ಸಂಚಾರಕ್ಕೆ ಅಪಾಯಕಾರಿ ಈ ಹೆದ್ದಾರಿ!
ಬೀದರ್-ಹುಮನಾಬಾದ ರಸ್ತೆ ಅಧ್ವಾನ 2017ರಲ್ಲಿ ಆರಂಭವಾದ ಕಾಮಗಾರಿ ವರ್ಷದಿಂದ ಸ್ಥಗಿತ
Team Udayavani, Nov 23, 2019, 10:46 AM IST
ಶಶಿಕಾಂತ ಕೆ.ಭಗೋಜಿ
ಹುಮನಾಬಾದ: ಸುಗಮ ಸಂಚಾರಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೆದ್ದಾರಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದರಿಂದ ವಾಹನ ಸವಾರರು ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ. 2017ರಲ್ಲಿ 242.56 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ-65 ವರೆಗಿನ 47.3 ಕಿ.ಮೀ. ಉದ್ದದ ರಸ್ತೆ ಕಾಮಗಾರಿ ನಿಯಮಾನುಸಾರ 2019ರ ಜನವರಿ ತಿಂಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಈವರೆಗೆ ಕೇವಲ ಶೇ.75ರಷ್ಟು ಮಾತ್ರ
ಕಾಮಗಾರಿ ಪೂರ್ಣಗೊಂಡಿದ್ದು, ಕಿರು ಸೇತುವೆ ಒಳಗೊಂಡಂತೆ ಬಾಕಿ ಉಳಿದ ಕಾಮಗಾರಿ ಒಂದು ವರ್ಷದಿಂದ ಸಂಪೂರ್ಣ ಸ್ಥಗಿತಗೊಂಡಿದೆ. ಆ ಮಾರ್ಗದಿಂದ ಬೀದರ್ ಹಾಗೂ ಹುಮನಾಬಾದ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ವಿವಿಧ ಕೆಲಸಗಳಿಗಾಗಿ ತೆರಳುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಅಪಘಾತದಿಂದ ಅನೇಕರಿಗೆ ಗಾಯ: ಈ ಮಾರ್ಗದಿಂದ ತೆರಳುವ ಅದೆಷ್ಟೋ ದ್ವಿಚಕ್ರ ವಾಹನ ಸವಾರರು ಬಿದ್ದು ತಲೆ, ಕೈಕಾಲು ಗಂಭೀರ ಗಾಯಗೊಂಡಿದ್ದಲ್ಲದೇ ಮೃತಪಟ್ಟಿದ್ದೂ ಇದೆ. ಇಷ್ಟೆಲ್ಲ ಅವಘಡ ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ಮಾತ್ರ ಗಮನಹರಿಸುತ್ತಿಲ್ಲ ಎಂಬುದಕ್ಕೆ ಈವರೆಗೆ ಸಂಭವಿಸಿರುವ ಘಟನೆಗಳೆ ನಿದರ್ಶನ.
ಜಿಲ್ಲೆಯ ಸಂಸದ, ಸಚಿವರು ಹಾಗೂ ಶಾಸಕರೂ ಒಳಗೊಂಡಂತೆ ವಿವಿಧ ಹಂತದ ಚುನಾಯಿತ ಪ್ರತಿನಿಧಿ ಗಳು ಈ ಮಾರ್ಗದಿಂದಲೇ ಬೀದರ್ ಗೆ ತೆರಳುತ್ತಾರೆ. ಆದರೆ ನನೆಗುದಿಗೆ ಬಿದ್ದ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸದಿರುವುದು ನೋವಿನ ಸಂಗತಿ.
ಈ ಕುರಿತು ಮೇಲಧಿಕಾರಿಗಳನ್ನು ಸಂಪರ್ಕಿಸಿದರೆ ಗುತ್ತಿಗೆದಾರರು ಮಧ್ಯದಲ್ಲೇ ಕೆಲಸ ಸ್ಥಗಿತಗೊಳಿಸಿ ಹೋಗಿದ್ದರಿಂದ ಕಾರ್ಯ ನನೆಗುದಿಗೆ ಬಿದ್ದಿದೆ. ನಿಯಮಾನುಸಾರ ಹೊಸದಾಗಿ ಟೆಂಡರ್ ಕರೆಯಬೇಕು. ಪ್ರಕ್ರಿಯೆ ಪೂರ್ಣಗೊಂಡ ನಂತರ ಆ ಗುತ್ತಿಗೆದಾರರು ಕೆಲಸ ಆರಂಭಿಸಬೇಕು. ಎಲ್ಲವೂ ಅಂದುಕೊಂಡಂತೆ ನಡೆದರೆ ಕನಿಷ್ಟ 7 ತಿಂಗಳು ಬೇಕು ಎನ್ನುತ್ತಾರೆ.
ಹೊಸ ಗುತ್ತಿಗೆದಾರರು ಕೆಲಸ ಪಡೆದು ಕೆಲಸ ಆರಂಭಿಸಲು ಬಹುತೇಕ ವಿಳಂಬವಾಗುವ ಸಾಧ್ಯತೆಗಳಿವೆ. ಹಾಗೆಂದು ಸಂಬಂಧಪಟ್ಟವರು ಕೈಕಟ್ಟಿ ಕುಳಿತುಕೊಳ್ಳುವ ಹಾಗಿಲ್ಲ. ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಣಕ್ಕೆ ತರಲು ದುರುಸ್ತಿ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಲಬುರಗಿ ಇಇ ಕುಮಾರ ಅವರನ್ನು ವಿಚಾರಿಸಿದರೆ ಅದಕ್ಕಾಗಿ ತಗಲುವ 45 ಲಕ್ಷ ರೂ. ಅಂದಾಜು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳಿಸಲಾಗಿದೆ.
ಆ ಪ್ರಕ್ರಿಯೆಗೆ ಅನುಮೋದನೆ ಸಿಗುವುದು ತಿಳಿದುಕೊಂಡಷ್ಟು ಸರಳವಲ್ಲ. ಯಾವುದಕ್ಕೂ ಈ ಸಂಬಂಧ ಮೇಲ ಧಿಕಾರಿಗಳ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.