ಉಜ್ವಲ ಭವಿಷ್ಯಕ್ಕಾಗಿ ಇಷ್ಟಪಟ್ಟು ಓದಿ: ನ್ಯಾಮಗೌಡರ್‌

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

Team Udayavani, Jul 29, 2019, 3:53 PM IST

29-July-35

ಹುಮನಾಬಾದ: ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿ.ಎ, ಬಿ.ಕಾಂ ಮತ್ತು ಬಿಎಸ್ಸಿ ಪ್ರಥಮ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಪುರಸಭೆ ಸದಸ್ಯ ಕಾಳಪ್ಪ ಗೌಡ್ರು ಉದ್ಘಾಟಿಸಿದರು.

ಹುಮನಾಬಾದ: ಸತತ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ. ಆದ್ದರಿಂದ ವಿದ್ಯಾರ್ಥಿನಿಯರು ಕಷ್ಟಪಟ್ಟು ಓದದೇ ಇಷ್ಟಪಟ್ಟು ಓದಿದಾಗ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಸಿಪಿಐ ಜೆ.ಎಸ್‌.ನ್ಯಾಮಗೌಡರ್‌ ಹೇಳಿದರು.

ಪಟ್ಟಣದ ಯಲಾಲ್ ಶಿಕ್ಷಣ ದತ್ತಿ ಸರ್ವೋದಯ ಪದವಿ ಕಾಲೇಜಿನಲ್ಲಿ ರವಿವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಈ ದೇಶದ ಸಂಸ್ಕೃತಿಯ ಪ್ರತೀಕದವಾಗಿದ್ದು, ಇಂದಿನ ಯುವಕರು ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು. ಜೀವನದ ಅತ್ಯಂತ ಪ್ರಮುಖ ಘಟ್ಟವಾದ ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ವ್ಯರ್ಥ ಕಾಲಹರಣ ಮಾಡದೇ ಹೆತ್ತ ಪಾಲಕರು, ವಿದ್ಯೆ ನೀಡಿದ ಗುರು ಮತ್ತು ವಿದ್ಯಾಲಯದ ಕೀರ್ತಿ ಹೆಚ್ಚಿಸುವುದರೊಂದಿಗೆ ವೈಯಕ್ತಿಕ ಸ್ಥಾನಮಾನಕ್ಕಾಗಿ ಶ್ರಮಿಸಬೇಕು ಎಂದು ಹೇಳಿದರು.

ಪುರಸಭೆ ಸದಸ್ಯ ಸುನೀಲ ಗೌಡ್ರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ವಾಣಿಜ್ಯ ಕೇಂದ್ರಗಳಾಗಿ ಬೆಳೆಯುತ್ತಿರುವ ಈ ದಿನಗಳಲ್ಲಿ ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ದಶಕದಿಂದ ಅತ್ಯಲ್ಪ ಶುಲ್ಕದಲ್ಲಿ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ಯಲಾಲ್ ಶಿಕ್ಷಣ ದತ್ತಿ ಕಾರ್ಯ ಪ್ರಶಂಸನೀಯ. ಭವಿಷ್ಯದಲ್ಲಿ ಪುರಸಭೆ ವತಿಯಿಂದ ಅಗತ್ಯ ಸಹಾಯ ಸಹಕಾರ ನೀಡಲು ಯಾವತ್ತೂ ಸಿದ್ಧ ಎಂದು ಭರವಸೆ ನೀಡಿದರು.ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಹುಳುಗಳಾಗದೇ ಹೊರ ಪ್ರಪಂಚದ ಜ್ಞಾನರ್ಜನೆಗಾಗಿ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಲು ದಿನಪತ್ರಿಕೆ ಓದುವುದನ್ನು ರೂಢಿಸಿಕೊಳ್ಳಬೇಕು. ವಿಶೇಷವಾಗಿ ಯುವತಿಯರು ತಮ್ಮನ್ನು ತಾವು ಯಾವತ್ತೂ ನಾಲ್ಕು ಗೋಡೆಗೆ ಸೇಮಿತವಾಗಿಸಿಕೊಳ್ಳದೇ ವಿದ್ಯಾವ್ಯಾಸಂಗದ ಜೊತೆಗೆ ಬಿಡಿ ಕಾಸಿಗಾಗಿ ಪತಿ ಎದುರು ಕೈ ಚಾಚದೇ ಆರ್ಥಿಕ ಸ್ವಾವಲಂಬನೆ ಮೂಲಕ ತಲೆಎತ್ತಿ ಬದುಕು ಸಾಗಿಸಬೇಕು. ಪರಿಸರ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಿ ಅಕ್ಕಪಕ್ಕದವರಿಗೂ ಅದರ ಮಹತ್ವ ತಿಳಿಸಬೇಕು ಎಂದು ಹೇಳಿದರು.

ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬತಲಿ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಪ್ರೀತಿ ಮೈಗೂಡಿಸಿಕೊಳ್ಳಬೇಕು. ಮೊಬೈಲ್ ಜ್ಞಾನಾರ್ಜನೆಗಾಗಿ ಬಳಸುವುದು ತಪ್ಪಲ್ಲ. ಆದರೆ ಏನು ಬೇಕು ಅದನ್ನು ನೋಡದೇ ಇನ್ನೇನನ್ನೊ ನೋಡುವ ಮೂಲಕ ಯುವಕ-ಯುವತಿರು ದಾರಿ ತಪ್ಪುತ್ತಿದ್ದಾರೆ. ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು, ಈ ಸಂದರ್ಭದಲ್ಲಿ ಕೈಗೊಳ್ಳುವ ಪ್ರತಿಯೊಂದು ಹೆಜ್ಜೆಯನ್ನೂ ಅತ್ಯಂತ ಜಾಗೃತಿಯಿಂದ ಇಡಬೇಕು ಎಂದು ಸಲಹೆ ನೀಡಿದರು.

ಯಲಾಲ್ ಶಿಕ್ಷಣ ಮುಖ್ಯದತ್ತಿ ನಾಗಶೆಟ್ಟಿ ಯಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಮೀನಶಾಕ್ಷಿ ಯಲಾಲ್, ನಿರ್ದೇಶಕ ಪ್ರಜ್ವಲ್ ಯಲಾಲ್, ಪ್ರಾಚಾರ್ಯ ಡಾ|ಅರುಣಕುಮಾರ ಯಲಾಲ್, ಉಪಪ್ರಾಚಾರ್ಯ ಆನಂದ ಚಾಕೂರೆ ವೇದಿಕೆಯಲ್ಲಿದ್ದರು.

ಮಹಾವಿದ್ಯಾಲಯದ ಪ್ರಾಧ್ಯಾಪಕ ಶರಣಯ್ಯ ಚೆಟ್ಟಿ, ಅನೀಲ ಲದ್ದಿ, ಚಂದ್ರಕಾಂತ ಬಿರಾದಾರ, ರಾಘವೇಂದ್ರ ಬಿರಾದಾರ, ರಮೇಶ ನಾಯಕ, ಸೈಯದ್‌ ಖಾಜಾ, ಸಂಗೀತಾ ಪೋಚಂಪಳ್ಳಿ, ಶಿವಲೀಲಾ ಕೋರಿ, ಶಿವಲೀಲಾ ಕೂಡ್ಲಿ, ಸಂಗೀತಾ ಮಠಪತಿ, ಗೌರಮ್ಮ ಪಂಚಮs್, ರೇಣುಕಾ ಬಿರಾದಾರ, ಅಂಬಿಕಾ ಮಹಾಗಾಂವೆ, ಎಚ್.ಕೆ.ಜ್ಯೋತಿ, ಸುಮಂಗಲಾ, ಮಂಗಲಾ, ಭವಾನಿ ಠಾಕೂರ್‌ ಇದ್ದರು.

ಸಂಗೀತಾ, ಕಲಾವತಿ ಪ್ರಾರ್ಥಿಸಿದರು. ಶಶಿಕಲಾ ಸ್ವಾಗತಿಸಿದರು. ಸಂಸ್ಥೆ ಅಧ್ಯಕ್ಷ ಶಾಂತವೀರ ಎನ್‌.ಯಲಾಲ್ ಪ್ರಾಸ್ತಾವಿಕ ಮಾತನಾಡಿದರು. ಪೂಜಾ ಮಹಾಗಾಂವ್‌ ಮತ್ತು ಶಿವಾನಿ ನಿರೂಪಿಸಿದರು. ಶಶಿಕಲಾ ಕೆ.ಬಿರಾದಾರ್‌ ವಂದಿಸಿದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.