾಯ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿಲ್ಲ. ಯಾವುದಕ್ಕೂ ಎರಡೂವರೆ ದಶಕದಿಂದ ನಡೆಸಲಾದ ಹೋರಾಟದ ಪರಿಣಾಮ ಈಗ ಶೈಕ್ಷಣಿಕ, ಸರ್ಕಾರಿ ಹುದ್ದೆ ಜೊತೆಗೆ ರಾಜಕೀಯ ಸ್ಥಾನಮಾನದ ಮೀಸಲಾತಿ ಗಿಟ್ಟಿಕೊಳ್ಳಲು ಸಾಧ್ಯವಾಗಿದ್ದು, ನಮ್ಮವರು ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕುರುಬ (ಗೊಂಡ) ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಾಳಗೆ ಮಾತನಾಡಿ, ನಮ್ಮಲ್ಲಿ ಕೂಡಿಸುವವರುಗಿಂತ ಸಮಾಜ ಒಡೆಯುವವರ ಸಂಖ್ಯೆಯೇ ಹೆಚ್ಚಾಗಿದೆ. ಆ ಕಾರಣ ಸಂಘಟನೆಯಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲ ಸಂಘಟಿತರಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು. ರಾಜಕಾರಣಿಗಳ ವೈಯಕ್ತಿಕ ಸ್ವಾರ್ಥಕ್ಕಾಗಿ ಬಳಕೆಯಾಗದೇ ಸ್ವಾಭಿಮಾನ ಹೆಚ್ಚಿಸಿಕೊಳ್ಳಲು ಕಂಕಣ ಬದ್ಧರಾಗಬೇಕು ಎಂದರು.

ಕುರುಬ(ಗೊಂಡ) ಜಾತಿ ಪ್ರಮಾಣಪತ್ರಕ್ಕಾಗಿ ನಮ್ಮವರು ಪಟ್ಟ ಪರಿಶ್ರಮ ಅಷ್ಟಿಷ್ಟಲ್ಲ. ನ್ಯಾಯವಾದಿ ಸತೀಶ ರಾಂಪೂರೆ, ಶೇಷಪ್ಪ ಪವಾಡೆ ಒಳಗೊಂಡಂತೆ ಹೊಸ ಪಡೆಗೆ ಬೆಂಬಲಿಸಿ, ಬೆಳೆಸುವ ಅಗತ್ಯತೆ ಇದೆ ಎಂದು ಹೇಳಿದರು.

ಕುರುಬ(ಗೊಂಡ) ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಸತೀಶ ರಾಂಪೂರೆ ಮಾತನಾಡಿ, ಜಿಲ್ಲಾಧಿಕಾರಿ ಅವರ ನಿರ್ಲಕ್ಷ್ಯದ ಕಾರಣ ನಮ್ಮ ಸಮುದಾಯದ ಅದೆಷ್ಟೋ ಜನ ಈಗಲೂ ಕುರುಬ(ಗೊಂಡ) ಪ್ರಮಾಣಪತ್ರ ಲಭ್ಯವಾಗದೇ ಸಂಕಷ್ಟದಲ್ಲಿದ್ದಾರೆ. ಅದಕ್ಕಾಗಿ ಸಮುದಾಯದ ಪ್ರತಿಯೊಬ್ಬರು ಹೋರಾಟಕ್ಕೆ ಇಳಿಯುವುದು ಈಗ ಹಿಂದೆಂದಿಗಿಂತ ಅನಿವಾರ್ಯವಾಗಿದೆ. ಸಮುದಾಯಕ್ಕೆ ಸರ್ಕಾರದ ಸೌಲಭ್ಯ ಕಲ್ಪಿಸಿ ಕೊಡುವವುದಕ್ಕಾಗಿ ದಿನದ 24 ಗಂಟೆ ಸಮಯ ಮೀಸಲಿಡಲು ಸಿದ್ಧರಿರುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕುರುಬ(ಗೊಂಡ) ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ‌ರದ್‌ನಾರಾಯಣಪೇಟಕರ್‌ ಮಾತನಾಡಿ, ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದೆ. ಮನೆ ಒಡೆಯುವವರ ಮಾತಿಗೆ ಬೆಲೆ ಕೊಡದೇ ಜೋಡಿಸುವವರ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ಇದ್ದಲ್ಲಿ ನಮ್ಮ ಸಮುದಾಯಕ್ಕೆ ಯಾವ ದುಷ್ಟ ಶಕ್ತಿಯಿಂದಲೂ ನಮ್ಮನ್ನೇನೂ ಮಾಡಲಾಗದು. ಆ ಆತ್ಮವಿಶ್ವಾಸದಿಂದ ಸಮುದಾಯ ಸಂಘಟನೆಗಾಗಿ ಸರ್ವರೂ ಶ್ರಮಿಸಬೇಕು ಎಂದು ಹೇಳಿದರು.

ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಗಂಧಾ ಅಣ್ಯಪ್ಪ, ಸದಸ್ಯ ಬೀರಪ್ಪ ಮಾರ್ಥಂಡ, ವಿಮಲಾಬಾಯಿ ಕನಕಟ್ಟಾ, ಶಾಂತಾಬಾಯಿ ರಾಂಪೂರೆ, ನೌಕರರ ಸಂಘದ ಹಿರಿಯ ಸಲಹೆಗಾರ ಎಂ.ಎಸ್‌.ಕಟಗಿ, ವೀಠಲ್ ಬೈನೋರ್‌, ರಮೇಶ ಕನಕಟಕರ್‌, ಪ್ರಕಾಶ ಕಾಡಗೊಂಡ, ಶರಣಪ್ಪ ಮಲಗೊಂಡ ಇದ್ದರು.

ಇದೇ ವೇಳೆ ಎಸ್‌ಎಸ್‌ಎಲ್ಸಿ, ಪಿಯುಸಿ, ನೀಟ್ ಮತ್ತು ಜೆಇಇ ಪರೀಕ್ಷೆರಯಲ್ಲಿ ಸಾಧನೆ ಮಾಡಿದ, ಸೇವಾ ಬಡ್ತಿ, ಸೇವಾ ನಿವೃತ್ತಿ ಹೊಂದಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಬಂಡೆಪ್ಪ ಮೋಳಕೇರಿ ಪ್ರಾರ್ಥಿಸಿದರು. ಕಂಟೆಪ್ಪ ಜಟಗೊಂಡ ಸ್ವಾಗತಿಸಿದರು. ಮಾಣಿಕಪ್ಪ ಬಕ್ಕನ್‌ ಪ್ರಾಸ್ತಾವಿಕ ಮಾತನಾಡಿದರು. ರಮೇಶ ಕಲ್ಯಾಣಿ ನಿರೂಪಿಸಿದರು.

ಟಾಪ್ ನ್ಯೂಸ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

14-uv-fusion

UV Fusion: ಕೈ ಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

13-uv-fusion

UV Fusion: ಸಾಂಪ್ರದಾಯಿಕ ಕರಕುಶಲ ಕಲೆಗಳನ್ನು ಬೆಳೆಸೋಣ

9

Cooker Story: ಹತ್ತು ಸಲ ಕೂಗಿದ್ರೂ  ಅವರಿಗೆ ಗೊತ್ತಾಗಲಿಲ್ಲ..!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

12-uv-fusion

UV FUsion: ಇತರರನ್ನು ಗೌರವಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.