ಕಬಿರಾಬಾದವಾಡಿಗೆ ಬೇಕು ಚರಂಡಿ ಸೌಲಭ್ಯ
ಗ್ರಾಮದಲ್ಲಿ ರಸ್ತೆಗೆ ಹರಿದು ಪಾಚಿಗಟ್ಟಿದ ಮಲೀನ ನೀರು-ರೋಗ ಭೀತಿ
Team Udayavani, Apr 26, 2019, 10:21 AM IST
ಹುಮನಾಬಾದ: ಬೇನಚಿಂಚೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಬಿರಾಬಾದವಾಡಿ ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕ ತ್ಯಾಜ್ಯ, ಮಲಿನ ನೀರು ರಸ್ತೆ ಮಧ್ಯದಲ್ಲಿ ಸಂಗ್ರಹಗೊಂಡು ಗ್ರಾಮಸ್ಥರಲ್ಲಿ ರೋಗಭೀತಿ ಸೃಷ್ಟಿಸಿದೆ.
ಸುಮಾರು 3 ಸಾವಿರ ಜನಸಂಖ್ಯೆ, 5 ಜನ ಗ್ರಾಮ ಪಂಚಾಯಿತಿ ಸದಸ್ಯರನ್ನು ಹೊಂದಿರುವ ಗ್ರಾಮದ ಬಹುತೇಕ ಓಣಿಗಳಲ್ಲಿ ಸಿಮೇಂಟ್ ರಸ್ತೆ ನಿರ್ಮಿಸಲಾಗಿದೆ. ಆದರೆ ಗ್ರಾಮಸ್ಥರಿಗೆ ಅತ್ಯವಶ್ಯಕವಾಗಿರುವ ಚರಂಡಿ ನಿರ್ವಹಣೆ ದೋಷದಿಂದಾಗಿ ಸ್ವಚ್ಛತೆ ಕೊರತೆ ಕಾಡುತ್ತಿದೆ. ಬೊಮ್ಮಗೊಂಡೇಶ್ವರ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆಯಷ್ಟೆ ನಿರ್ಮಿಸಿದ್ದ ಚರಂಡಿಗಳಲ್ಲಿ ಮಣ್ಣು, ಕಸಕಡ್ಡಿ ತುಂಬಿ ಮುಚ್ಚಿ ಹೋಗಿದ್ದು, ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿಲ್ಲ. ಇದರಿಂದ ಗ್ರಾಮದ ನಿವಾಸಿಗಳ ತ್ಯಾಜ್ಯ, ಮಲಿನ ನೀರು ರಸ್ತೆಮಧ್ಯದಲ್ಲಿ ಪಾಚಿಕಟ್ಟಿ ರೋಗಭೀತಿಗೆ ಕಾರಣವಾಗಿದೆ.
ಊರಿನ ಹನುಮಾನ ದೇವಸ್ಥಾನ ಹಾಗೂ ಬೊಮ್ಮಗೋಂಡೆಶ್ವರ ವೃತ್ತದಲ್ಲಿ ವರ್ಷದ ಹಿಂದೆ ಲಕ್ಷಾಂತ ರೂ. ವೆಚ್ಚ ಮಾಡಿ ಅಳವಡಿಸಿದ್ದ ಹೈಮಾಸ್ಟ್ ದೀಪಗಳು ಬೆಳಕು ನೀಡುತಿಲ್ಲ. ಈ ಕುರಿತು ಪಿಡಿಒ ಹಾಗೂ ಪಂಚಾಯಿತಿ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದ ಕಾರಣ ಮಹಿಳೆಯರು, ಮಕ್ಕಳು ರಾತ್ರಿ ವೇಳೆ ಕತ್ತಲಲ್ಲೇ ಅಲೆದಾಡಬೇಕಾದ ಸ್ಥಿತಿ ಅನಿವಾರ್ಯವಾಗಿದೆ. ಮಳೆಗಾಲ, ಬೇಸಿಗೆಯಲ್ಲಿ ಯಾವುದಾದರೂ ಊರುಗಳಿಗೆ ತೆರಳುವ ಮುನ್ನ ಬಸ್ ಬರುವವರೆಗೆ ವಿಶ್ರಾಂತಿ ಪಡೆಯಲು ಒಂದು ತಂಗುದಾಣ ಇಲ್ಲದ್ದರಿಂದ ಮಳೆಗಾಲದಲ್ಲಿ ಮಳೆ, ಬೇಸಿಗೆಯಲ್ಲಿ ಕಡು ಬಿಸಿಲಲ್ಲೇ ಕುಳಿತುಕೊಳ್ಳಬೇಕಾದ ಸ್ಥಿತಿ ಇದೆ.
ಪಾಳುಬಿದ್ದ ಶುದ್ಧ ನೀರಿನ ಘಟಕ: ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧ ಕ್ಷೇತ್ರದ ಶಾಸಕರ ಸಲಹೆ ಮೇರೆಗೆ ಅಳವಡಿಸಬೇಕಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕೇವಲ ಶೆಡ್ ನಿರ್ಮಿಸುವುದಕ್ಕೆ ಸೀಮಿತವಾಗಿದೆ. ಘಟಕ ಪೂರ್ಣಗೊಳ್ಳದೇ ನನೆಗುದಿಗೆ ಬಿದ್ದಿದ್ದು, ಅಪೂರ್ಣ ಕಾಮಗಾರಿಯನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕಿದೆ. ಶುದ್ಧ ಕುಡಿಯುವ ನೀರು ಪೂರೈಸುವ ಮೂಲಕ ಮಳೆಗಾಲದಲ್ಲಿ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸಂಬಂಧಪಟ್ಟವರು ಹಿಂದೆಂದಿಗಿಂತಲೂ ಈಗ ಹೆಚ್ಚು ಮುತುವರ್ಜಿ ವಹಿಸಬೇಕಿದೆ.
ಊರಿನ ಐದು ಜನ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮುಂದಾಗಬೇಕು ಎಂಬುದು ಸಾರ್ವಜನಿಕರ ಒತ್ತಾಸೆ.
ಗ್ರಾಮದಲ್ಲಿ ನಿರ್ಮಿಸಿದ ಚರಂಡಿ ತ್ಯಾಜ್ಯ ತುಂಬಿ ಮುಚ್ಚಿವೆ. ಸಂಬಂಧಿಸಿದವರು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರ ಆರೋಗ್ಯ ಕಾಪಾಡಲು ಅಗತ್ಯವಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಪ್ರಯಾಣಿಕರ ಆಶ್ರಯಕ್ಕಾಗಿ ತಂಗುದಾಣ ನಿರ್ಮಿಸಬೇಕು.
• ಮಹೇಶ, ಗ್ರಾಮಸ್ಥ
•ಶಶಿಕಾಂತ ಕೆ.ಭಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.