ಗುಣಮಟ್ಟವಿರದಿದ್ದರೆ ಕಪ್ಪು ಪಟ್ಟಿಗೆ
Team Udayavani, Nov 2, 2019, 6:35 PM IST
ಹುಮನಾಬಾದ: ಸರ್ಕಾರದಿಂದ ಬಿಡುಗಡೆಯಾದ
ಅನುದಾನದಲ್ಲಿ ಕೈಗೊಳ್ಳುವ ಕಾಮಗಾರಿ ಕಳಪೆ ಆಗಿರುವ ಕುರಿತು ಬರುವ ದೂರು ಸತ್ಯ ಎಂಬುದು ಖಚಿತವಾದಲ್ಲಿ ಅಂಥ ಗುತ್ತಿಗೆದಾರರನ್ನು ಮುಲಾಜಿಲ್ಲದೇ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಶಾಸಕ ರಾಜಶೇಖರ ಬಿ.ಪಾಟೀಲ ಎಚ್ಚರಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 1.28ಕೋಟಿ ರೂ. ವೆಚ್ಚದ ಎಂಟು ಹೆಚ್ಚುವರಿ ವರ್ಗ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರಿ ಪದವಿ ಕಾಲೇಜು ಇಲ್ಲದ ಸಂದರ್ಭದಲ್ಲಿ
2005ನೇ ಸಾಲಿನಲ್ಲಿ ಶಾಸಕರಾಗಿದ್ದ ದಿ.ಮೆರಾಜುದ್ದಿನ್ ಪಟೇಲ ಅವರು ಮಂಜೂರು ಮಾಡಿ ತಂದು ಸರ್ಕಾರದ ಹಳೆ ಕಟ್ಟಡದಲ್ಲೇ ವರ್ಗಗಳು ಆರಂಭಗೊಳ್ಳುವಂತೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಆ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ಅನುದಾನ ತಂದಿರಲಿಲ್ಲ.
2018ರಿಂದ ನಿರಂತರ ಶಾಸಕನಾಗಿ ಆಯ್ಕೆಗೊಂಡ ನಂತರ ಈವರೆಗೆ 45 ಕೋಟಿ ರೂ. ಅನುದಾನ ತಂದು ಕಟ್ಟಡ ನಿರ್ಮಾಣ ಆಗುವಂತೆ ನೋಡಿಕೊಂಡಿದ್ದೇನೆ. ಇದೀಗ ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಬೇಡಿಕೆ ಮೇರೆಗೆ ಬಿಡುಗಡೆಗೊಳಿಸಲಾದ 1.28 ಕೋಟಿ ರೂ. ವೆಚ್ಚದ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಿದ್ದೇನೆ ಎಂದರು.
ವಿಪಕ್ಷದ ಟೀಕೆ ಸಹಿಸಲಾಗದು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹುಮನಾಬಾದ ವಿಧಾನಸಭಾ ಕ್ಷೇತ್ರದಾದ್ಯಂತ ಕೈಗೊಳ್ಳುವ ಕಾಮಗಾರಿಗೆ ಶಾಸಕರು ಕೇವಲ ತಮ್ಮ ಕುಟುಂಬ ಸದಸ್ಯರು ಹಾಗೂ ತಮಗೆ ಬೇಕಾದವರಿಗೆ ಗುತ್ತಿಗೆ ಕೊಡಿಸುತ್ತಾರೆ. ಕಾಮಗಾರಿ ಕಳಪೆ ಆದರೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ವಿಪಕ್ಷದವರು ಅನಗತ್ಯ ಪತ್ರಿಕಾ ಹೇಳಿಕೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಅವರು ಮಾಡುವ ಅರೋಪ ಸತ್ಯವೇ ಆಗಿದ್ದರೆ ಅಗತ್ಯ ದಾಖಲೆಗಳ ಸಮೇತ ಸಾಬೀತುಪಡಿಸಲಿ ಎಂದು ಸೂಚಿಸಿದರು. ವಿಧಾನ ಪರಿಷತ್ ಸದಸ್ಯ ಡಾ|ಚಂದ್ರಶೇಖರ ಬಿ.ಪಾಟೀಲ, ತಹಶೀಲ್ದಾರ್ ನಾಗಯ್ಯಸ್ವಾಮಿ ಹಿರೇಮಠ್ , ತಾಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ, ಉಪಾಧ್ಯಕ್ಷೆ ಸುಗಂಧಾ ಅಣ್ಯಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ಸದಸ್ಯ ಮನೋಹರ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ|ವೀರಣ್ಣ ತುಪ್ಪದ್, ಬಿಇಒ ಶಿವರಾಚಪ್ಪ ವಾಲಿ, ಕಾಂಗ್ರೆಸ್ ಮುಖಂಡರಾದ ಡಿ.ಆರ್.ಚಿದ್ರಿ, ಮಲ್ಲಿಕಾರ್ಜುನ ಮಾಲಶೆಟ್ಟಿ, ಈಶ್ವರ ಕಲಬುರ್ಗಿ, ಸುರೇಶ ಘಾಂಗ್ರೆ, ಪ್ರಭುರಾವ್ ತಾಲಮಡಗಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.